ಕೊಪ್ಪಳ: ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಗಂಗಾವತಿ (Gangavtahi) ತಾಲೂಕಿನ ಚಿಕ್ಕರಾಂಪೂರ ಗ್ರಾಮದ ಅಂಜನಾದ್ರಿ ಬೆಟ್ಟಕ್ಕೆ (Anjanadri Hill) ರೋಪ್ ವೇ ನಿರ್ಮಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದ್ದು, ಪ್ರವಾಸೋದ್ಯಮ ಇಲಾಖೆಯ (Tourism Department) ಅಧಿಕಾರಿಗಳು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು.ಇದನ್ನೂ ಓದಿ:ಜಮ್ಮು-ಕಾಶ್ಮೀರದ ಕಥುವಾದಲ್ಲಿ ಎನ್‌ಕೌಂಟರ್ – ನಾಲ್ವರು ಪೊಲೀಸರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ
ರೋಪ್ ವೇ ನಿರ್ಮಾಣಕ್ಕೆ ಅನುಮೋದನೆ ದೊರೆತಿರುವ ಕಾರಣ ಕೇಂದ್ರದ RITES ಸಂಸ್ಥೆಯ ಪ್ರತಿನಿಧಿಗಳು ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಶಾಸಕ ಗಾಲಿ ಜನಾರ್ದನ ರೆಡ್ಡಿಯವರ (G.Janardhana Reddy) ನೇತೃತ್ವದಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಟ್ಟದ ಹಿಂಬದಿಯಿಂದ ರೋಪ್ ವೇ ನಿರ್ಮಾಣಕ್ಕೆ ಸ್ಥಳ ಗುರುತು ಮಾಡಲಾಗಿದ್ದು, 450 ಮೀ. ಉದ್ದದ ರೋಪ್ ವೇ ನಿರ್ಮಾಣಕ್ಕೆ ನಿರ್ಧರಿಸಿದೆ. ಅದರಲ್ಲಿ ಒಂದು ಗಂಟೆಯಲ್ಲಿ 800 ಭಕ್ತಾಧಿಗಳನ್ನು ಅಂಜನಾದ್ರಿ ಬೆಟ್ಟದ ಮೇಲೆ ತಲುಪಿಸಬಹುದಾಗಿದೆ.
ಶಾಸಕ ಗಾಲಿ ಜನಾದ9ನ ರೆಡ್ಡಿ ಮಾತನಾಡಿ, ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಮಾತುಕತೆ ನಡೆಸಿ, ರೋಪ್ ವೇ ನಿರ್ಮಾಣ ಕ್ಕೆ ಮನವಿ ಮಾಡಿಕೊಂಡಿದ್ದೆ. ಮನವಿಗೆ ಸ್ಪಂದಿಸಿ, ರೋಪ್ ವೇ ನಿರ್ಮಾಣ ಒಪ್ಪಿಗೆ ಸಿಕ್ಕಿದೆ. ರಾಜ್ಯ ಸರ್ಕಾರ ಕೂಡ ಅನುಮೋದನೆಯನ್ನು ನೀಡಿದೆ. ಸದ್ಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಕಾಮಗಾರಿ ಆರಂಭವಾದ 1 ವರ್ಷದ ಒಳಗಾಗಿಯೇ ಪೂಣ9ಗೊಳಿಸುವ ಸಾಧ್ಯತೆ ಇದೆ ಎಂದು ಹೇಳಿದರು.ಇದನ್ನೂ ಓದಿ:ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ 50 ಕೋಟಿ ರೂ.ನಿಗದಿ: ಸಚಿವ ರಾಜಣ್ಣ