– 139 ಸಾಧಕರಿಗೆ ಪದ್ಮ ಪ್ರಶಸ್ತಿ
– 5,000 ಕಲಾವಿದರಿಂದ ಸಾಂಸ್ಕೃತಿಕ ಮೆರವಣಿಗೆ
ನವದೆಹಲಿ: ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ಬೆಂಗಳೂರು ಸೇರಿದಂತೆ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಇಂದು ದೆಹಲಿಯ ಕರ್ಥವ್ಯ ಪಥದಲ್ಲಿ ಆಕರ್ಷಕ ಪಥ ಸಂಚಲನ ನಡೆಯಲಿದೆ.
76ನೇ ಗಣರಾಜೋತ್ಸವ ಆಚರಣೆಗೆ ದೆಹಲಿಯ ಕೆಂಪುಕೋಟೆ ಸಜ್ಜಾಗಿದ್ದು, ಪರೇಡ್‌ನಲ್ಲಿ ದೇಶದ ಮಿಲಿಟರಿ ಶಕ್ತಿ ಜೊತೆಗೆ ದೇಶದ ಭವ್ಯ ಪರಂಪರೆ, ಸಂಸ್ಕೃತಿಯ ಅನಾವರಣ ಆಗಲಿದೆ. ಕರ್ನಾಟಕದ ಲಕ್ಕುಂಡಿ ಶಿಲ್ಪಕಲೆಯ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕಾಣಿಸಿಕೊಳ್ಳಲಿದೆ.
Advertisement
Advertisement
ಈ ಬಾರಿ ಸುವರ್ಣ ಭಾರತ, ಪರಂಪರೆ ಮತ್ತು ಅಭಿವೃದ್ಧಿ ಥೀಮ್‌ನಲ್ಲಿ ಗಣರಾಜೋತ್ಸವ ಆಚರಣೆ ಮಾಡಲಾಗುತ್ತಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಸಮ್ಮುಖದಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರು ಭಾಗಿಯಾಗಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ವಿಶೇಷ ಅತಿಥಿ ಇಂಡೋನೇಷ್ಯಾ ಅಧ್ಯಕ್ಷರು ಸೇರಿ ಇತರ ಗಣ್ಯರು ಸಾಕ್ಷಿಯಾಗಲಿದ್ದಾರೆ. 10,000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಜೊತೆಗೆ ಇದೇ ಮೊದಲಬಾರಿಗೆ 5,000 ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ.
Advertisement
Advertisement
ಹೇಗಿದೆ ಭದ್ರತೆ?
ಪರೇಡ್‌ನಲ್ಲಿ 15 ರಾಜ್ಯಗಳು, ಕೇಂದ್ರಾಳಿತ ಪ್ರದೇಶಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳಿಂದ ಸ್ತಬ್ಧಚಿತ್ರ ಪ್ರದರ್ಶನ, ಹತ್ತು ಸಾವಿರಕ್ಕೂ ಅಧಿಕ ವಿಶೇಷ ಅತಿಥಿಗಳು, ಒಂದು ಲಕ್ಷಕ್ಕೂ ಅಧಿಕ ಮಂದಿ ಸಾಕ್ಷಿಯಾಗಲಿದ್ದಾರೆ. ಹಾಗಾಗಿ ಕರ್ತವ್ಯ ಪಥದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, 15,000ಕ್ಕೂ ಅಧಿಕ ಪೊಲೀಸರು, 70 ಪ್ಯಾರಾ ಮಿಲಿಟರಿ ಕಂಪನಿಗಳ ನಿಯೋಜನೆ ಮಾಡಲಾಗಿದೆ.
ಒಟ್ಟು 6 ಹಂತಗಳಲ್ಲಿ ಭದ್ರತೆಯನ್ನು ಮಾಡಿಕೊಳ್ಳಲಾಗಿದ್ದು, ಎಲ್ಲ ಕಡೆಗಳಲ್ಲಿಯೂ ಸಿಸಿಟಿವಿ ಕ್ಯಾಮೆರಾ, 500 ಎಐ ಕ್ಯಾಮೆರಾಗಳ ಅಳವಡಿಸಲಾಗಿದೆ. 40 ಅಧಿಕ ಕಂಟ್ರೋಲ್ ರೂಂಗಳಿಂದ ಇಡೀ ಕಾರ್ಯಕ್ರಮದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ.
139 ಸಾಧಕರಿಗೆ ಪದ್ಮ ಪ್ರಶಸ್ತಿ:
ಗಣರಾಜ್ಯೋತ್ಸವದ ಮುನ್ನಾದಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಯಿತು. ಇದರ ಅಡಿಯಲ್ಲಿ, ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗೆ ಪಾತ್ರರಾಗುವ ವ್ಯಕ್ತಿಗಳ ಹೆಸರನ್ನು ಘೋಷಿಸಲಾಯಿತು. ಈ ಬಾರಿ ರಾಷ್ಟ್ರಪತಿಗಳು 139 ಪದ್ಮ ಪ್ರಶಸ್ತಿಗಳನ್ನು ಅನುಮೋದಿಸಿದ್ದಾರೆ.
ಪಟ್ಟಿಯಲ್ಲಿ ಏಳು ಪದ್ಮವಿಭೂಷಣ ಮತ್ತು 19 ಪದ್ಮಭೂಷಣ ಪ್ರಶಸ್ತಿಗಳು ಸೇರಿವೆ. ಇದಲ್ಲದೇ, 113 ಪದ್ಮಶ್ರೀ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 23 ಮಹಿಳೆಯರು ಸೇರಿದ್ದಾರೆ. ಈ ಪಟ್ಟಿಯಲ್ಲಿ 10 ವಿದೇಶಿಯರು, NRIಗಳು, ಪಿಐಒಗಳು, ಒಸಿಐ ವರ್ಗದ ವ್ಯಕ್ತಿಗಳು ಸೇರಿದ್ದಾರೆ. ಅದೇ ಸಮಯದಲ್ಲಿ, 13 ಮರಣೋತ್ತರ ಪ್ರಶಸ್ತಿಗಳನ್ನು ಸಹ ಘೋಷಿಸಲಾಗಿದೆ. ಇದರಲ್ಲಿ ಭೋಜ್‌ಪುರಿ ಗಾಯಕಿ ಶಾರದಾ ಸಿನ್ಹಾ (ಮರಣೋತ್ತರ), ನ್ಯಾಯಮೂರ್ತಿ (ನಿವೃತ್ತ) ಜಗದೀಶ್ ಸಿಂಗ್ ಖೇಹರ್ ಮತ್ತು ಸುಜುಕಿ ಕಂಪನಿಯ ಒಸಾಮು ಸುಜುಕಿ (ಮರಣೋತ್ತರ), ಬಿಬೇಕ್ ಡೆಬ್ರಾಯ್, ಸುಶೀಲ್ ಮೋದಿ ಮತ್ತು ಮನೋಹರ್ ಜೋಶಿ (ಮರಣೋತ್ತರ) ಅವರ ಹೆಸರುಗಳು ಸೇರಿವೆ. ಪ್ರಮುಖವಾಗಿ ತಮಿಳು ನಟ ಅಜಿತ್ ಕುಮಾರ್ ಹಾಗೂ ತೆಲುಗು ನಟ ನಂದಮೂರಿ ಬಾಲಕೃಷ್ಣ ಅವರಿಗೆ ಪದ್ಬಭೂಷಣ, ಟೀಂ ಇಂಡಿಯಾದ ನಿರ್ಗಮಿತ ಸ್ಟಾರ್ ಆಟಗಾರ ಆರ್. ಅಶ್ವಿನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ.