ಪಬ್ಲಿಕ್ ಟಿವಿಯ ಬದ್ರುದ್ದೀನ್ ಮಾಣಿಗೆ ಕೆಂಪೇಗೌಡ ಸ್ಮಾರಕ ಪ್ರಶಸ್ತಿ

Public TV
1 Min Read
MNG BADRUDDIN SIR Ok

ಮಂಗಳೂರು: ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನವು ಮಂಗಳೂರಿನಲ್ಲಿ ನಡೆಯಿತು. ಎರಡು ದಿನಗಳ ಕಾಲ ನಡೆದ ಸಮ್ಮೇಳನದ ಸಮಾರೋಪದಲ್ಲಿ ಪಬ್ಲಿಕ್ ಟಿವಿಯ ಪೊಲಿಟಿಕಲ್ ಹೆಡ್ ಬದ್ರುದ್ದೀನ್ ಕೆ.ಮಾಣಿ ಅವರಿಗೆ ನಾಡ ಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ ಲಭಿಸಿದೆ.

ಮಾಧ್ಯಮ ಕ್ಷೇತ್ರದಲ್ಲಿ ಬದ್ರುದ್ದೀನ್ ಕೆ.ಮಾಣಿ ಅವರು ಕಳೆದ ಎರಡೂವರೆ ದಶಕಗಳಿಂದ ಸೇವೆ ಸಲ್ಲಿಸುತ್ತಿರುವುದನ್ನು ಗುರುತಿಸಿ ಕರ್ನಾಟಕ ಪತ್ರಕರ್ತರ ಸಂಘ ಪ್ರಶಸ್ತಿ ನೀಡಿದೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

MNG BADRUDDIN SIR S

ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಪ್ರಮುಖ ಗಣ್ಯರು ಉಪಸ್ಥಿತರಿದ್ದರು. ಪ್ರಶಸ್ತಿ ಪಡೆದ ಮಾಣಿ ಮಾತನಾಡಿದ ಬದ್ರುದ್ದೀನ್ ಕೆ.ಮಾಣಿ, ಈ ಪ್ರಶಸ್ತಿಯು ತಮಗೆ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ಸಂಸ್ಥೆ ಹಾಗೂ ಸಹೋದ್ಯೋಗಿಗಳಿಗೆ ಸಲ್ಲಬೇಕು ಎಂದರು.

Share This Article
Leave a Comment

Leave a Reply

Your email address will not be published. Required fields are marked *