ಕನ್ನಡದಲ್ಲಿ ಮತ್ತೊಂದು ಮಲ್ಟಿಸ್ಟಾರ್ ಸಿನಿಮಾ ಸದ್ದಿಲ್ಲದೇ ರೂಪುಗೊಳ್ಳುತ್ತಿದೆ. ಮೊನ್ನೆಯಷ್ಟೇ ಶಿವರಾಜ್ ಕುಮಾರ್ (Shivaraj Kumar) ಮತ್ತು ಗಣೇಶ್ (Ganesh) ಕಾಂಬಿನೇಷನ್ ಸಿನಿಮಾ ಬಗ್ಗೆ ಪಬ್ಲಿಕ್ ಟಿವಿ ಡಿಜಿಟಲ್ ಎಕ್ಸ್ ಕ್ಲೂಸಿವ್ ಸುದ್ದಿ ನೀಡಿತ್ತು. ಇದೀಗ ಆ ಚಿತ್ರಕ್ಕೆ ಸ್ಟಾರ್ ನಿರ್ದೇಶಕರೊಬ್ಬರ ಎಂಟ್ರಿಯಾಗಿದೆ. ಈಗಾಗಲೇ ಆ ನಿರ್ದೇಶಕರು ಇಬ್ಬರೂ ನಟರನ್ನು ಭೇಟಿ ಮಾಡಿ ಮಾತುಕತೆ ಕೂಡ ನಡೆಸಿದ್ದಾರೆ ಎನ್ನುವುದಕ್ಕೆ ಫೋಟೋವೊಂದು ಸಾಕ್ಷಿಯಾಗಿದೆ.
ಶಿವರಾಜ್ ಕುಮಾರ್ ಜೊತೆ ಈಗಾಗಲೇ ಹಲವು ಸ್ಟಾರ್ ಗಳು ನಟಿಸಿದ್ದಾರೆ. ಉಪೇಂದ್ರ, ಸುದೀಪ್, ರವಿಚಂದ್ರನ್ ಸೇರಿದಂತೆ ಹಲವು ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಶಿವಣ್ಣ ಜೊತೆ ಗಣೇಶ್ ಸೇರಿಕೊಂಡಿದ್ದಾರೆ. ಹೀಗಾಗಿ ಈ ಚಿತ್ರಕ್ಕೆ ಮಹತ್ವ ಬಂದಿದೆ. ಅಲ್ಲದೇ ಈ ಸಿನಿಮಾಗೆ ನಿರ್ದೇಶಕರು ಯಾರಿರಬಹುದು ಎನ್ನುವ ಕುತೂಹಲ ಕೂಡ ಮೂಡಿದೆ. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ. ಇದನ್ನೂ ಓದಿ: ಪಾಕಿಸ್ತಾನದ ಡಿಸೈನರ್ ವಿನ್ಯಾಸ ಮಾಡಿದ ಲೆಹೆಂಗಾದಲ್ಲಿ ಕಂಗೊಳಿಸಿದ ಸ್ವರಾ ಭಾಸ್ಕರ್
ತಮಿಳಿನಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟಿರುವ ಮತ್ತು ರಜನಿಕಾಂತ್ ಜೊತೆ ಹಲವಾರು ಸಿನಿಮಾಗಳನ್ನು ಮಾಡಿರುವ ಕೆ.ಎಸ್.ರವಿಕುಮಾರ್ (KS Ravikumar) ಮತ್ತೆ ಕನ್ನಡ ಸಿನಿಮಾ ರಂಗಕ್ಕೆ ಬರುತ್ತಿದ್ದಾರೆ. ಈ ಹಿಂದೆ ಅವರು ಸುದೀಪ್ ನಟನೆಯ ಕೋಟಿಗೊಬ್ಬ 2 ಸಿನಿಮಾಗೆ ನಿರ್ದೇಶನವನ್ನು ಮಾಡಿದ್ದರು. ಇದೀಗ ಶಿವಣ್ಣ ಮತ್ತು ಗಣೇಶ್ ಕಾಂಬಿನೇಷನ್ ಚಿತ್ರಕ್ಕೆ ಇವರೇ ನಿರ್ದೇಶಕರು ಎಂದು ಹೇಳಲಾಗುತ್ತಿದೆ.
ನಿರ್ಮಾಪಕ ಸೂರಪ್ಪ ಬಾಬು (Surappa Babu) ಜೊತೆ ಶಿವರಾಜ್ ಕುಮಾರ್, ಗಣೇಶ್ ಮತ್ತು ರವಿಕುಮಾರ್ ಕಾಣಿಸಿಕೊಂಡ ಫೋಟೋ ವೈರಲ್ ಆಗಿದ್ದು, ಇವರೇ ಈ ಸಿನಿಮಾದ ನಿರ್ದೇಶಕರು ಎಂದು ಹೇಳಲಾಗುತ್ತಿದೆ. ಚಿತ್ರತಂಡ ಅಧಿಕೃತವಾಗಿ ಯಾವುದೇ ಮಾಹಿತಿ ನೀಡದೇ ಇದ್ದರು, ವೈರಲ್ ಆಗಿರುವ ಫೋಟೋ ಎಲ್ಲವನ್ನೂ ಹೇಳುವಂತಿದೆ.