– ರೋಚಕ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ 1 ವಿಕೆಟ್ ಜಯ, ಪಾಕ್‌ಗೆ ವಿರೋಚಿತ ಸೋಲು
ಕ್ಯಾನ್ಬೆರಾ: 2023ರ ಏಕದಿನ ವಿಶ್ವಕಪ್ ಫೈನಲ್(World Cup 2023) ರೋಚಕ ಹಣಾ-ಹಣಿಯಲ್ಲಿ ಆಸ್ಟ್ರೇಲಿಯಾ ತಂಡ ಭಾರತವನ್ನು ಮಣಿಸಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿದಿತ್ತು. ಇದೀಗ ಅಂಡರ್-19 ವಿಶ್ವಕಪ್ (Under-19 World Cup )ಟೂರ್ನಿಯಲ್ಲೂ ಮತ್ತೆ ಭಾರತಕ್ಕೆ ಆಸೀಸ್ ಎದುರಾಳಿಯಾಗಿದ್ದು, ವಿಶ್ವಕಪ್ ಕ್ಷಣಗಳನ್ನು ನೆನಪಿಸುವಂತೆ ಮಾಡಿದೆ.
Advertisement
ಇಲ್ಲಿನ ಬೆನೋನಿಯಲ್ಲಿರುವ ವಿಲೋಮೂರ್ ಪಾರ್ಕ್ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ (Australia Under 19s) ತಂಡ ಒಂದು ವಿಕೆಟ್‌ಗಳಿಂದ ಪಾಕ್ ತಂಡವನ್ನು ಸೋಲಿಸಿ, ಫೈನಲ್ ಪ್ರವೇಶಿಸಿದೆ. ಭಾನುವಾರ (ಫೆ.11) ಮಧ್ಯಾಹ್ನ 1:30ರ ವೇಳೆಗೆ ಆಸ್ಟ್ರೇಲಿಯಾ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ಭಾರತ – ಆಸೀಸ್ ಯುವಕರ ತಂಡ ಸೆಣಸಲಿವೆ. ಇದನ್ನೂ ಓದಿ: India vs England 2nd Test: 255 ಕ್ಕೆ ಭಾರತ ಆಲೌಟ್, ಇಂಗ್ಲೆಂಡ್‌ಗೆ 399 ರನ್ ಗುರಿ
Advertisement
Advertisement
ಆಸೀಸ್ ವಿರುದ್ಧ ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ಪಾಕಿಸ್ತಾನ ತಂಡ 48.5 ಓವರ್‌ಗಳಲ್ಲಿ ಕೇವಲ 179 ರನ್‌ಗಳಿಗೆ ಸರ್ವಪತನ ಕಂಡಿತು. 180 ರನ್‌ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡ 49.1 ಓವರ್‌ಗಳಲ್ಲಿ 9 ವಿಕೆಟ್‌ನಷ್ಟಕ್ಕೆ 181 ರನ್ ಗಳಿಸಿ ರೋಚಕ ಜಯ ಸಾಧಿಸಿತು. ಪಾಕಿಸ್ತಾನ ಪರ ಅಜಾನ್ ಅವೈಸ್ 91 ಎಸೆತಗಳಲ್ಲಿ 52 ರನ್, ಅರಾಫತ್ ಮಿನ್ಹಾಸ್ 61 ಎಸೆತಗಳಲ್ಲಿ 51 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಹೆಚ್ಚುಹೊತ್ತು ಕ್ರೀಸ್‌ನಲ್ಲಿ ನೆಲೆಯೂರಲು ವಿಫಲರಾದ ಕಾರಣ ಪಾಕ್ ಅಲ್ಪಮೊತ್ತಕ್ಕೆ ಔಟಾಗಿ ಸೋಲನುಭವಿಸಿತು. ಇದನ್ನೂ ಓದಿ: ಡೇವಿಸ್ ಕಪ್‍ನಲ್ಲಿ ಕೊಡಗಿನ ಯುವಕನ ಸಾಧನೆ – ವರ್ಲ್ಡ್ ಕಪ್ 1ರಲ್ಲಿ ಸ್ಥಾನ ಗಿಟ್ಟಿಸಿಕೊಂಡ ಭಾರತ
Advertisement
ಟಾಮ್ ಸ್ಟ್ರಾಕರ್‌ಗೆ 6 ವಿಕೆಟ್:
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡ ಆಸೀಸ್ ಆರಂಭದಿಂದಲೇ ಪಾಕ್ ಬ್ಯಾಟರ್‌ಗಳನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಆಸೀಸ್ ಪರ 9.5 ಓವರ್‌ಗಳಲ್ಲಿ ಕೇವಲ 24 ರನ್ ಬಿಟ್ಟುಕೊಟ್ಟ ಟಾಮ್ ಸ್ಟ್ರಾಕರ್ 6 ವಿಕೆಟ್ ಪಡೆದು ಮಿಂಚಿದರು. ಇನ್ನುಳಿದಂತೆ ಮಾಹ್ಲಿ ಬಿಯರ್ಡ್‌ಮನ್, ಕ್ಯಾಲಮ್ ವಿಡ್ಲರ್, ರಾಫ್ ಮ್ಯಾಕ್‌ಮಿಲನ್, ಟಾಮ್ ಕ್ಯಾಂಪ್‌ಬೆಲ್ ತಲಾ ಒಂದೊಂದು ವಿಕೆಟ್ ಪಡೆದು ಮಿಂಚಿದರು.
ಇನ್ನೂ ಪಾಕಿಸ್ತಾನ ಪರ ಬೌಲಿಂಗ್‌ನಲ್ಲಿ ಅಲಿ ರಾಝಾ 10 ಓವರ್‌ಗಳಲ್ಲಿ 34 ರನ್ ಬಿಟ್ಟುಕೊಟ್ಟು ನಾಲ್ಕು ವಿಕೆಟ್ ಪಡೆದು ಆಸೀಸ್ ಪಡೆಯನ್ನ ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದರು. ಆದ್ರೆ ಮೊಹಮ್ಮದ್ ಜೀಶಾನ್ ಅವರ ದುಬಾರಿ ಓವರ್‌ನಿಂದಾಗಿ ಪಾಕ್ ವಿರೋಚಿತ ಸೋಲಿಗೆ ತುತ್ತಾಯಿತು. ಪಾಕ್ ಪರ ಅರಾಫತ್ ಮಿನ್ಹಾಸ್ 2 ವಿಕೆಟ್ ಕಿತ್ತರೆ, ಉಬೈದ್ ಶಾ, ನವೀದ್ ಅಹ್ಮದ್ ಖಾನ್ ತಲಾ ಒಂದೊಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.
ಡಿಕ್ಸನ್ ಜವಾಬ್ದಾರಿಯುತ ಅರ್ಧಶತಕ :
180 ರನ್‌ಗಳ ಗುರಿ ಬೆನ್ನತಿದ್ದ ಆಸೀಸ್ ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳಲು ಶುರು ಮಾಡಿತು. ಈ ವೇಳೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ಹ್ಯಾರಿ ಡಿಕ್ಸನ್ 75 ಎಸೆತಗಳಲ್ಲಿ ಜವಾಬ್ದಾರಿಯುತ ಅರ್ಧಶತಕ ಗಳಿಸಿದರು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಆಲಿವರ್ ಪೀಕ್ 49 ರನ್‌ಗಳ ಕೊಡುಗೆ ನೀಡುವ ಮೂಲಕ ತಂಡಕ್ಕೆ ಆಸರೆಯಾದರು. ಇದನ್ನೂ ಓದಿ: