ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ – ಇಂದು ಭೂಮಿಕ್ ಅಂತ್ಯಕ್ರಿಯೆ

Public TV
1 Min Read
Chinnaswamy Stadium Stampede Bhumik Hassan

ಬೆಂಗಳೂರು/ಹಾಸನ: ಬುಧವಾರ ಆರ್‌ಸಿಬಿ (RCB) ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ನಡೆದ ಕಾಲ್ತುಳಿತದಲ್ಲಿ (Stampede) ಮೃತಪಟ್ಟ ಹಾಸನ ಮೂಲದ ಭೂಮಿಕ್ ಅಂತ್ಯಕ್ರಿಯೆ ಇಂದು (ಗುರುವಾರ) ನಡೆಯಲಿದೆ.

ಭೂಮಿಕ್ ಹುಟ್ಟೂರಾದ ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ಕುಪ್ಪುಗೋಡು ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭೂಮಿಕ್ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆಗೆ ಭೂಮಿಕ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

ಭೂಮಿಕ್ ಡಿ.ಟಿ.ಲಕ್ಷ್ಮಣ-ಅಶ್ವಿನಿ ದಂಪತಿಯ ಏಕೈಕ ಪುತ್ರ. ಕಳೆದ ಇಪ್ಪತ್ತು ವರ್ಷಗಳಿಂದ ಡಿ.ಟಿ.ಲಕ್ಷ್ಮಣ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಡಿ.ಟಿ.ಲಕ್ಷ್ಮಣ ಬೆಂಗಳೂರಿನಲ್ಲಿ ಸಣ್ಣ ಕೈಗಾರಿಕೆ ನಡೆಸುತ್ತಿದ್ದಾರೆ. ಭೂಮಿಕ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದು ಬುಧವಾರ ಕೂಡ ಕಾಲೇಜಿಗೆ ತೆರಳಿದ್ದರು. ನಂತರ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ದು, ಕಾಲ್ತುಳಿತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

Share This Article