ರಾಮನಗರ: ಕಾವೇರಿ ನೀರು ಹಂಚಿಕೆ (Cauvery Water Dispute) ವಿಚಾರವಾಗಿ ತಮಿಳುನಾಡಿನ ಧೋರಣೆಯನ್ನು ಖಂಡಿಸಿ ಗುರುವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ (Karnataka Bandh) ಜಿಲ್ಲೆಯ ರೈತ ಸಂಘಟನೆಗಳು ಸಂಪೂರ್ಣ ಬೆಂಬಲ ಸೂಚಿಸಿವೆ.

ಕಾವೇರಿ ಜಲಾನಯನ ಪ್ರದೇಶದ ಸಂಕಷ್ಟದ ನಡುವೆಯೂ ತಮಿಳುನಾಡು ಪದೇ ಪದೇ ಕಿರಿಕಿರಿ ಉಂಟುಮಾಡುತ್ತಿರುವುದಕ್ಕೆ ಕೃಷಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಬಾರದು ಎಂದು ಆಗ್ರಹಿಸಿರುವ ರೈತ ನಾಯಕರು, ಈ ವಿಚಾರದಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ ತಕ್ಕ ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಜಂಟಿ ಸಂಸದೀಯ ಸಮಿತಿಗೆ FCRA ತಿದ್ದುಪಡಿ ಮಸೂದೆ ರವಾನೆ
ಬಡಗಲಪುರ ನಾಗೇಂದ್ರ ಬಣದ ಕರ್ನಾಟಕ ರಾಜ್ಯ ರೈತ ಸಂಘವು ಬಂದ್‌ಗೆ ಅಧಿಕೃತವಾಗಿ ಬೆಂಬಲ ಘೋಷಿಸಿದ್ದು, ನಾಳೆ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಬಂದ್ ಯಶಸ್ವಿಗೊಳಿಸುವುದಾಗಿ ತಿಳಿಸಿದೆ. ಕಾವೇರಿ ಹಿತರಕ್ಷಣೆಗೆ ಕನ್ನಡಿಗರೆಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕಾದ ಅಗತ್ಯವಿದೆ ಎಂದು ರೈತ ಮುಖಂಡರು ಕರೆ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ
