ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಮುಖ ಆಹಾರಧಾನ್ಯವಾದ ಕುಚ್ಚಲಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ವಿಧಾನಸೌಧದಲ್ಲಿಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಿಶೇಷ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರ ಪ್ರಮುಖ ಆಹಾರ ಧಾನ್ಯ ಕುಚಲಕ್ಕಿ ಆಗಿದೆ. ಈ ಭಾಗದ ಜನರಿಗೆ ಕುಚ್ಚಲಕ್ಕಿ ಬಹುದಿನಗಳ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ಕೇರಳ ರಾಜ್ಯಕ್ಕೆ ರಾಜ್ಯದ ನಿಯೋಗ ಭೇಟಿ ನೀಡಿ ಅಧ್ಯಯನ ನಡೆಸಿದೆ ಎಂದು ತಿಳಿಸಿದರು. ಇದನ್ನೂ ಓದಿ: ಆಚರಣೆ, ವೈಭವಗಳನ್ನ ಇಷ್ಟಪಡದ ಸಿದ್ದರಾಮಯ್ಯ ಈಗ ಉತ್ಸವ ಆಚರಿಕೊಳ್ಳುತ್ತಿದ್ದಾರೆ: ವಿ.ಸೋಮಣ್ಣ
Advertisement
Advertisement
ಕರಾವಳಿ ಜಿಲ್ಲೆಗಳಿಗೆ ಪ್ರತಿ ತಿಂಗಳು 1 ಲಕ್ಷ ಕ್ವಿಂಟಾಲ್ ಅಕ್ಕಿ ಅಗತ್ಯವಿದ್ದು, ವರ್ಷಕ್ಕೆ 12 ಲಕ್ಷ ಕ್ವಿಂಟಾಲ್ ಅಗತ್ಯವಿದೆ. ಇದಕ್ಕಾಗಿ ವರ್ಷಕ್ಕೆ ಕನಿಷ್ಠ 18 ಲಕ್ಷ ಕ್ವಿಂಟಾಲ್ ಭತ್ತ ಅಗತ್ಯವಿದೆ ಎದು ವಿವರಿಸಿದರು.
Advertisement
ಜಯ, ಜ್ಯೋತಿ, ಎಂಎಫ್4 ಅಂತಹ ಭತ್ತದ ತಳಿಗಳಿಂದ ಮಾತ್ರ ಕುಚ್ಚಲಕ್ಕಿ ಮಾಡಲು ಸಾಧ್ಯವಿದೆ. ಈ ಎರಡು ಜಿಲ್ಲೆಗಳಿಂದ ಕೇವಲ ಎರಡೂವರೆ ಲಕ್ಷ ಕ್ವಿಂಟಾಲ್ ಭತ್ತ ಮಾತ್ರ ಉತ್ಪಾದನೆಯಾಗುತ್ತಿದೆ. ಇನ್ನುಳಿದ ಭತ್ತವನ್ನು ಮೈಸೂರು, ಮಂಡ್ಯ, ಶಿವಮೊಗ್ಗ, ಬೆಳಗಾವಿ ಜಿಲ್ಲೆಗಳಿಂದ ಖರೀದಿಗೆ ಕ್ರಮ ವಹಿಸಲಾಗುವುದು. ಆದರೆ ಪೂರ್ಣ ಪ್ರಮಾಣದಲ್ಲಿ ಭತ್ತ ಸಿಗುತ್ತಿಲ್ಲ. ಈ ಸಂಬಂಧ ಹೆಚ್ಚುವರಿ ಬೇಡಿಕೆಯನ್ನು ಕೇರಳ ಮತ್ತು ತೆಲಂಗಾಣ ಜಿಲ್ಲೆಗಳಿಂದ ಭತ್ತ ಪೂರೈಸಿಕೊಳ್ಳಲು ಯೋಜಿಸಲಾಗಿದೆ. ಈ ಸಂಬಂಧ ವಾರಾಂತ್ಯದಲ್ಲಿ ಮತ್ತೊಂದು ಅಧ್ಯಯನ ತಂಡ ತೆಲಂಗಾಣಕ್ಕೆ ಭೇಟಿ ನೀಡಲಿದೆ ಎಂದರು.
Advertisement
ಅಧ್ಯಯನ ತಂಡಗಳ ವರದಿ ಆಧರಿಸಿ ಕರಾವಳಿ ಜಿಲ್ಲೆಗಳ ಶಾಸಕರು ಹಾಗೂ ಸಂಸದರ ನಿಯೋಗದೊಂದಿಗೆ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಬರುವ ವರ್ಷದಿಂದಲೇ ಈ ಜಿಲ್ಲೆಗಳಿಗೆ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ನೋಡ ನೋಡುತ್ತಿದ್ದಂತೆ ಶಿವಮೊಗ್ಗ ಬೀದಿಯಲ್ಲೇ ಬರ್ಬರ ಕೊಲೆ
ಸಭೆಯಲ್ಲಿ ಅಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತೆ ಕನಗವಲ್ಲಿ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೋಡ್ಗಿ, ಅಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೋಮಣ್ಣನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ವಿಜಯಕುಮಾರ್ ಉಪಸ್ಥಿತರಿದ್ದರು.