ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ವಿಶೇಷವಾಗಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಕರ್ನಾಟಕದಲ್ಲಿ ಸೆಪ್ಟೆಂಬರ್ 3ರಂದು ಕೆಲವೆಡೆ ಗುಡುಗು-ಮಿಂಚು ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಭಾರೀ ಮಳೆಯ ಎಚ್ಚರಿಕೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೆಪ್ಟೆಂಬರ್ 3ರಂದು ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಚಟುವಟಿಕೆ ತುಸು ಕಡಿಮೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ ಸೇರಿದಂತೆ ಕೆಲವೆಡೆ ಮೋಡ ಕವಿದ ವಾತಾವರಣದ ಜೊತೆಗೆ ತುಂತುರು ಮಳೆಯಾಗಬಹುದು. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಒಟ್ಟಾರೆ ರಾಜ್ಯದಲ್ಲಿ ಮಳೆ ಚಟುವಟಿಕೆ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮೈಸೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.

ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 30-25
ಶಿವಮೊಗ್ಗ: 29-21
ಬೆಳಗಾವಿ: 28-22
ಮೈಸೂರು: 30-21

ಮಂಡ್ಯ: 32-21
ಮಡಿಕೇರಿ: 25-18
ರಾಮನಗರ: 31-20
ಹಾಸನ: 28-19
ಚಾಮರಾಜನಗರ: 31-19
ಚಿಕ್ಕಬಳ್ಳಾಪುರ: 30-19

ಕೋಲಾರ: 30-20
ತುಮಕೂರು: 30-19
ಉಡುಪಿ: 29-25
ಕಾರವಾರ: 29-24
ಚಿಕ್ಕಮಗಳೂರು: 24-19

ದಾವಣಗೆರೆ: 30-21
ಹುಬ್ಬಳ್ಳಿ: 27-20
ಚಿತ್ರದುರ್ಗ: 29-20
ಹಾವೇರಿ: 28-21
ಬಳ್ಳಾರಿ: 32-23
ಗದಗ: 31-22
ಕೊಪ್ಪಳ: 31-22

ರಾಯಚೂರು: 33-24
ಯಾದಗಿರಿ: 33-23
ವಿಜಯಪುರ: 31-21
ಕಲಬುರಗಿ: 32-22
ಬಾಗಲಕೋಟೆ: 31-22
