Stampede Case | ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ

Public TV
2 Min Read
BJP MP Govind Karjol slams Waqf Board for claiming rights over 15000 acres of ancestral land of farmers

– ಆರ್‌ಸಿಬಿ ವಿಸ್ಕಿ ಕಂಪನಿ ಎಂದ ಬಿಜೆಪಿ ಸಂಸದ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ (Chinnaswamy Stadium Stampede) ಪ್ರಕರಣಕ್ಕೆ ರಾಜ್ಯ ಸರ್ಕಾರವೇ ಕಾರಣ. ಸಿಎಂ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ಕೊಡಬೇಕು ಸಂಸದ ಗೋವಿಂದ್ ಕಾರಜೋಳ (Govind Karjol) ಆಗ್ರಹಿಸಿದ್ದಾರೆ.

ಬಿಜೆಪಿ ಕಚೇರಿಯಲ್ಲಿ (BJP Office) ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ದುರಂತಕ್ಕೆ ನೇರವಾಗಿ ಸರ್ಕಾರವೇ ಕಾರಣ. RCB ವಿಸ್ಕಿ ಮಾರಾಟದ ಕಂಪನಿ. ಲಲಿತ್ ಮೋದಿ ಮತ್ತು ವಿಜಯ್ ಮಲ್ಯ ಇಬ್ಬರೂ ಆರ್ಥಿಕ ಅಪರಾಧಿಗಳು. ಅಂತಹ ಕಂಪನಿಗಳನ್ನು ತಲೆ ಮೇಲೆ ಎತ್ತಿಕೊಂಡು ಸಿದ್ದರಾಮಯ್ಯ (Siddaramaiah) ಬ್ರಾಂಡ್ ಅಂಬಾಸಿಡರ್ ಆಗಿದ್ದಾರೆ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Chinnaswamy Stampede

ಅಲ್ಲದೇ ವಿಜಯೋತ್ಸವ ವಿಚಾರದಲ್ಲಿ ಆಲೋಚನೆ ಮಾಡಿ ಸರ್ಕಾರ ಮುಂದುವರಿಯಬೇಕಿತ್ತು ಅಂತ ಸರ್ಕಾರದ ವಿರುದ್ದ ಕಾರಜೋಳ ಕಿಡಿಕಾರಿದ್ದಾರೆ. ಇದನ್ನೂ ಓದಿ: 11 ಅಮಾಯಕ ಜೀವಗಳ ಬಲಿ ಪಡೆದು ಈ ಸರ್ಕಾರ ಪಾಪಕ್ಕೆ ಗುರಿಯಾಗಿದೆ: ಸೋಮಣ್ಣ

ಏನಿದು ಪ್ರಕರಣ?
ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು. ಇದನ್ನೂ ಓದಿ: ಆತುರದ ನಿರ್ಧಾರದಿಂದ ತಪ್ಪು ಮಾಡಿದ್ದೇವೆ, ತಡವಾಗಿ ವಿಜಯೋತ್ಸವ ಆಚರಣೆ ಮಾಡ್ಬೋದಿತ್ತು: ಇಕ್ಬಾಲ್ ಹುಸೇನ್

ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ: ಅರಗ ಜ್ಞಾನೇಂದ್ರ

Share This Article