ಚಿಕ್ಕಮಗಳೂರು: ಬಿಜೆಪಿಯು ಗಾಲಿ ಜನಾರ್ದನ ರೆಡ್ಡಿ ಮೇಲೆ ಅವಲಂಬಿತವಾಗಿ ರಾಜ್ಯದಲ್ಲಿ ರಾಜಕೀಯ ಮಾಡುತ್ತಿಲ್ಲ. ಅವರ ಬಂಧನದಿಂದ ನಮಗೆ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾವು ಬಿಜೆಪಿಯನ್ನು ಮಣಿಸಲು ಜನಾರ್ದನ ರೆಡ್ಡಿಯನ್ನು ಟಾರ್ಗೆಟ್ ಮಾಡಿದ್ದಾರೆ. ಆದರೆ ಈ ಪ್ರಕರಣ ಜನಾರ್ದನ ರೆಡ್ಡಿಗೆ ಬಿಟ್ಟಿದ್ದು, ಅವರೇ ಎದುರಿಸುತ್ತಾರೆ. ಈ ಹಿಂದೆಯೇ ಅವರ ವಿರುದ್ಧ ಮೊಕದ್ದಮೆ ದಾಖಲಾಗಿದ್ದಕ್ಕೆ ಪಕ್ಷದಿಂದ ಯಾವುದೇ ಜವಾಬ್ದಾರಿ ಕೊಡದೆ ದೂರವಿಡಲಾಗಿತ್ತು ಎಂದು ತಿಳಿಸಿದರು. ಇದನ್ನು ಓದಿ: ಅಂಬಿಡೆಂಟ್ ಹಣ ವಂಚನೆ ಪ್ರಕರಣಕ್ಕೆ ರೆಡ್ಡಿಗೂ ಏನು ಸಂಬಂಧ? ಡಿಲೀಂಗ್ ಹೇಗಾಯ್ತು? 57 ಕೆಜಿ ಚಿನ್ನ ತಲುಪಿದ್ದು ಹೇಗೆ?
Advertisement
Advertisement
ಜನಾರ್ದನ ರೆಡ್ಡಿ ಬಿಜೆಪಿ ಶಾಸಕರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆದರೆ 2013ರ ಲೋಕಸಭಾ ಚುನಾವಣೆ ಹಾಗೂ 2018ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದಿಂದ ಗುರುತಿಸಿಕೊಂಡಿಲ್ಲ. ಈಗ ಮೈತ್ರಿ ಸರ್ಕಾರ ಜನಾರ್ದನ ರೆಡ್ಡಿಯನ್ನು ಹೆದರಿಸಿದರೆ ಬಿಜೆಪಿ ಪರಿಣಾಮ ಬೀರುತ್ತದೆ ಅಂತಾ ತಿಳಿಸಿದೆ. ಆದರೆ ನಮಗೆ ಈ ಪ್ರಕರಣದಿಂದ ಯಾವುದೇ ಸಮಸ್ಯೆಯಾಗಲ್ಲ ಎಂದು ಹೇಳಿದರು.
Advertisement
ಈ ಪ್ರಕರಣಕ್ಕೆ ನಮ್ಮ ಪಕ್ಷ ಯಾವುದೇ ಸಂಬಂಧವಿಲ್ಲ. ಎಲ್ಲವನ್ನೂ ಅವರೇ ಎದುರಿಸುತ್ತಾರೆ ಎಂದು ರವಿ ತಿಳಿಸಿದರು. ಇದನ್ನು ಓದಿ: ಹೊಡೆದು ಜನಾರ್ದನ ರೆಡ್ಡಿ ಹೆಸರು ಹಾಕಿಸಿದ್ದಾರೆ- ಡೀಲ್ ಪ್ರಕರಣಕ್ಕೆ ಸ್ಫೋಟಕ ತಿರುವು
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv