ಬೆಂಗಳೂರು: ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಪಂ.ಕೆ.ವೆಂಕಟೇಶ್ ಕುಮಾರ್ (Pandit Venkatesh Kumar) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ (Shivaraj Tangadagi) ಹೇಳಿದ್ದಾರೆ.
ದೇಶ ವಿದೇಶಗಳಲ್ಲಿ ತಮ್ಮ ಅದ್ಭುತ ಗಾಯನದ ಮೂಲಕ ಖ್ಯಾತರಾಗಿರುವ ಹಿಂದುಸ್ತಾನಿ ಸಂಗೀತ ದಿಗ್ಗಜರಲ್ಲಿ ಒಬ್ಬರೆನಿಸಿದ ಪಂ. ವೆಂಕಟೇಶ್ ಕುಮಾರ್ ಅವರ ಆಯ್ಕೆ ಅತ್ಯಂತ ಸಂತೋಷ ತಂದಿದೆ. ಸೆಪ್ಟೆಂಬರ್ 22ರಂದು ಮೈಸೂರಿನ ಅರಮನೆಯ ಮುಂಭಾಗದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ. ವೈ ಕೆ ಮುದ್ದುಕೃಷ್ಣ ಅವರ ಆಯ್ಕೆ ಸಲಹಾ ಸಮಿತಿ ಪಂ. ವೆಂಕಟೇಶ್ ಕುಮಾರ್ ಅವರನ್ನು ಆಯ್ಕೆ ಮಾಡಿದೆ ಎಂದರು. ಇದನ್ನೂ ಓದಿ: ಜಾತಿ ಗಣತಿಯಲ್ಲಿ ಸಾಕಷ್ಟು ದೋಷಗಳಿವೆ, ಸಮೀಕ್ಷೆ ಮುಂದೂಡಬೇಕು: ವಚನಾನಂದ ಸ್ವಾಮೀಜಿ
ಈ ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಅಲ್ಪಸಂಖ್ಯಾತ ಮುಸ್ಲಿಮರು ಹೆಚ್ಚಿದ್ದಾರೆಂದು ತೋರಿಸಲು ಸಿದ್ದರಾಮಯ್ಯ ನಾಟಕ – ಯತ್ನಾಳ್