CinemaKarnatakaLatestMain PostSandalwood

ಸ್ಟಾರ್ ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ನಿಧನ

ಟಾಲಿವುಡ್ (Tollywood) ನ ಖ್ಯಾತ ಸ್ಟಾರ್ ನಟ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ (Indira Devi) ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ಇಂದಿರಾ ಅವರನ್ನು ಹೈದರಾಬಾದ್ ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ಅನಾರೋಗ್ಯದ ಕಾರಣಕ್ಕಾಗಿ ವೆಂಟಿಲೇಟರ್ ನಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿತ್ತು. ಬೆಳಗ್ಗೆ ನಾಲ್ಕು ಗಂಟೆ ಹೊತ್ತಿಗೆ ಚಿಕಿತ್ಸೆ ಫಲಕಾರಿ ಆಗದೇ ಇಹಲೋಕ (Passed Away) ತ್ಯಜಿಸಿದ್ದಾರೆ.

ಇಂದಿರಾ ಅವರ ಅಂತಿಮ ದರ್ಶನಕ್ಕಾಗಿ ಪದ್ಮಾಲಯ ಸ್ಟುಡಿಯೋಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಸಂಜೆವರೆಗೂ ಅಭಿಮಾನಿಗಳು ಅಂತಿಮ ದರ್ಶನ ಮಾಡಬಹುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸೂಪರ್ ಸ್ಟಾರ್ ಕೃಷ್ಣ (Krishna) ಅವರ ಪತ್ನಿ ಆಗಿರುವ ಇಂದಿರಾ, ಪತಿ ಮತ್ತು ಮಕ್ಕಳು ಸಿನಿಮಾ ರಂಗದಲ್ಲಿ ಬೆಳೆಯಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಅವರಿಗೆ ಬೆನ್ನೆಲುಬಾಗಿ ನಿಂತು, ಪ್ರೋತ್ಸಾಹಿಸಿದ್ದಾರೆ. ಹಾಗಾಗಿ ಪತಿ ಮತ್ತು ಮಕ್ಕಳ ಅಭಿಮಾನಿಗಳು ಕೂಡ ಇಂದಿರಾ ಅವರನ್ನು ಅಷ್ಟೇ ಗೌರವದಿಂದ ಕಾಣುತ್ತಿದ್ದರು. ಇದನ್ನೂ ಓದಿ:ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಸಿನಿಮಾದ ಟೈಟಲ್ ಲಾಂಚ್ ಗೆ ಮುಹೂರ್ತ ಫಿಕ್ಸ್

ಇಂದಿರಾ ದೇವಿ ಅವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಈಗಾಗಲೇ ಮಹೇಶ್ ಬಾಬು (Mahesh Babu) ಅವರ ನಿವಾಸದತ್ತ ಸಿನಿಮಾ ರಂಗದ ಸಾಕಷ್ಟು ಗಣ್ಯರು ಆಗಮಿಸಿದ್ದು, ಸಂತಾಪ ಸೂಚಿಸುತ್ತಿದ್ದಾರೆ. ಇಂದಿರಾ ಅವರ ಅಂತಿಮ ಸಂಸ್ಕಾರ ಇಂದು ಸಂಜೆ ನೆರವೇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Live Tv

Leave a Reply

Your email address will not be published. Required fields are marked *

Back to top button