ಬೆಂಗಳೂರು: ರಾಜ್ಯ ಸರ್ಕಾರ ದೇಶದ್ರೋಹಿಗಳ ರಕ್ಷಣೆಗೆ ನಿಂತಿದೆ. ಯಾರು ಪಾಕಿಸ್ತಾನ ಜಿಂದಾಬಾದ್ ಅಂತಾ ಹೇಳುತ್ತಾರೋ ಅವರಿಗೆ ರಕ್ಷಣೆ ಸಿಗುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಿಡಿಕಾರಿದ್ದಾರೆ.
ಮೈಸೂರು ಉದಯಗಿರಿ (Udayagiri) ಪೋಲೀಸ್ ಠಾಣೆ ಗಲಭೆ ವಿಚಾರದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದವರಿಗೆ ರಕ್ಷಣೆ ಸಿಕ್ಕಿದಾಗಲೇ ದೇಶದ್ರೋಹಿಗಳಿಗೆ ಈ ಸರ್ಕಾರ ನಮ್ಮ ಪರವಾಗಿ ನಿಂತಿದೆ ಎಂದು ಅನ್ನಿಸಿದೆ. ನನ್ನ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ರಾಷ್ಟ್ರಧ್ವಜ ಹಿಡಿದುಕೊಂಡು ಹೋಗುತ್ತಿದ್ದವರ ಮೇಲೆ ಅಟ್ಯಾಕ್ ನಡೆಯಿತು. ಪ್ರತಿ ಸಂದರ್ಭದಲ್ಲಿ ರಾಜ್ಯದ ಸಿಎಂ, ಡಿಸಿಎಂ, ಗೃಹ ಸಚಿವರು ದೇಶದ್ರೋಹಿಗಳ ರಕ್ಷಣೆಗೆ ನಿಂತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 2018 ರಿಂದ ನೇಮಕಗೊಂಡ 698 ಮಂದಿ ನ್ಯಾಯಧೀಶರಲ್ಲಿ 108 ಮಹಿಳೆಯರು – ಮೇಘವಾಲ್
ಪೊಲೀಸ್ ಠಾಣೆಗೆ ದಾಳಿ ಆದಾಗ ಡಿಸಿಎಂ ಅವರು ಮೈನರ್ಸ್ ಎಂದು ಹೇಳಿದರು. ಅಂದರೆ ಮೈನರ್ಸ್ಗೆ ರಾಜ್ಯದಲ್ಲಿ ಕಾನೂನು ಇಲ್ವಾ? ಅವರಿಗೆ ಕಲ್ಲು ಬಿಸಾಡಲು ಬರುತ್ತದೆ, ಆದರೆ ಕಾನೂನು ಕ್ರಮ ಮಾಡಲು ನಿಮಗೆ ಆಗಲ್ಲ. ಪರಮೇಶ್ವರ್ ಕೇವಲ ಅಲ್ಪಸಂಖ್ಯಾತರ, ಮುಸಲ್ಮಾನರ, ದೇಶದ್ರೋಹಿಗಳ ರಕ್ಷಣೆ ಬಿಟ್ಟು ಬೇರೆ ಯಾವ ಕೆಲಸವನ್ನೂ ಮಾಡುತ್ತಿಲ್ಲ. ಹಿಂದೂಗಳಿಗೆ, ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಹಿಂದೂಗಳಿಗೆ ಅನ್ಯಾಯ, ಮುಸಲ್ಮಾನರಿಗೆ ರಕ್ಷಣೆ, ಇದು ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಪಕ್ಷದ ಶಿಸ್ತು ಮೀರಿ ಮಾತನಾಡುತ್ತಿರುವ ಸಚಿವರು ಶಿಶುಪಾಲನಂತೆ, ಕಾಂಗ್ರೆಸ್ ಹೈಕಮಾಂಡ್ ಶ್ರೀಕೃಷ್ಣನಂತೆ: ಸಂಸದ ಜಿ.ಸಿ ಚಂದ್ರಶೇಖರ್
ಆರ್‌ಎಸ್‌ಎಸ್‌ನವರು (RSS) ಮೈಸೂರು ಗಲಭೆ ಹಿಂದೆ ಇದ್ದಾರೆ ಎಂಬ ಕಾಂಗ್ರೆಸ್ ನಾಯಕರ ಆರೋಪದ ಕುರಿತು ಪ್ರತಿಕ್ರಿಯಿಸಿ, ಆರ್‌ಎಸ್‌ಎಸ್‌ನವರು ಅಂತಾ ಯಾರು ನೋಡಿದ್ದಾರೆ? ಪ್ರತಿ ಸಂಧರ್ಭದಲ್ಲೂ ಆರ್‌ಎಸ್‌ಎಸ್ ಟಾರ್ಗೆಟ್ ಮಾಡುವ ಕೆಲಸ ನಡೆಯುತ್ತಿದೆ. ಅವರ ತಪ್ಪು ಮುಚ್ಚಿಕೊಳ್ಳಲು ಆರ್‌ಎಸ್‌ಎಸ್ ಟಾರ್ಗೆಟ್ ಮಾಡುತ್ತಿರುವುದರಿಂದ ಕಾಂಗ್ರೆಸ್‌ಗೆ ಧಿಕ್ಕಾರ ಹೇಳುವ ಸಮಯ ಹತ್ತಿರ ಬಂದಿದೆ ಎಂದು ಗುಡುಗಿದರು. ಇದನ್ನೂ ಓದಿ: ಸಿದ್ದರಾಮಯ್ಯನಂತ ಮಾಸ್ ಲೀಡರ್‌ನ ಯಾರು ಬೇಡ ಅಂತಾರೆ: ಮಹದೇವಪ್ಪ
ಜಲಜೀವನ್ ಮಿಷನ್ ಅನುದಾನ ಬಗ್ಗೆ ಸಿಎಂ ಆರೋಪ ವಿಚಾರದ ಕುರಿತು ಮಾತನಾಡಿದ ಅವರು, ಜೆಜೆಎಂ ಯೋಜನೆ ಅನುಷ್ಠಾನ ಮಾಡುವ ಏಜೆನ್ಸಿ ರಾಜ್ಯ ಸರ್ಕಾರದ್ದು. ಯಾವ ಟೆಂಡರ್ ಕೂಡಾ ಸರಿಯಾಗಿ ಕರೆದಿಲ್ಲ ನೀವು. ನಾವು ಕೊಟ್ಟಂತಹ ದುಡ್ಡನ್ನು ನೀವು ಗ್ಯಾರಂಟಿಗಳಿಗೆ ಕೊಡುತ್ತಿದ್ದೀರಿ. ಅಭಿವೃದ್ಧಿ ಕೆಲಸ ಎಲ್ಲಿದೆ? ಕೇಂದ್ರ ಸರ್ಕಾರ ಕೊಟ್ಟ ದುಡ್ಡನ್ನು ದುರುಪಯೋಗಪಡಿಸಿಕೊಂಡು ನಮ್ಮ ಮೇಲೆ ಆರೋಪ ಹೊರಿಸುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ. ನಿಮಗೆ ಸರ್ಕಾರ ಮಾಡಲು ತಾಕತ್ ಇಲ್ಲಾಂದ್ರೆ, ಯಾವುದಕ್ಕೂ ದುಡ್ಡು ಇಲ್ಲಾಂದ್ರೆ ಯಾಕೆ ಕುರ್ಚಿಯಲ್ಲಿದ್ದೀರಿ? ಕುರ್ಚಿ ಬಿಟ್ಟು ತೊಲಗಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಸವಾರರು ಗ್ರೇಟ್ ಎಸ್ಕೇಪ್