ಬೆಂಗಳೂರು: ಇದೇ ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತ ತಂಡಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.
- Advertisement -
14 ಬಾರಿ ಚಾಂಪಿಯನ್ ಇಂಡೋನೇಷ್ಯಾ ತಂಡವನ್ನು ಮಣಿಸಿರುವ ಭಾರತ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ತಂಡದಲ್ಲಿ ಬೆಂಗಳೂರಿನ ಆಟಗಾರ ಇರುವುದು ಕರ್ನಾಟಕಕ್ಕೆ ಮತ್ತಷ್ಟು ಹೆಮ್ಮೆ ತರಿಸಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Advertisement -
ಸದ್ಯ ಬೆಂಗಳೂರಿನ ದ್ರಾವಿಡ್ ಪಡುಕೊಣೆ ಸ್ಪೋರ್ಟ್ಸ್ ಸೆಂಟರ್‌ನಲ್ಲಿ ಲಕ್ಷ್ಯ ಸೇನ್ ತರಬೇತಿ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಥಾಮಸ್ ಕಪ್ ಗೆದ್ದ ಭಾರತ ತಂಡದೊಂದಿಗೆ ಇಡೀ ದೇಶವೇ ಸಂಭ್ರಮಿಸಿದೆ: ಮೋದಿ
- Advertisement -
- Advertisement -
ಭಾರತದ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯವಾಗಿದ್ದು, ಈ ಐತಿಹಾಸಿಕ ಗೆಲುವು ನಮ್ಮ ದೇಶದ ಯುವಜನತೆಗೆ ಸ್ಫೂರ್ತಿ ನೀಡಲಿದೆ. ಭಾರತದ ಗೆಲುವಿಗೆ ತಮ್ಮದೇ ಕೊಡುಗೆ ನೀಡಿರುವ ಬೆಂಗಳೂರಿನ ಲಕ್ಷ್ಯ ಸೇನ್ ಅವರಿಗೆ ರಾಜ್ಯ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ ಲಕ್ಷ್ಯ ಸೇನ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.