ಬೆಂಗಳೂರು: ಕಾಂಗ್ರೆಸ್ ನಲ್ಲಿರುವ ಭಿನ್ನಮತ ಶಮನಕ್ಕೆ ಫುಲ್ ಸ್ಟಾಫ್ ಹಾಕಲು ಕಾಂಗ್ರೆಸ್ ಮುಂದಾಗಿದೆ.
ರಾಜ್ಯ ಸಚಿವ ಸಂಪುಟ ಇನ್ನು ಹತ್ತು ದಿನಗಳೊಳಗೆ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಇನ್ನು ಹತ್ತು ದಿನಗಳ ಒಳಗೆ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಸಿಎಂ ಕುಮಾರಸ್ವಾಮಿ ನವದೆಹಲಿಯಲ್ಲಿ ಸುಳಿವು ಬಿಟ್ಟುಕೊಟ್ಟಿದ್ದಾರೆ.
Advertisement
ಸದ್ಯ ನಾಲ್ಕು ಸ್ಥಾನಗಳನ್ನು ವಿಸ್ತರಿಸಲು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ. ಮತ್ತೆ ಎರಡು ಸ್ಥಾನವನ್ನು ಕಾಂಗ್ರೆಸ್ ಉಳಿಸಿಕೊಳ್ಳಲಿದೆ. ಇನ್ನು ಲೋಕಸಭೆ ಚುನಾವಣೆಯಲ್ಲಿ 10-18 ರ ಪಾಲಿಸಿ ಅನುಕರಿಸಲು ನಿರ್ಧರಿಸಲಾಗಿದ್ದು, ಕಾಂಗ್ರೆಸ್ 18 ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ 10 ಕ್ಷೇತ್ರಗಳ ಸ್ಪರ್ಧಿಸುವ ಕುರಿತು ಚರ್ಚೆ ನಡೆದಿದೆ.
Advertisement
ನೀತಿ ಆಯೋಗ ಸಭೆ ಹಿನ್ನೆಲೆ ನವದೆಹಲಿಗೆ ತೆರಳಿರುವ ಸಿಎಂ ರಾಹುಲ್ ಗಾಂಧಿ ಭೇಟಿಗೆ ಸಮಯ ಕೇಳಿದ್ದಾರೆ. ಈ ವೇಳೆ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಿದ್ದಾರೆ. ಕಾಂಗ್ರೆಸ್‍ನಲ್ಲಿ ಇನ್ನು ಆರು ಸ್ಥಾನಗಳು ಭರ್ತಿಯಾಗಬೇಕಿದ್ದು, ಈ ಪೈಕಿ ಅತೃಪ್ತರ ಮನವೊಲಿಸಲು ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ಹೈಕಮಾಂಡ್ ಪ್ಲಾನ್ ಮಾಡಿದೆ. ಕುಮಾರಸ್ವಾಮಿ ದೆಹಲಿಯಲ್ಲಿರುವ ಹಿನ್ನೆಲೆ ರಾಹುಲ್ ಗಾಂಧಿ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ಮುಹೂರ್ತ ಫಿಕ್ಸ್ ಮಾಡಲಾಗುತ್ತೆ ಎನ್ನಲಾಗಿದೆ. ಇನ್ನು ಇದೇ ವೇಳೆ ಲೋಕಸಭೆ ಚುನಾವಣೆ ಮೈತ್ರಿ ಕುರಿತು ಚರ್ಚೆ ನಡಯುವ ಸಾಧ್ಯತೆ ಇದ್ದು, ಸೀಟು ಹಂಚಿಕೆ ಕುರಿತು ರಾಹುಲ್ ಜೊತೆ ಎಚ್‍ಡಿಕೆ ಮಾತುಕತೆ ನಡೆಸಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
Advertisement