ಶಿವಮೊಗ್ಗ: ಕಾಂಗ್ರೆಸ್ ಹಾಗೂ ಜೆಡಿಎಸ್ ಮನೆಗಳು ಬಿಜೆಪಿಯ ಮನೆಗಳಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಮನೆಗಳು ಬಿಜೆಪಿಯ ಮನೆಗಳಾಗುತ್ತವೆ. ಮಂಗಳವಾರ ನಾಮಪತ್ರ ಸಲ್ಲಿಕೆ ಮುಗಿದ ಮೇಲೆ ರಾಜಕೀಯ ಏರುಪೇರು ಆಗಲಿದೆ. ಅಲ್ಲದೇ ಕಾಂಗ್ರೆಸ್ ಜೆಡಿಎಸ್ ಒಬ್ಬರ ಮುಖ ಇನ್ನೊಬ್ಬರು ನೋಡದ ಪರಿಸ್ಥಿತಿ ನಿರ್ಮಾಣ ಆಗಲಿದೆ. ನಾನು ಈಗಲೇ ಭವಿಷ್ಯ ಹೇಳುವುದಿಲ್ಲ. ಕಾದು ನೋಡಿ ಮುಂದೆ ಏನಾಗುತ್ತೆ ಎಂದು ತಿಳಿಸಿದರು.
ಮಂಗಳವಾರ ಮಂಡ್ಯದಲ್ಲಿ ಸಾವಿರಾರು ಕಾರ್ಯಕರ್ತರ ಜೊತೆ ಪಕ್ಷದ ಅಭ್ಯರ್ಥಿ ಡಾ.ಸಿದ್ದರಾಮಯ್ಯನವರ ನಾಮಪತ್ರ ಸಲ್ಲಿಸಲು ತೆರಳುತ್ತೇವೆ. ಅದಾದ ಬಳಿಕ ಅಲ್ಲಿಂದ ನೇರವಾಗಿ ಜಮಖಂಡಿಗೆ ಹೋಗುತ್ತೇನೆ. ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆಯ ಉಪಚುನಾವಣೆಗಳು ಇಡೀ ದೇಶದ ಗಮನ ಸೆಳೆದಿವೆ ಎಂದು ಹೇಳಿದ್ರು.
ಸಿಎಂ ಕುಮಾರಸ್ವಾಮಿ ನಾಲ್ಕು ತಿಂಗಳಿಂದ ಸಾಲಮನ್ನಾದ ಕಥೆ ಹೇಳಿಕೊಂಡು ಓಡಾಡುತ್ತಿದ್ದಾರೆ. ಈಗ ರಾಷ್ಟ್ರೀಕೃತ ಬ್ಯಾಂಕ್ ಸಾಲಮನ್ನಾ ಮಾಡಲು ಮೋದಿ ಅಡ್ಡಿಯಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಇವರಿಗೆಲ್ಲಾ ನಾಚಿಕೆ ಆಗಬೇಕು. ಜನರಿಗೆ ವಂಚನೆ-ದ್ರೋಹ ಮಾಡುತ್ತಿದ್ದಾರೆ. 10 ಸಾವಿರ ಕೋಟಿ ರೂ. ಬಾಕಿ ಇದೆ. ರಾಜ್ಯದಲ್ಲಿ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಉಸಿರುಗಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಟಿ ದೇವೇಗೌಡರನ್ನು ನಿಲ್ಲಿಸಿ ಸಿದ್ದರಾಮಯ್ಯನವರನ್ನು ಸೋಲಿಸಿದ್ದು ಯಾರು ಎಂದು ಪ್ರಶ್ನಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv