ವಾಷಿಂಗ್ಟನ್: ವಿಶ್ವದ ಅತಿ ದೊಡ್ಡ ಕಾಫಿ ಉತ್ಪನ್ನ ಕಂಪನಿ ಸ್ಟಾರ್‌ಬಕ್ಸ್‌ಗೆ ಇದೀಗ ಹೊಸದಾಗಿ ಭಾರತೀಯ ಮೂಲದ ಲಕ್ಷ್ಮಣ್ ನರಸಿಂಹನ್ ಅವರನ್ನು ಮುಖ್ಯ ಕಾರ್ಯನಿರ್ವಾಹಕಾಧಿಕಾರಿಯಾಗಿ(ಸಿಇಒ) ನೇಮಿಸಲಾಗಿದೆ.
55 ವಯಸ್ಸಿನ ಲಕ್ಷ್ಮಣ್ ನರಸಿಂಹನ್ ಅವರು ಈ ಹಿಂದೆ ರೆಕಿಟ್ ಕಂಪನಿಯ ಸಿಇಒ ಆಗಿದ್ದರು. ಪೆಪ್ಸಿಕೊವಿನ ಜಾಗತಿಕ ಮುಖ್ಯ ವಾಣಿಜ್ಯ ಅಧಿಕಾರಿಯಾಗಿಯೂ ಇವರು ಕಾರ್ಯ ನಿರ್ವಹಿಸಿದ್ದು, ಇದೀಗ ಆ ಸ್ಥಾನಕ್ಕೆ ಹೋವರ್ಡ್ ಸ್ಕುಲ್ಟ್ಜ್ ಅವರನ್ನು ಬದಲಿಸಲಾಗಿದೆ. ಇದನ್ನೂ ಓದಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಜ್ರಕುಮಾರ್ ಇನ್ನಿಲ್ಲ
Advertisement
Advertisement
ಅಕ್ಟೋಬರ್ 1 ರಂದು ಲಕ್ಷ್ಮಣ್ ನರಸಿಂಹನ್ ಕಂಪನಿಗೆ ಸೇರಲಿದ್ದು, 2023ರ ಏಪ್ರಿಲ್‌ನಲ್ಲಿ ಚುಕ್ಕಾಣಿ ಹಿಡಿಯಲಿದ್ದಾರೆ. ಅಲ್ಲಿಯವರೆಗೆ ಹಂಗಾಮಿ ಸಿಇಒ ಹೋವರ್ಡ್ ಸ್ಕುಲ್ಟ್ಜ್ ಕಂಪನಿಯನ್ನು ಮುನ್ನಡೆಸಲಿದ್ದಾರೆ. ಲಕ್ಷ್ಮಣ್ ನರಸಿಂಹನ್ ಅವರು ಏಪ್ರಿಲ್ 1 ರವರೆಗೆ ಹೋವರ್ಡ್ ಸ್ಕುಲ್ಟ್ಜ್ ಅವರೊಂದಿಗೆ ಒಟ್ಟಾಗಿ ಕೆಲಸ ಮಾಡುತ್ತಾರೆ ಎಂದು ಸ್ಟಾರ್‌ಬಕ್ಸ್ ಹೇಳಿದೆ. ಇದನ್ನೂ ಓದಿ: ಸರ್ಕಾರದ ‘ಪುಣ್ಯಕೋಟಿ’ ಯೋಜನೆಯ ರಾಯಭಾರಿಯಾದ ಕಿಚ್ಚ ಸುದೀಪ್
Advertisement
ಏಪ್ರಿಲ್‌ನಿಂದ ಜೂನ್ ತಿಂಗಳಿನಲ್ಲಿ ಚೀನಾದಲ್ಲಿ ಕೋವಿಡ್ ನಿರ್ಬಧಗಳಿಂದಾಗಿ ಸ್ಟಾರ್‌ಬಕ್ಸ್ ವ್ಯಾಪಾರ ನಿಧಾನಗತಿಗೆ ಇಳಿದಿದ್ದರೂ ಅಮೆರಿಕದಲ್ಲಿ ಭಾರೀ ಬೇಡಿಕೆ ಹೊಂದಿರುವುದಾಗಿ ವರದಿಯಾಗಿದೆ.