ಐಶ್ವರ್ಯ ಗೌಡ ವಂಚನೆ ಪ್ರಕರಣ ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

Public TV
1 Min Read
ACP Chandan Aishwarya Gowda 2

ಬೆಂಗಳೂರು: ಐಶ್ವರ್ಯ ಗೌಡ (Aishwarya Gowda) ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿಗೆ (CID) ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಶ್ವರ್ಯ ವಿರುದ್ಧ ರಾಜ್ಯದ ಹಲವು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ರಾಜರಾಜೇಶ್ವರಿ ನಗರ, ಚಂದ್ರಾಲೇಔಟ್, ಮಂಡ್ಯ ಸೇರಿ ಹಲವಾರು ಕಡೆ ಕೇಸ್ ದಾಖಲಾಗಿತ್ತು. ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಸಿಡಿಆರ್ ಪ್ರಕರಣ ಹೊರತು ಪಡಿಸಿ ಉಳಿದ ಪ್ರಕರಣದ ತನಿಖೆ ನಡೆಸಲು ಸಿಐಡಿಗೆ ವರ್ಗಾಣೆ ಮಾಡಲಾಗಿದೆ. ಇದನ್ನೂ ಓದಿ: ಜನರಿಗೆ ಗುಡ್ ನ್ಯೂಸ್ – 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

ಸಿಐಡಿಯ ಆರ್ಥಿಕ ಅಪರಾಧ ವಿಭಾಗಕ್ಕೆ ಕೇಸ್ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಬ್ಯಾಟರಾಯನಪುರ ಉಪವಿಭಾಗದ ಪೊಲೀಸರು ಕೇಸ್‌ನ ತನಿಖೆ ನಡೆಸಿದ್ದರು. ಇದೀಗ ಮುಂದಿನ ತನಿಖೆಗೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಮತ್ತೊಂದು ಕಡೆ ಇಡಿಯಿಂದ ಕೂಡ ವಂಚನೆ ಕೇಸ್ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಐಶ್ವರ್ಯ ಗೌಡಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದರು. ಆದಾದ ಬಳಿಕ ಮಾಜಿ ಸಂಸದ ಡಿ.ಕೆ ಸುರೇಶ್ ಕೂಡ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಇಡಿ ನೋಟಿಸ್ ಕೊಟ್ಟಿದ್ದು, ತನಿಖೆ ಮುಂದುವರಿಸಿದೆ. ಇದನ್ನೂ ಓದಿ: ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಜುಲೈ ಮೊದಲ ವಾರಕ್ಕೆ ವಿಚಾರಣೆ ಮುಂದೂಡಿಕೆ

Share This Article