ಮಂಡ್ಯ: ನಾಡಿನ ರೈತರು ಮತ್ತು ಮಹಿಳೆಯರ ಪರವಾಗಿ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಿಎಂ ಬೊಮ್ಮಾಯಿ ಅವರು ಹೆಚ್ಚಿನ ಒತ್ತು ನೀಡಿ ಬಜೆಟ್ ಮಂಡಿಸಿದ್ದಾರೆ ಎಂದು ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
Advertisement
ಜಿಲ್ಲೆಯ ಕೃಷ್ಣರಾಜಪೇಟೆಯ ಇಂಜಿನಿಯರಿಂಗ್ ಕಾಲೇಜಿನ ಆವರಣದಿಂದ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ಶಿಬಿರವನ್ನು ಗೋಪಾಲಯ್ಯ ಅವರು ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾಡನಾಡಿದ ಅವರು, ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಡಾ.ಕೆ.ಸಿ.ನಾರಾಯಣಗೌಡರು ಮತ್ತು ನಾನು ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ. ಇದೇ ತಿಂಗಳ 19 ರಂದು ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳಿನತ್ತ ಲವ್ ಗುರು ನಿರ್ದೇಶಕ ಪ್ರಶಾಂತ್ ರಾಜ್
Advertisement
Advertisement
ಡಾ.ಕೆ.ನಾರಾಯಣಗೌಡರು ಮಂಡ್ಯದ ಮಣ್ಣಿನ ಮಗ. ಜಿಲ್ಲೆಯ ಎಲ್ಲ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ದುಡಿಯುತ್ತಿದ್ದೇವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ತರಲಾಗುವುದು ಎಂದಿದ್ದಾರೆ.
Advertisement
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಕೆ.ಸಿ.ನಾರಾಯಣಗೌಡ, ಜಿಲ್ಲಾಧಿಕಾರಿ ಅಶ್ವತಿ, ಜಿ.ಪಂ.ಕಾರ್ಯನಿರ್ವಹಣಾಧಿಕಾರಿ ದಿವ್ಯಪ್ರಭು ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟಿನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ