ಧಾರವಾಡ: ಯಾವ ಪ್ರಕರಣ ವಾಪಸ್ ಪಡೆಯಬೇಕು, ಯಾವ ಪ್ರಕರಣ ವಾಪಸ್ ಪಡೆಯಬಾರದು ಎಂಬುದು ಸರ್ಕಾರಕ್ಕೆ ತಿಳಿಯಬೇಕಿತ್ತು. ಗೂಂಡಾಗಿರಿ ಮಾಡಿದವರ ಕೇಸನ್ನು ಈ ಸರ್ಕಾರ ವಾಪಸ್ ಪಡೆದಿದೆ ಎಂದು ಸಂಸದ ಜಗದೀಶ್ ಶೆಟ್ಟರ್ (Jagadish Shettar) ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿ (Hubballi) ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಮಾತನಾಡಿದ ಅವರು, ಬೇರೆ ಬೇರೆ ಸರ್ಕಾರಗಳು ಅಧಿಕಾರದಲ್ಲಿದ್ದಾಗ ಕೇಸ್ ವಾಪಸ್ ಪಡೆಯುವುದು ಸಹಜ. ರೈತರ ಹೋರಾಟದ ಕೇಸ್‌ಗಳನ್ನು ವಾಪಸ್ ಪಡೆದರೆ ಸರಿ. ಆದರೆ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ, ಪೊಲೀಸರ ಮೇಲೆ ಹಲ್ಲೆ ಮಾಡಿದವರ ಕೇಸುಗಳನ್ನು ವಾಪಸ್ ಪಡೆದಿದ್ದು ಸರಿಯಲ್ಲ. ಇದು ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಬೆಂಬಲ ನೀಡಿದಂತಾಗುತ್ತದೆ ಎಂದರು. ಇದನ್ನೂ ಓದಿ: PUBLiC TV Impact | ಕತ್ತಲಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಬೆಳಕಿನ ಭಾಗ್ಯ
Advertisement
Advertisement
ಈ ಬಗ್ಗೆ ‘ಕೈ’ ಸರ್ಕಾರ ಯೋಚಿಸಬೇಕಿತ್ತು. ಅವರಿಗೆ ಮತ್ತಷ್ಟು ಪ್ರೋತ್ಸಾಹ ಕೊಡಲು ಈ ರೀತಿ ಮಾಡಲಾಗುತ್ತಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆ ಮತ್ತಷ್ಟು ಹದಗೆಡುತ್ತದೆ. ಈ ನಿರ್ಧಾರ ಕಾನೂನಿನಡಿ ಎಷ್ಟು ನಿಲ್ಲುತ್ತದೆಯೋ ಗೊತ್ತಿಲ್ಲ. ಕೇಸಿನ ಫೈಲ್ ನೋಡಿದರೆ ಆ ಕೇಸನ್ನು ವಾಪಸ್ ಪಡೆಯಲು ಬರುವುದಿಲ್ಲ. ಆದರೂ ಕ್ಯಾಬಿನೆಟ್‌ನಲ್ಲಿ ಕೇಸ್ ವಾಪಸ್ ಪಡೆಯಲು ಒಪ್ಪಿಗೆ ನೀಡಲಾಗಿದೆ. ಇದು ಕಾನೂನು ಬಾಹಿರ. ಕೋರ್ಟ್‌ನಲ್ಲಿ ಯಾರಾದರೂ ಇದನ್ನು ಪ್ರಶ್ನಿಸಿದರೆ ಸರ್ಕಾರದ ನಿರ್ಧಾರ ಕೋರ್ಟ್‌ನಲ್ಲಿ ನಿಲ್ಲೋದಿಲ್ಲ. ಇದು ಅಲ್ಪಸಂಖ್ಯಾತರ ತುಷ್ಟೀಕರಣ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದ ಎರಡನೇ ದಸರಾ ಖ್ಯಾತಿಯ ಶಿವಮೊಗ್ಗ ದಸರಾಕ್ಕೆ 44ರ ಸಂಭ್ರಮ
Advertisement
Advertisement
ಈ ಸರ್ಕಾರ ಇಡೀ ಸಮಾಜವನ್ನು ಒಂದಾಗಿ ನೋಡಬೇಕು. ವ್ಯವಸ್ಥೆ ಹದಗೆಡಿಸುವ ರೀತಿಗೆ ಪ್ರೋತ್ಸಾಹ ಕೊಡಬಾರದು. ಈ ಕೆಲಸವನ್ನು ಕಾಂಗ್ರೆಸ್ (Congress) ಮಾಡುತ್ತಿದೆ. ತನ್ನ ರಾಜಕೀಯ ಲಾಭಕ್ಕಾಗಿ ಸರ್ಕಾರ ಈ ರೀತಿ ಮಾಡುತ್ತಿದೆ. ಇದರಿಂದ ಒಳ್ಳೆಯದಾಗುವುದಿಲ್ಲ. ಈ ಪ್ರಕರಣದಲ್ಲಿ ಎಷ್ಟೋ ರೌಡಿಶೀಟರ್‌ಗಳು ಇದ್ದಾರೆ. ಅಮಾಯಕರ ಮೇಲೆ ಹಾಕಲಾಗಿರುವ ರೌಡಿಶೀಟರ್ ಬೇಕಾದರೆ ತೆಗೆಯಲಿ. ಆದರೆ ಗೂಂಡಾಗಿರಿ ಮಾಡಿದವರ ಕೇಸ್ ವಾಪಸ್ ಪಡೆದಿದ್ದು ಸರಿಯಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: Mysuru Dasara: ಅದ್ದೂರಿ ಜಂಬೂಸವಾರಿಗೆ ಕ್ಷಣಗಣನೆ – ನಾಳೆ ಏನೆಲ್ಲಾ ವಿಶೇಷತೆ ಇರುತ್ತೆ?