Sunday, 19th May 2019

ಎಸಿಬಿಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ: ಬಿಎಸ್‍ವೈ

ಬೀದರ್: ಗಾಲಿ ಜನಾರ್ದನ ರೆಡ್ಡಿಯವರ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆಯ ಉದ್ಘಾಟನೆಗೆ ಆಗಮಿಸಿದ್ದ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ರೆಡ್ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಸಿದ್ಧನಿಲ್ಲ. ಪ್ರಕರಣಕ್ಕೆ ಸಂಬಂಧ ತನಿಖೆಯಾಗಿ ಸತ್ಯಾಂಶ ಹೊರಗೆ ಬರಲಿ, ಅದಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ಟೀಕೆ ಮಾಡಲ್ಲ. ಆದರೆ ಒಟ್ಟಾರೆಯಾಗಿ ಹೇಳಬೇಕೆಂದರೇ ರಾಜ್ಯ ಸರ್ಕಾರ ಎಸಿಬಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸುವ ಮೂಲಕ ಪರೋಕ್ಷವಾಗಿ ರೆಡ್ಡಿ ಪರ ಮಾತನಾಡಿದ್ದಾರೆ.

ಇದೇ ವೇಳೆ ಟಿ.ಬಿ.ಜಯಚಂದ್ರರ ವಿವಾದಾತ್ಮಕ ಹೇಳಿಕೆ ಕುರಿತು ಮಾತನಾಡಿ, ಈ ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಜಯಚಂದ್ರ ಕ್ಷಮೆ ಕೇಳಬೇಕು. ಒಂದು ವೇಳೆ ಕ್ಷಮೆ ಕೇಳದಿದ್ದರೆ, ಮಾನನಷ್ಟ ಮೊಕದ್ದಮೆ ಹೂಡಲಾಗುವುದು. ಈಗಾಗಲೇ ಈ ಬಗ್ಗೆ ಸೋಮವಾರ ಬೆಂಗಳೂರಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆಂದು ತಿಳಿಸಿದರು.

 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

One thought on “ಎಸಿಬಿಯನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ: ಬಿಎಸ್‍ವೈ

Leave a Reply

Your email address will not be published. Required fields are marked *