ಬೆಂಗಳೂರು: ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಮನಬಂದಂತೆ ನಾಡಗೀತೆ ಹಾಡುವುದಕ್ಕೆ ಕಡಿವಾಣ ಹಾಕಲು ಕರ್ನಾಟಕ ಸಾಹಿತ್ಯ ಪರಿಷತ್ ಚರ್ಚೆ ನಡೆಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಸಪಾ ಅಧ್ಯಕ್ಷರಾದ ಮನು ಬಳಿಗಾರ್, ಎರಡೂವರೆ ನಿಮಿಷಗಳ ಕಾಲ ನಾಡಗೀತೆ ಹಾಡಲು ಸಮಯ ನಿಗದಿ ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದ್ದೇವೆ. ಈಗಾಗಲೇ 8 ನಿಮಿಷ, 9 ನಿಮಿಷ ನಾಡಗೀತೆ ಹಾಡುತ್ತಿದ್ದಾರೆ. ಸಾಹಿತಿ ನಿಸ್ಸಾರ್ ಅಹಮದ್ ಸೇರಿದಂತೆ ಹಲವು ಹಿರಿಯ ಸಾಹಿತಿಗಳು ನಾಡಗೀತೆಯನ್ನು 2.30 ನಿಮಿಷ ಹಾಡಬೇಕು ಒತ್ತಾಯ ಮಾಡಿದ್ದರು. ಈ ಕರಿತು ಕನ್ನಡ ಸಾಹಿತ್ಯ ಪರಿಷತ್ತಿಗೆ ಮನವಿ ಮಾಡಿ ಪತ್ರ ಕೂಡ ಬರೆದಿದ್ದರು. ಅದ್ದರಿಂದ ಕಸಪಾ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿದೆ ಎಂದರು.
Advertisement
Advertisement
ಅಂತರರಾಷ್ಟ್ರೀಯ ಖ್ಯಾತ ಹಿನ್ನೆಲೆ ಗಾಯಕರು ಕೂಡ ಎರಡೂವರೆ ನಿಮಿಷ ಕಾಲ ನಾಡಗೀತೆಯನ್ನು ಹಾಡಿದ್ದಾರೆ. ಹಾಗಾಗಿ ಈ ಸಮಯವನ್ನು ನಿಗದಿ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದು, ಸರ್ಕಾರ ಇದನ್ನು ಜಾರಿಗೆ ತರಬೇಕು ಎಂದು ಹೇಳಿದರು.
Advertisement
ಕಸಾಪ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹಲವು ಸಾಹಿತಿಗಳು, ಕನ್ನಡಪರ ಚಿಂತಕರು, ಹೋರಾಟಗಾರರು ಮತ್ತು ಹಾಡುಗಾರರು ಭಾಗಿಯಾಗಿದ್ದರು. ಈ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರು. ಸುದ್ದಿಗೋಷ್ಠಿಗೂ ಮುನ್ನ ನಡೆದ ಸಭೆಯಲ್ಲಿ ಸಾಹಿತಿ ಚಂದ್ರಶೇಖರ್ ಕಂಬಾರ್, ಸಿದ್ದಲಿಂಗಯ್ಯ, ಕಮಲಾ ಹಂಪನಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews