ಕಲಬುರಗಿ: ರೈತರ ಜಮೀನು, ಹಿಂದೂ ದೇವಾಲಯ ಹಾಗೂ ಮಠಗಳು ವಕ್ಫ್ ಆಸ್ತಿ ಎಂದು ನೋಟಿಸ್ ನೀಡುತ್ತಿರುವುದನ್ನು ನೋಡಿದರೆ ಈ ರಾಜ್ಯವನ್ನು ಮಸೀದಿಗಳೇ ನಡೆಸುತ್ತಿರುವ ಹಾಗೆ ಅನಿಸುತ್ತಿದೆ. ಕೂಡಲೇ ವಕ್ಫ್ ಬೋರ್ಡ್ (Waqf Board) ರದ್ದುಪಡಿಸಬೇಕೆಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ತಾಕೀತು ಮಾಡಿದರು.
ಕಲಬುರಗಿಯ (Kalaburagi) ಐವಾನ್-ಇ-ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜಾಪುರ, ಯಾದಗಿರಿ, ಕಲಬುರಗಿ, ತುಮಕೂರು, ಚಿತ್ರದುರ್ಗದಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಹಾಗಾಗಿ, ಮಸೀದಿಗಳು ಆ ಜಾಗ, ಈ ಜಾಗ ನಮಗೆ ಸೇರಿದ್ದು ಎಂದು ಸರ್ಕಾರಕ್ಕೆ ಪತ್ರ ಬರೆದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಚಿತ್ರದುರ್ಗ| ಚಳ್ಳಕೆರೆಯಲ್ಲಿ ವಕ್ಫ್ ಬೋರ್ಡ್ ವಿರುದ್ಧ ಆಸ್ತಿ ಕಬಳಿಕೆ ಯತ್ನ ಆರೋಪ
Advertisement
Advertisement
ಹೀಗೆ ಮಸೀದಿಗಳು ಸರ್ಕಾರ ನಡೆಸುವಂತಹ ಪರಿಸ್ಥಿತಿ ಇವರು ತಂದುಕೊಂಡಿದ್ದಾರೆ. ಹಾಗಾಗಿ, ತಕ್ಷಣ ವಕ್ಫ್ ಬೋರ್ಡ್ ರದ್ದುಪಡಿಸಬೇಕು. ಎಲ್ಲೆಲ್ಲಿ ಎಷ್ಟೆಷ್ಟು ಆಸ್ತಿ ಇದೆ ಎಂಬುದನ್ನು ವಕ್ಫ್ ಬೋರ್ಡ್ ಮೊದಲು ಘೋಷಿಸಲಿ ಎಂದು ಸವಾಲು ಹಾಕಿದರಲ್ಲದೆ, ಈ ದೇಶ ಯಾರಪ್ಪನ ಆಸ್ತಿಯೂ ಅಲ್ಲ. ಇದು ಹಿಂದೂಸ್ತಾನ್ ಎಂಬುದನ್ನು ಮರೆಯಬಾರದು. ಇದೇ ರೀತಿ ಮುಂದುವರೆದರೆ ಈ ದೇಶಕ್ಕೆ ಗಂಡಾಂತರ ಒದಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿಜಯಪುರದಲ್ಲಿ ರೈತರಿಗೆ ನೀಡಿರೋ ನೋಟಿಸ್ ವಾಪಸ್ ಪಡೆಯುತ್ತೇವೆ: ಸಿಎಂ ಘೋಷಣೆ
Advertisement
Advertisement
ಮುಡಾ ಪ್ರಕರಣ (Muda Case) ಕುರಿತು ಪ್ರಸ್ತಾಪಿಸಿ, 14 ಸೈಟ್ ವಾಪಸ್ ಕೊಟ್ಟಾದ ಬಳಿಕ ಸಿದ್ಧಾರ್ಥ ಟ್ರಸ್ಟ್ ಪಡೆದಿದ್ದ 5 ಎಕರೆ ಜಮೀನು ಕೂಡ ಸರ್ಕಾರಕ್ಕೆ ವಾಪಸ್ ಕೊಟ್ಟಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಈ ದೇಶದ ಕಾನೂನಿಗೆ ಇಲ್ಲಿ ಗೌರವ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಸರು ಪ್ರಸ್ತಾಪಿಸದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ: ಸಿಎಂ
ಈ ಮಂದಿ ಸಂವಿಧಾನ ಕೈಯಲ್ಲಿ ಹಿಡಿದು ಓಡಾಡುತ್ತಾರೆ. ಮತ್ತೊಂದೆಡೆ ಸಂವಿಧಾನ ವಿರೋಧಿ ನಡೆ ಅನುಸರಿಸುತ್ತಾರೆ. ನಮ್ಮದು ಶೇ.40 ಸರ್ಕಾರ ಎಂದು ಟೀಕಿಸಿದವರು ಈಗ ಶೇ.60 ಪಡೆಯುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರಲ್ಲದೆ, ಹೀಗಾದರೆ ಅಭಿವೃದ್ಧಿ ಹೇಗಾಗುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಜಾತಿಗಣತಿಯನ್ನ ಈ ಸರ್ಕಾರ ಯಾಕೆ ಬಿಡುಗಡೆ ಮಾಡ್ತಿಲ್ಲ: ಕುಮಾರಸ್ವಾಮಿ ಪ್ರಶ್ನೆ
ಒಳಮೀಸಲಾತಿಗೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿರುವುದು ಕೇವಲ ಕಾಲಹರಣದ ಸಂಚು. ಒಳಮೀಸಲಾತಿ ಕುರಿತಂತೆ ಸಂಪೂರ್ಣ ವರದಿ ಸಿದ್ಧವಿತ್ತು. ಆದರೂ ಇವರು ಕಾಲಹರಣ ಮಾಡುತ್ತಿದ್ದಾರೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ಒಳಮೀಸಲಾತಿ ಜಾರಿಗೆ ತರುವುದಾಗಿ ಪ್ರಣಾಳಿಕೆಯಲ್ಲೇ ಹೇಳಿದ್ದನ್ನು ಮರೆತಿದ್ದಾರೆ. ಈ ಸರ್ಕಾರ, ಮೋಸ ವಂಚನೆಗೆ ಹೆಸರಾಗಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದರು. ಇದನ್ನೂ ಓದಿ: 3 ತಿಂಗಳ ಒಳಗೆ ಒಳಮೀಸಲಾತಿ ಜಾರಿಗೆ ಕ್ರಮ: ಸಿದ್ದರಾಮಯ್ಯ
ಕೆಕೆಆರ್ ಡಿಬಿ ಹಗರಣ ಸಿಬಿಐ ತನಿಖೆಗೆ ಆಗ್ರಹ:
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ನಡೆದಿರುವ ಹಗರಣದ ಸಮಗ್ರ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು. ಕಲ್ಯಾಣ ಕರ್ನಾಟಕವನ್ನು ಸ್ಮಶಾನ ಕರ್ನಾಟಕ ಮಾಡಲು ಹೊರಟಿದ್ದಾರೆ ಎಂದು ಯಾರದ್ದೇ ಹೆಸರು ಪ್ರಸ್ತಾಪಿಸದೆ ಸ್ಥಳೀಯ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಯಾರನ್ನೋ ಓಲೈಸಲು ಹೋದರೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ರಾಜ್ಯ ಸರ್ಕಾರಕ್ಕೆ ಹೆಚ್‌ಡಿಕೆ ಎಚ್ಚರಿಕೆ
ಶಾಸಕ ಬಸವರಾಜ ಮತ್ತಿಮುಡ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ರವಿಚಂದ್ರ ಕಾಂತಿಕಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರ ಟೀಕೆಗೆ ನ.23ಕ್ಕೆ ಉತ್ತರ ಕೊಡ್ತೀನಿ: ಹೆಚ್‌ಡಿಕೆ