ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಆಯುಷ್ಮಾನ್ ಭಾರತ್ ಯೋಜನೆಯನ್ನು ರಾಜ್ಯ ಸರ್ಕಾರ ಒಪ್ಪಿಕೊಳ್ಳುವತ್ತ ಹೆಜ್ಜೆ ಹಾಕಿದ್ದು, ರಾಜ್ಯದ ಆರೋಗ್ಯ ಕರ್ನಾಟಕ ಯೋಜನೆಯನ್ನ ಆಯುಷ್ಮಾನ್ ಭಾರತ್ ಯೋಜನೆ ಜೊತೆ ವಿಲೀನ ಮಾಡಲು ನಿರ್ಧರಿಸಲಾಗಿದೆ.
ನಗರದ ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆದ ಆರೋಗ್ಯ ಇಲಾಖೆ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಸರ್ಕಾರ ತೆಗೆದುಕೊಂಡಿದೆ. ಸಿಎಂರೊಂದಿಗೆ ನಡೆದ ಸಭೆಯಲ್ಲಿ ಆರೋಗ್ಯ ಕರ್ನಾಟಕ ಯೋಜನೆಯನ್ನ ಆಯುಷ್ಮಾನ್ ಭಾರತ್ ಯೋಜನೆ ಜೊತೆ ವಿಲೀನ ಮಾಡುವ ನಿರ್ಧಾರ ಮಾಡಲಾಗಿದ್ದು, ಇದಕ್ಕೂ ಮುನ್ನ ವೈದ್ಯರೊಂದಿಗೆ ಚರ್ಚೆ ನಡೆಸಿ ತೀರ್ಮಾನ ಮಾಡಲು ಸಿಎಂ ಸೂಚನೆ ನೀಡಿದ್ದಾರೆ.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಎರಡು ಮಹತ್ವದ ಯೋಜನೆಗಳ ವಿಲೀನದಿಂದ ಉಂಟಾಗಬಹುದಾದ ಸಾಧಕ ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಿಲು ಸೂಚನೆ ಸಿಎಂ ಸೂಚನೆ ನೀಡಿದ್ದಾರೆ. ಬಡ ರೋಗಿಗಳಿಗೆ ಹೆಚ್ಚಿನ ಅನುಕೂಲವಾಗುವಂತೆ ಕಾರ್ಯಕ್ರಮ ರೂಪಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೀಗಾಗಿ ಬಹುತೇಕ ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ರಾಜ್ಯ ಸರ್ಕಾರ ಯೋಜನೆ ವಿಲೀನಗೊಳ್ಳುವುದು ಖಚಿತವಾಗಿದೆ. ಇಂದು ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಇದನ್ನೂ ಓದಿ: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://www.youtube.com/watch?v=H6_XYSZLZu8