ಬೆಂಗಳೂರು: ಹಂಪಿ ಉತ್ಸವವನ್ನು ಈ ವರ್ಷ ಆಚರಿಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ರಾಜ್ಯದ ನೂರು ತಾಲೂಕುಗಳಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಹಂಪಿ ಉತ್ಸವವನ್ನು ಮುಂದೂಡಲು ಸರ್ಕಾರ ನಿರ್ಧರಿಸಿದೆ. ಮುಂದಿನ ವರ್ಷ ವಿಜೃಂಭನೆಯಿಂದ ಆಚರಿಸಲಾಗುತ್ತದೆ ಎಂದು ಹೇಳಿದರು.
Advertisement
ಇದೇ ವೇಳೆ ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಸಚಿವರು, ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗೆ ಕೇಂದ್ರ ಜಲ ಸಂಪನ್ಮೂಲ ಇಲಾಖೆಯಿಂದ ಒಪ್ಪಿಗೆ ಸಿಕ್ಕಿದೆ. ಆದರೂ ತಮಿಳುನಾಡು ಆಕ್ಷೇಪ ವ್ಯಕ್ತಪಡಿಸುವುದು ಸರಿಯಲ್ಲ. ಅವರಿಗೆ ಯಾವುದೇ ಸಮಸ್ಯೆಯಾಗದಂತೆ ಯೋಜನೆ ಜಾರಿಗೆ ತರುತ್ತೇವೆ. ಗಡಿ ಭಾಗದಲ್ಲಿ ಯೋಜನೆ ರೂಪಿಸಿದ್ದು, ಈ ನೀರನ್ನು ಕೃಷಿಗೆ ಬಳಕೆ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನು ಓದಿ: ಮೇಕೆದಾಟು ಡ್ಯಾಂ – ಕರ್ನಾಟಕಕ್ಕೆ ಆರಂಭಿಕ ಗೆಲುವು, ತಮಿಳುನಾಡಿಗೆ ಮುಖಭಂಗ
Advertisement
ಕಾವೇರಿ ಜಲ ವಿವಾದದಲ್ಲಿ ಈಗಾಗಲೇ ನ್ಯಾಯಾಲಯದ ಆದೇಶ ನೀಡಿದಂತೆ ತಮಿಳುನಾಡಿಗೆ ನೀರು ಬಿಡುತ್ತೇವೆ. ಇದರಲ್ಲಿ ಯಾವುದೇ ವ್ಯತ್ಯಾಸ ಆಗಲ್ಲ. ತಮಿಳುನಾಡು ಬಯಸಿದರೆ ಮಾತುಕತೆಗೆ ನಾವು ಸಿದ್ಧರಿದ್ದೇವೆ. ಸಿಎಂ ಕುಮಾರಸ್ವಾಮಿ ಅವರೊಂದಿಗೆ ಡಿಸೆಂಬರ್ 6ರಂದು ಸಭೆ ನಡೆಸಿ, ಚರ್ಚಿಸಲಾಗುತ್ತದೆ. ಇದಾದ ಬಳಿಕ ಮುಂದಿನ ನಿರ್ಧಾರಕ್ಕೆ ಕೈ ಹಾಕಲಿದ್ದೇವೆ ಎಂದು ತಿಳಿಸಿದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv