Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
Last updated: February 14, 2026 7:26 pm
Public TV
Share
3 Min Read
Siddaramaiah 1 3
SHARE

ಹಾವೇರಿ: ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು, ನಮ್ಮ ಜನಪರ ಸರ್ಕಾರ. ಜಿಎಸ್‌ಟಿ (GST) ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.

ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಸಹಸ್ರ ದಿನಾಚರಣೆ ಮತ್ತು ಒಂದು ಲಕ್ಷ ಮಂದಿ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದನ್ನೂ ಓದಿ: ಈ ಬಾರಿಯ ಈಶ ಮಹಾಶಿವರಾತ್ರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು, ನಮ್ಮ ಜನಪರ ಸರ್ಕಾರ. ಕಂದಾಯ ಇಲಾಖೆಗೆ ಕೃಷ್ಣ ಬೈರೇಗೌಡರು ಸಚಿವರಾದ ಮೇಲೆ ಸರ್ಕಾರದಲ್ಲಿ ಕ್ರಾಂತಿಕಾರಿ ಪ್ರಗತಿ ಆಗಿದೆ ಎಂದು ಸಚಿವರ ಸಾಧನೆಗೆ ಸಿಎಂ ವೇದಿಕೆಯಲ್ಲೇ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ ಎಂದು ದಾಖಲೆಗಳನ್ನು ಮಂಡಿಸಿದರು. ಈ ಎಲ್ಲಾ ಸಾಧನೆ ಮತ್ತು ದಾಖಲೆಗಳನ್ನು ಕೇಂದ್ರ ಸರ್ಕಾರದ ಅನ್ಯಾಯದ ನಡುವೆಯೂ ಮಾಡಿ ತೋರಿಸಿದ್ದೇವೆ. ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿಯವರೂ, ಪ್ರಹ್ಲಾದ್ ಜೋಶಿ, ಜಗದೀಶ್ ಶೆಟ್ಟರ್ ಕೂಡ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಬಂದು 2 ವರ್ಷ 9 ತಿಂಗಳಾಯಿತು. ನಾವು ಕೊಟ್ಟ ಭರವಸೆಗಳಲ್ಲಿ 243 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಅವಧಿಯಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. 2023ರಲ್ಲೂ ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸಿ, ಪ್ರಣಾಳಿಕೆಯಲ್ಲಿ ಇಲ್ಲದ 30 ಭರವಸೆಗಳನ್ನು ಈಡೇರಿಸಿ ‘ನುಡಿದಂತೆ ನಡೆದು’ ದಾಖಲೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

ಅಧಿಕಾರ ಇದ್ದಾಗ ಕೊಟ್ಟ ಭರವಸೆ ಈಡೇರಿಸದ ಬಿಜೆಪಿ (BJP) ಈಗ ನಮ್ಮ ಖಜಾನೆ ಖಾಲಿ ಆಗಿದೆ ಎನ್ನುವ ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ. ಇಲ್ಲಿಯವರೆಗೂ ಗ್ಯಾರಂಟಿಗಳ ಮೂಲಕ 1,18,000 ಕೋಟಿ ರೂ. ನೇರವಾಗಿ ರಾಜ್ಯದ ಜನರ ಖಾತೆಗೆ ಹಾಕಿದ್ದೇವೆ ಎಂದು ಹೇಳಿದರು.

ಅಮಾರ್ತ್ಯಸೇನ್, ಅಭಿಜಿತ್ ಬ್ಯಾನರ್ಜಿ ಮುಂತಾದ ಆರ್ಥಿಕ ತಜ್ಞರ ಜೊತೆಗೆ ದಿನ ಪತ್ರಿಕೆಗಳು ಮತ್ತು ವಿಶ್ವ ವಿದ್ಯಾಲಯಗಳ ಅಧ್ಯಯನಗಳು ವ್ಯಕ್ತಪಡಿಸಿದ್ದ ಸದಾಭಿಪ್ರಾಯಗಳನ್ನು ಮುಖ್ಯಮಂತ್ರಿಗಳು ಓದಿ ವಿವರಿಸಿ, ಬಿಜೆಪಿಯವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ ಎಂದರು.

ಕೇಂದ್ರಸರ್ಕಾರ ರಾಜ್ಯಕ್ಕೆ ಅನುದಾನ ನೀಡದೇ ಅನ್ಯಾಯ ಮಾಡುತ್ತಿದೆ. 1,000 ದಿನಗಳ ಯಶಸ್ವಿ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿಯಾಗಿದೆ. ನಮ್ಮ ಸರ್ಕಾರ 1,000 ದಿನಗಳನ್ನು ಯಶಸ್ವಿಯಾಗಿ ಆಡಳಿತ ನಡೆಸಿದ್ದು, ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ತಿಳಿಸಿದರು.

ನಾವು ಎಲ್ಲ ಜಾತಿ ಧರ್ಮ ಭಾಷೆಯ ಜನರಿಗೆ ಸೇರಿದಂತಹ ಎಲ್ಲರನ್ನೊಳಗೊಂಡ ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರ ನಂಬಿಕೆಯಿರಿಸಿದೆ. ನಾವು ಅಸಮಾನತೆ ನೀಗಿಸುವ ಕಾಯಕದಲ್ಲಿ ತೊಡಗಿದ್ದೇವೆ. ಬಿಜೆಪಿಯವರು 4 ವರ್ಷ ಏನು ಮಾಡಿಲ್ಲ. ಅವರು ಜನರನ್ನು ತಪ್ಪು ದಾರಿಗೆಳೆಯುವುದು ಖಂಡನೀಯ. ಬಿಜೆಪಿಯವರ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದರು. ಇದನ್ನೂ ಓದಿ: ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

ಸರ್ಕಾರ ಶುಕ್ರವಾರ ಒಂದು ಸಾವಿರ ದಿನ ಪೂರೈಸಿದ್ದು, ಈ ಸಾವಿರ ದಿನಗಳಲ್ಲಿ ನಮ್ಮ ಸಾಧನಾ ಸಮಾವೇಶ ನಮ್ಮ ಬದ್ಧತೆಯಾಗಿದೆ. ಬಡವರು, ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು, ಮಹಿಳೆಯರು, ಕಾರ್ಮಿಕರ ಪರವಾಗಿ ನಾವು ನಿಲ್ಲುತ್ತೇವೆ ಎಂದು ಮತ್ತೊಮ್ಮೆ ತಿಳಿಸುತ್ತೇನೆ ಎಂದು ಪುನರುಚ್ಚರಿಸಿದರು.

ಕೇಂದ್ರ ಸರ್ಕಾರ, ರಾಜ್ಯಕ್ಕೆ ಅನ್ಯಾಯ ಮಾಡಿದೆ. ಜಿಎಸ್‌ಟಿ ಸಂಗ್ರಹಣೆಯಲ್ಲಿ ಕೊರತೆಯಾಗಿದ್ದು, ರಾಜ್ಯಕ್ಕೆ 12-15 ಸಾವಿರ ಕೋಟಿ ನಷ್ಟವಾಗಿದೆ. ನಮಗೆ ಬರುವ ನ್ಯಾಯಯುತ ಪಾಲು ಸಿಗುತ್ತಿಲ್ಲ. ಜೆಜೆಎಂನಲ್ಲಿ 15 ಸಾವಿರ ಕೋಟಿ ಇನ್ನೂ ಕೊಟ್ಟಿಲ್ಲ. ಈ ಅನುದಾನ ನೀಡಿದರೆ, ರಾಜ್ಯದ ಬಹಳಷ್ಟು ರಾಜ್ಯದಲ್ಲಿ ಬಹಳಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತವೆ. ರಾಜ್ಯದ ಹಣಕಾಸಿನ ಪರಿಸ್ಥಿತಿಯನ್ನು ಪರಿಶೀಲಿಸಿ, ಜಿಲ್ಲೆಯ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ಜನಸೇವೆಯಲ್ಲಿ ಸಾರ್ಥಕ ಸಾವಿರ ದಿನ, ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ ಕಾರ್ಯಕ್ರಮದಲ್ಲಿ ಉತ್ತಮ ಕಾರ್ಯಕ್ಷಮತೆ ತೋರಿದ ಅಧಿಕಾರಿಗಳನ್ನೂ ಗುರುತಿಸಿ ಸನ್ಮಾನಿಸಲಾಯಿತು.

ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಶಿವಾನಂದ ಪಾಟೀಲ್, ಹೆಚ್.ಕೆ. ಪಾಟೀಲ್, ಸತೀಶ್ ಜಾರಕಿಹೊಳಿ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ವಿಧಾನ ಪರಿಷತ್ತಿನಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ಹಾಗೂ 20ಕ್ಕೂ ಹೆಚ್ಚು ಮಂದಿ ಶಾಸಕರುಗಳು ಮತ್ತು ಮುಖಂಡರುಗಳು, ನಾಯಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

TAGGED:congressgstgurantee schemehaverikarnatakasiddaramaiahಕರ್ನಾಟಕಕಾಂಗ್ರೆಸ್ಗ್ಯಾರಂಟಿ ಯೋಜನೆಜಿಎಸ್‍ಟಿಸಿದ್ದರಾಮಯ್ಯಹಾವೇರಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Mohamad Safa
Latest

ಇರಾನ್‌ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ

Public TV
By Public TV
1 hour ago
DAVANAGERE CRIME
Crime

ಹೊನ್ನಾಳಿಯಲ್ಲಿ ಸಿನಿಮೀಯ ರೀತಿಯ ದರೋಡೆ – ಕಾರು ಅಡ್ಡಗಟ್ಟಿ 38 ಲಕ್ಷ ರಾಬರಿ

Public TV
By Public TV
1 hour ago
Vaibhav Sooryavanshi
Cricket

15 ಎಸೆತಗಳಲ್ಲಿ ಫಿಫ್ಟಿ ಹೊಡೆದು 15ನೇ ವರ್ಷದ ಹುಟ್ಟುಹಬ್ಬ ಆಚರಿಸಿದ ಸೂರ್ಯವಂಶಿ – ರಾಯಲ್ಸ್‌ಗೆ ಭರ್ಜರಿ ಜಯ

Public TV
By Public TV
1 hour ago
Medical student commits suicide by jumping from apartment in Mangaluru
Crime

ಗೆಳತಿಯ ಅಪಾರ್ಟ್‌ಮೆಂಟ್‌ನಿಂದ ಜಿಗಿದು ಮೆಡಿಕಲ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
2 hours ago
Amit Shah 4
Latest

ಇಂದಿರಾ ಗಾಂಧಿಗೆ ಎಡಪಂಥೀಯ ಗುಂಪುಗಳ ಬೆಂಬಲ, ರಾಹುಲ್‌ ನಕ್ಸಲ್‌ ಬೆಂಬಲಿಗರೊಂದಿಗೆ ವೇದಿಕೆ ಹಂಚಿಕೊಳ್ತಾರೆ: ಅಮಿತ್‌ ಶಾ

Public TV
By Public TV
3 hours ago
Mahavir Jayanti procession Burude case tableau attracts attention Belagavi
Belgaum

ಮಹಾವೀರ ಜಯಂತಿ ಮೆರವಣಿಗೆ – ಗಮನ ಸೆಳೆದ ಬುರುಡೆ ಕೇಸ್‌ ಟ್ಯಾಬ್ಲೋ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?