ಮುಂಬೈ: ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆಗೆ ಜವಾಬ್ದಾರಿ ಅಲ್ಲ. ನೀವು ಕೇಂದ್ರದಲ್ಲಿ ಮಾಡಿರುವ ತಪ್ಪಿಗೆ ನಮ್ಮನ್ನು ದೂಷಿಸಬೇಡಿ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿಗೆ ತಿರುಗೇಟು ನೀಡಿದ್ದಾರೆ.
Advertisement
ಇಂಧನಗಳ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (VAT) ಕಡಿತಗೊಳಿಸುವಂತೆ ನರೇಂದ್ರ ಮೋದಿ ಬಿಜೆಪಿಯೇತರ ರಾಜ್ಯಗಳಿಗೆ ಮನವಿ ಮಾಡಿದ್ದರು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಉದ್ಧವ್ ಠಾಕ್ರೆ, ಮುಂಬೈನಲ್ಲಿ ಡೀಸೆಲ್ ಲೀ. 24.38 ರೂ. ಕೇಂದ್ರ ತೆರಿಗೆ ಮತ್ತು 22.37 ರೂ. ರಾಜ್ಯ ತೆರಿಗೆ. ಪೆಟ್ರೋಲ್ 31.58 ರೂ. ಕೇಂದ್ರ ಮತ್ತು 32.55 ರೂ. ರಾಜ್ಯ ತೆರಿಗೆ. ಇದರಿಂದಾಗಿ ರಾಜ್ಯದಲ್ಲಿ ಇಂಧನ ದರ ಏರಿಕೆ ಕಂಡಿದೆ. ನಾವು ರಾಜ್ಯದಲ್ಲಿ ಈಗಾಗಲೇ ನ್ಯಾಚುರಲ್ ಗ್ಯಾಸ್ ಮೇಲಿನ ತೆರಿಗೆ ವಿನಾಯಿತಿ ನೀಡಿದ್ದೇವೆ ಎಂದರು. ಇದನ್ನೂ ಓದಿ: ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸಿ: ರಾಜ್ಯಗಳಿಗೆ ಮೋದಿ ಮನವಿ
Advertisement
Advertisement
ಕೇಂದ್ರ ಸರ್ಕಾರ ಹೆಚ್ಚಿನ ತೆರಿಗೆ ಹಾಕಿಕೊಂಡು ಇದೀಗ ರಾಜ್ಯ ಸರ್ಕಾರಗಳ ಮೇಲೆ ಬೆರಳು ತೊರಿಸುತ್ತಿದೆ. ಮೊದಲು ಕೇಂದ್ರ ಇಂಧನಗಳ ತೆರಿಗೆಯನ್ನು ಇನ್ನಷ್ಟು ಕಡಿತಗೊಳಿಸಲಿ ಆ ಬಳಿಕ ರಾಜ್ಯಗಳಲ್ಲೂ ಕಡಿತಗೊಳಿಸಬಹುದು. ಮಹಾರಾಷ್ಟ್ರ 15% ಜಿಎಸ್‍ಟಿ ತೆರಿಗೆ ಸಂಗ್ರಹದ ಮೂಲಕ ಅತಿ ಹೆಚ್ಚಿನ ತೆರಿಗೆ ಸಂಗ್ರಹಿಸುವ ರಾಜ್ಯಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಮಾಹಿತಿ ಹಂಚಿಕೊಂಡರು.
Advertisement
ಈ ಮೊದಲು ನಾನು ಯಾರನ್ನೂ ಟೀಕಿಸುತ್ತಿಲ್ಲ, ಚರ್ಚಿಸುತ್ತಿದ್ದೇನಷ್ಟೆ. ಕಾರಣಾಂತರಗಳಿಂದ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಮತ್ತು ಜಾಖರ್ಂಡ್ ರಾಜ್ಯಗಳು ಇಂಧನದ ಮೇಲಿನ ಮೌಲ್ಯವರ್ಧಿತ ತೆರಿಗೆ ಕಡಿತಗೊಳಿಸಲು ಒಪ್ಪಲಿಲ್ಲ. ಪರಿಣಾಮವಾಗಿ ಹೆಚ್ಚಿನ ಬೆಲೆಗಳ ಹೊರೆ ನಾಗರಿಕರ ಮೇಲೆ ಉಳಿಯಿತು ಎಂದು ನರೇಂದ್ರ ಮೋದಿ ಹೇಳಿದ್ದರು. ಇದನ್ನೂ ಓದಿ: ಹೃದಯಗಳ ರಾಣಿ ಮಮತಾ ಲೋಕಸಭೆ ಚುನಾವಣೆಯಲ್ಲಿ ಗೇಮ್ ಚೇಂಜರ್ ಆಗಲಿದ್ದಾರೆ: ಶತ್ರುಘ್ನ ಸಿನ್ಹಾ
ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಕೇಂದ್ರವು ಕಳೆದ ನವೆಂಬರ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡಿದೆ. ರಾಜ್ಯಗಳು ತಮ್ಮ ತೆರಿಗೆಯನ್ನು ಕಡಿಮೆ ಮಾಡಿ ಅದರ ಲಾಭವನ್ನು ಜನರಿಗೆ ವರ್ಗಾಯಿಸುವಂತೆ ನಾವು ವಿನಂತಿಸಿದ್ದೇವೆ. ಕೆಲವು ರಾಜ್ಯಗಳು ತೆರಿಗೆಯನ್ನು ಕಡಿಮೆ ಮಾಡಿವೆ. ಆದರೆ ಇನ್ನೂ ಕೆಲವು ರಾಜ್ಯಗಳು ಜನರಿಗೆ ಇದರಿಂದ ಯಾವುದೇ ಪ್ರಯೋಜನ ನೀಡಿಲ್ಲ. ಇದರಿಂದಾಗಿ ಈ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚುತ್ತಲೇ ಇದೆ. ಇದರಿಂದ ಈ ರಾಜ್ಯಗಳ ಜನತೆಗೆ ಅನ್ಯಾಯವಾಗಿರುವುದಲ್ಲದೇ ಬೇರೆ ರಾಜ್ಯಗಳ ಮೇಲೂ ಪರಿಣಾಮ ಬೀರಿದೆ ಎಂದಿದ್ದರು.