ಮೂರು ಯುಗದ ಕಥೆ ಹೇಳಲಿದ್ದಾರೆ ಸ್ಟಾರ್ ನಟ ಟೋವಿನೊ

Public TV
1 Min Read
ARM 1

ಲಯಾಳಂ (Malayalam)ಚಿತ್ರರಂಗದಲ್ಲಿ ಹೀರೋಗಿರಿಯ ಸಿನಿಮಾಗಳಿಗೆ ಕಟ್ಟು ಬೀಳದೆ ತಮ್ಮದೇ ಆದ ಮಾದರಿಯಲ್ಲಿ ಸಿನಿಮಾಗಳನ್ನು ಮಾಡುತ್ತಿರುವ ಸ್ಟಾರ್ ನಟ ಟೋವಿನೊ ಥಾಮಸ್ (Tovino Thomas). ಒಂದರ ಮೇಲೊಂದು ಹಿಟ್ ಸಿನಿಮಾ ನೀಡುವ ಜೊತೆಗೆ ಅಭಿಮಾನಿಗಳನ್ನೂ ಸಹ ಸಂಪಾದಿಸುತ್ತಾ ಸಾಗುತ್ತಿರುವ  ಈ ತಾರೆಗಿಂದು ಜನ್ಮದಿನದ ಸಂಭ್ರಮ. ಟೋವಿನೋ ಥಾಮಸ್ ಹುಟ್ಟಹಬ್ಬಕ್ಕೆ ARM ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಲಾಗಿದೆ.

ARM 2

AMR ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಜಿತಿಲ್ ಲಾಲ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮ್ಯಾಜಿಕ್ ಫ್ರೇಮ್ಸ್ ಮತ್ತು ಯುಜಿಎಂ ಮೋಷನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ಸಂಪೂರ್ಣ 3ಡಿಯಲ್ಲಿ AMR ಚಿತ್ರ ತಯಾರಾಗಲಿದ್ದು, ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿ ದೊಡ್ಡ ಬಜೆಟ್ ಸಿನಿಮಾ ಇದಾಗಿದೆ.

ARM 3

AMR ಸಿನಿಮಾ 3 ಯುಗಗಳ ಕಥೆ ಹೇಳುತ್ತದೆ. ಟೋವಿನೋ ಥಾಮಸ್, ಮಣಿಯನ್, ಅಜಯನ್ ಮತ್ತು ಕುಂಜಿಕೇಲು ಎಂಬ 3 ವಿಭಿನ್ನ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ದೃಶ್ಯ ವೈಭೋಗದಲ್ಲಿ ಮೂಡಿ ಬರಲಿರುವ ಈ ಚಿತ್ರ ಮಲಯಾಳಂ, ಹಿಂದಿ, ಇಂಗ್ಲಿಷ್, ತಮಿಳು, ತೆಲುಗು ಮತ್ತು ಕನ್ನಡ – 6 ಭಾಷೆಗಳಲ್ಲಿ ತಯಾರಾಗಲಿದೆ.

ಕೃತಿ ಶೆಟ್ಟಿ, ಐಶ್ವರ್ಯ ರಾಜೇಶ್ ಮತ್ತು ಸುರಭಿ ಲಕ್ಷ್ಮಿ ನಾಯಕಿಯರಾಗಿ ನಟಿಸುತ್ತಿದ್ದು, ಪ್ರಮುಖ ನಟರಾದ ಬಾಸಿಲ್ ಜೋಸೆಫ್, ಜಗದೀಶ್, ಹರೀಶ್ ಉತ್ತಮನ್, ಹರೀಶ್ ಪೆರಾಡಿ, ಪ್ರಮೋದ್ ಶೆಟ್ಟಿ ಮತ್ತು ರೋಹಿಣಿ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಸುಜಿತ್ ನಂಬಿಯಾರ್ ಚಿತ್ರಕಥೆಯನ್ನು ಬರೆದಿದ್ದಾರೆ ಮತ್ತು ದಿಬು ನೈನನ್ ಥಾಮಸ್ ಈ ಅದ್ಭುತ  ಸಂಗೀತ ನೀಡಲಿದ್ದಾರೆ.

Share This Article