ಬೆಂಗಳೂರು: ಪಶ್ಚಿಮ ಘಟ್ಟಗಳ ರಕ್ಷಣೆಗೆ ಕೇಂದ್ರ ಸರ್ಕಾರದ ಕಸ್ತೂರಿ ರಂಗನ್ ವರದಿಯ (Kasturi Rangan Report) ಏಳನೇ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಸಭೆಯಲ್ಲಿ ಇಂದು ಕೇಂದ್ರದ ಏಳನೇ ಕರಡು ಅಧಿಸೂಚನೆ ವಿರೋಧಿಸಿ ನಡೆದ ಚರ್ಚೆಗೆ ಉತ್ತರ ಕೊಡುವಾಗ ಅರಣ್ಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy), ಕೇಂದ್ರದ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ಇದೆ. ರಾಜ್ಯ ಸರ್ಕಾರ ತನ್ನ ಆಕ್ಷೇಪಣೆಗಳನ್ನು ಸಲ್ಲಿಸುವ ಮೂಲಕ ಕೇಂದ್ರದ ಅಧಿಸೂಚನೆಯನ್ನು ತಿರಸ್ಕರಿಸಲಾಗುತ್ತದೆ ಅಂದ್ರು.

ಕೇಂದ್ರ ಸರ್ಕಾರ ಮತ್ತೆ ಅಧಿಸೂಚನೆ ಹೊರಡಿಸಿರೋದು ಆ ಭಾಗದ ಶಾಸಕರ ತೀವ್ರ ವಿರೋಧಕ್ಕೆ ಕಾರಣವಾಗಿದೆ.
ವಿಧಾನಸಭೆಯಲ್ಲಿಂದು ನಿಯಮ 69 ರಡಿ ಕೇಂದ್ರ ಹೊರಡಿಸಿದ ಏಳನೇ ಕರಡು ಅಧಿಸೂಚನೆ ವಿರೋಧಿಸಿ ಶಾಸಕರಾದ ಎ ಎಸ್ ಪೊನ್ನಣ್ಣ, ತಮ್ಮಯ್ಯ, ಟಿ ಡಿ ರಾಜೇಗೌಡ ಚರ್ಚೆ ಮಾಡಿದ್ರು. ಶಾಸಕರು ವರದಿ ಜಾರಿಯಾದರೆ ಏನೆಲ್ಲ ಪರಿಣಾಮ ಆಗಲಿದೆ ಎಂದು ಹಲವು ಆತಂಕಗಳನ್ನು ವ್ಯಕ್ತಪಡಿಸಿದರು. ಸರ್ಕಾರ ಅಧಿಸೂಚನೆ ತಿರಸ್ಕರಿಸಬೇಕೆಂದು ಒತ್ತಾಯಿಸಿದರು.

