ಬೆಂಗಳೂರು: ದ್ವೇಷ ಭಾಷಣ (Hate Speech) ಮಾಡಿ ಸಾಬೀತಾದ್ರೆ ಕರ್ನಾಟಕದಲ್ಲಿ ಇನ್ಮೇಲೆ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
ಹೌದು. ರಾಜ್ಯ ಸರ್ಕಾರದಿಂದ ಮಹತ್ವದ ಮಸೂದೆಯೊಂದನ್ನ ತರಲು ಸಿದ್ಧತೆ ನಡೆಸಿದ್ದು, ಬಜೆಟ್ ಅಧಿವೇಶನದಲ್ಲಿ ಬಿಲ್ (Hate Speech Bill) ಮಂಡಿಸುವ ಸಾಧ್ಯತೆ ಇದೆ. ದ್ವೇಷ ಅಪರಾಧಗಳು ಮತ್ತು ದ್ವೇಷ ಭಾಷಣ (ಹೋರಾಟ, ತಡೆಗಟ್ಟುವಿಕೆ ಮತ್ತು ಶಿಕ್ಷೆ) ವಿಧೇಯಕ 2025 ಕರಡನ್ನ ಕಾನೂನು ಇಲಾಖೆ ಸಿದ್ಧಪಡಿಸಿದೆ. ಜಾತಿ, ಧರ್ಮ ಆಧರಿಸಿ ದ್ವೇಷ ಭಾಷಣ ಮಾಡಿದ್ರೆ ಜೈಲು ಗ್ಯಾರಂಟಿ. ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ, ಭಾಷೆ, ಅಂಗವೈಕಲ್ಯ ಬುಡಕಟ್ಟುವಿನ ಕುರಿತು ದ್ವೇಷ ಭಾಷಣ ಮಾಡುವಂತಿಲ್ಲ ಎಂಬುದನ್ನ ಬಿಲ್ ಕರಡಿನಲ್ಲಿದ್ದು, ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕಾರ ಆಗುತ್ತಾ..? ಕಾದುನೋಡಬೇಕಿದೆ.
Advertisement
Advertisement
ದ್ವೇಷ ಭಾಷಣಕ್ಕೆ ಬ್ರೇಕ್? – ಮಸೂದೆಯಲ್ಲಿ ಏನಿದೆ?
Advertisement
>. ಭಾಷೆ, ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮ ಸ್ಥಳ ವಿಚಾರವಾಗಿ ದ್ವೇಷ ಭಾಷಣ ಮಾಡುವಂತಿಲ್ಲ
Advertisement
>. ಯಾವುದೇ ವ್ಯಕ್ತಿಗೆ ಹಾನಿ ಮಾಡುವ, ದ್ವೇಷ ಉತ್ತೇಜಿಸುವ, ಅದನ್ನು ಪ್ರಚಾರ ಮಾಡುವ ವ್ಯಕ್ತಿ ಅಥವಾಗುಂಪಿಗೆ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ, 5 ಸಾವಿರ ತನಕ ದಂಡ
>. ಯಾವುದೇ ಭಾವನಾತ್ಮಕ, ಮಾನಸಿಕ, ದೈಹಿಕ, ಸಾಮಾಜಿಕ ಅಥವಾ ಆರ್ಥಿಕ ಹಾನಿಯೂ ಶಿಕ್ಷೆ ವ್ಯಾಪ್ತಿಗೆ ತರಲು ಕರಡು ಸಿದ್ಧತೆ
>. ಯಾವುದೇ ದತ್ತಾಂಶ, ಸಂದೇಶ, ಪಠ್ಯ ಚಿತ್ರಗಳು, ಧ್ವನಿ, ಧ್ವನಿ, ಸಂಕೇತಗಳು, ಕಂಪ್ಯೂಟರ್ ಪ್ರೋಗ್ರಾಮ್‌ಗಳು ಸಾಫ್ಟ್‌ವೇರ್ ಮತ್ತು ಡೇಟಾಬೇಸ್‌ಗಳು ಕಾನೂನು ವ್ಯಾಪ್ತಿಗೆ ತಂದು ಕುಣಿಕೆ.
>. ಇನ್ನೊಬ್ಬ ವ್ಯಕ್ತಿಯ ಪರವಾಗಿ ಆ ದಾಖಲೆಯನ್ನು ಸ್ವೀಕರಿಸುವ, ಸಂಗ್ರಹಿಸುವವರು ಶಿಕ್ಷೆ ವ್ಯಾಪ್ತಿಗೆ ತರಲು ಕರಡು
. ಯಾವುದೇ ವ್ಯಕ್ತಿ ಮತ್ತು ಪ್ರಸಾರ ಮಾಡುವ ವಾಹಿನಿಗಳು, ಸಾಮಾಜಿಕ ಮಾಧ್ಯಮ ವೇದಿಕೆಗಳು, ಸರ್ಚ್ ಇಂಜಿನ್‌ಗಳು ಸೇರಿದಂತೆ ಸೇವೆ ಒದಗಿಸುವ ಎಲ್ಲರೂ ಕಾನೂನು ವ್ಯಾಪ್ತಿಗೆ ತರುವ ಸಿದ್ಧತೆ.