ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕಾಂಗ್ರೆಸ್ ಗೆಲುವನ್ನು ರೈತರು ಹಾಗೂ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ.
ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ಸನ್ನು ಬೆಂಬಲಿಸಿದ ಎಲ್ಲಾ ಮತದಾರರಿಗೂ ಅಭಿನಂದನೆ ಸಲ್ಲಿಸುತ್ತೇವೆ. ವಿಶೇಷವಾಗಿ ಈ ಕಾಂಗ್ರೆಸ್ ಗೆಲುವನ್ನು ದೇಶದ ರೈತರು, ಕಾರ್ಯಕರ್ತರು ಹಾಗೂ ದುಡಿಯುವ ಕೈಗಳಿಗೆ ಅರ್ಪಿಸುತ್ತೇನೆಂದು ಹೇಳಿದರು.
Advertisement
Congress President Rahul Gandhi: This is a victory of Congress workers, small traders, farmers. This is a big responsibility for Congress party and we will work on this. #AssemblyElectionResults2018 pic.twitter.com/zXd1k8qFUk
— ANI (@ANI) December 11, 2018
Advertisement
ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‍ಗಡದಲ್ಲಿ ನಾವು ಬಿಜೆಪಿಯನ್ನು ಕಿತ್ತುಹಾಕಿದ್ದೇವೆ. ಆದರೆ ಮಿಜೋರಾಂ ಹಾಗೂ ತೆಲಂಗಾಣದಲ್ಲಿ ನಿರೀಕ್ಷಿತ ಫಲಿತಾಂಶ ಬರಲಿಲ್ಲ. ಆದರೂ ಆಡಳಿತರೂಢ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಶಕ್ತಿಯನ್ನು ತೋರಿಸಿಕೊಟ್ಟಿದ್ದೇವೆ ಎಂದರು.
Advertisement
Advertisement
ಮೂರು ರಾಜ್ಯಗಳಲ್ಲಿರುವ ಕೆಲಸ ಮಾಡಿರುವ ಮುಖ್ಯಮಂತ್ರಿಗಳಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಜನರು ಬದಲಾವಣೆಯನ್ನು ನಿರೀಕ್ಷಿಸಿ, ಕಾಂಗ್ರೆಸ್ಸಿಗೆ ಮತ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಿ, ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಕೊಟ್ಟಿದ್ದ ಮಾತಿನಂತೆ ಎಲ್ಲಾ ಆಶ್ವಾಸನೆಗಳನ್ನ ಈಡೇರಿಸುತ್ತದೆ. ಬಿಜೆಪಿ ಸರ್ಕಾರದ ಉತ್ತಮ ಯೋಜನೆಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.
LIVE: Congress President @RahulGandhi addresses the media on Assembly Elections. #CongressWinsBIG https://t.co/TRYzlnWZl8
— Congress (@INCIndia) December 11, 2018
ಇದೇ ವೇಳೆ ಇಲೆಕ್ಟ್ರಾನಿಕ್ ಮತ ಯಂತ್ರದ ಬಗ್ಗೆ ಮಾತನಾಡಿ, ಇವಿಎಂಗಳಿದ್ದರೂ ಖಂಡಿತವಾಗಿ ಕಾಂಗ್ರೆಸ್ ಚುನಾವಣೆಯಲ್ಲಿ ಗೆಲ್ಲುತ್ತದೆ. ಅದರ ಬಗ್ಗೆ ಎರಡು ಮಾತಿಲ್ಲ. ಆದರೆ ಇವಿಎಂ ಗಳ ಬಗ್ಗೆ ಜನ ಅನುಮಾನ ವ್ಯಕ್ತಪಡಿಸುತ್ತಲೇ ಇದ್ದಾರೆ. ಹೀಗಾಗಿ ನಾವು ಕೂಡ ಅದರ ಬಗ್ಗೆ ಅನುಮಾನ ಹೊಂದಿದ್ದೇವೆ. ಇವಿಎಂಗಳಲ್ಲಿರುವ ಚಿಪ್ ಅನ್ನು ದುರುಪಯೋಗ ಮಾಡಿಕೊಳ್ಳಬಹುದು. ಇದರಿಂದಾಗಿ ದೇಶದ ಚುನಾವಣಾ ವ್ಯವಸ್ಥೆ ಮೇಲೆ ಭಾರೀ ಪರಿಣಾಮ ಬೀರುತ್ತದೆ. ಇದರ ಬದಲು ಬ್ಯಾಲೆಟ್ ಪೇಪರ್‍ಗಳನ್ನು ಬಳಸಿದರೆ ಯಾವುದೇ ತೊಂದರೆಯಾಗುವುದಿಲ್ಲ ಅಭಿಪ್ರಾಯಪಟ್ಟರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv