ಬೆಂಗಳೂರು: ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ್ದಾರೆಂಬ ಆರೋಪದ ಮೇಲೆ ಈಗಷ್ಟೇ ಬಂಧನಕ್ಕೊಳಗಾಗಿದ್ದ ನಟ ಚೇತನ್‌ಗೆ ಮೇ 31ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ.
ಕಳೆದ ವರ್ಷ ಬ್ರಾಹ್ಮಣ್ಯದ ವಿರುದ್ಧ ಹೇಳಿಕೆ ನೀಡಿದ್ದರೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆ 2ನೇ ಬಾರಿಗೆ ಸಮನ್ಸ್ ನೀಡಿದೆ. ಇದನ್ನೂ ಓದಿ: ಬ್ರಾಹ್ಮಣ್ಯದ ವಿರುದ್ಧ ಪೋಸ್ಟ್ – ನಾಳೆ ನಟ ಚೇತನ್ ವಿಚಾರಣೆ
Advertisement
Advertisement
IPC (ಭಾರತೀಯ ದಂಡ ಸಂಹಿತೆ) ಸೆಕ್ಷನ್ 295A (ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು), ಸೆಕ್ಷನ್ 153(1)C (ಹಗೆತನದ ಭಾವನೆಗಳು ಮೂಡುವಂತೆ ಪ್ರತಿಪಾದನೆ ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಇದೇ ಮೇ 31ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
Advertisement
ಇದನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿರುವ ನಟ ಚೇತನ್, ನಾನು ಅವರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 2021ರ ಜೂನ್ 16ರಂದು ವಿಚಾರಣೆಗೆ ಹಾಜರಾಗಿದ್ದರು. ಇದೀಗ ಮತ್ತೆ ಸಮನ್ಸ್ ಬಂದಿದ್ದು, 2ನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ. ಇದನ್ನೂ ಓದಿ: ಕನ್ನಡ ಸಿನಿಮಾ ಕಳಪೆ ಎಂದ ನೆಟ್ಟಿಗ – ಚೇತನ್ ಬೆಂಬಲ, ರಕ್ಷಿತ್ ಶೆಟ್ಟಿ ಕಿಡಿ
Advertisement
ಹಿನ್ನೆಲೆ ಏನು?: ನಟ ಚೇತನ್ ಬ್ರಾಹ್ಮಣ್ಯದ ವಿರುದ್ಧ ಅವಹೇಳನವಾಗಿ ಮಾತನಾಡಿದ್ದಾರೆ. ಸಮಾಜದಲ್ಲಿ ಸಾಮರಸ್ಯ ಹಾಳು ಮಾಡಿ, ಜಾತಿ ಜಾತಿಗಳ ನಡುವೆ ಗಲಭೆ ಉಂಟು ಮಾಡಲು ಪ್ರಚೋದನೆ ನೀಡಿದ್ದಾರೆ. ಅವರ ಹೇಳಿಕೆಗಳು ಯು ಟ್ಯೂಬ್ , ಫೇಸ್ ಬುಕ್ ನಲ್ಲಿ ವೈರಲ್ ಆಗಿವೆ ಎಂದು ವಿಪ್ರ ಯುವ ವೇದಿಕೆಯ ಪವನ್ ಕುಮಾರ್ ಶರ್ಮಾ ದೂರು ನೀಡಿದ್ದರು. ದೂರು ಸಂಬಂಧ ಎಫ್‌ಐಆರ್ ದಾಖಲಿಸಿದ್ದ ಬಸವನಗುಡಿ ಪೊಲೀಸರು, ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಈ ಹಿಂದೆ ನೋಟಿಸ್ ನೀಡಿದ್ದರು.
ಈ ನೋಟಿಸ್‌ನಲ್ಲಿ ಬ್ರಾಹ್ಮಣ್ಯ, ಪುರೋಹಿತ ಶಾಹಿ, ಬ್ರಾಹ್ಮಣ ವಿರೋಧವಾಗಿ ಮಾತಾಡಿರುವ ವೀಡಿಯೋ ನಿಮ್ಮದೇನಾ? ನಿಮ್ಮ ಪಾಸ್ಪೋರ್ಟ್ ನಂಬರ್ ಏನು? ವೀಸಾ ಮಾಹಿತಿ ತಿಳಿಸಿ? ಶ್ರೇಣಿಕೃತ ಅಸಮಾನತೆಯ ವ್ಯವಸ್ಥೆಯಿಂದ ಪುರೋಹಿತ ಶಾಹಿ ವರ್ಗದವರಿಗೆ ಹೇಗೆ ಲಾಭವಾಗುತ್ತದೆ? ಹೀಗೆ 36 ಪ್ರಶ್ನೆಗಳನ್ನ ಕೇಳಿ ಉತ್ತರ ಪಡೆದಿದ್ದರು. ಇದನ್ನೂ ಓದಿ: ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ
ವಿಚಾರಣೆ ಮುಗಿದ ಬಳಿಕ, ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಜಾತಿ, ಜನಾಂಗದ ವಿರುದ್ಧ ಹೋರಾಟ ಮಾಡುತ್ತಲ್ಲ. ಕೆಲವರು ಹುಟ್ಟಿದ ತಕ್ಷಣ ಶ್ರೇಷ್ಠ, ಕೆಲವರು ಕೀಳು ಅಂಥ ಮಾಡಬಾರದು. ಬೇಧ ಭಾವದ ವಿರುದ್ಧ ಹೋರಾಟ ಮಾಡುತ್ತೀವಿ. ಈ ಹೋರಾಟವನ್ನು ಮುಂದುವರಿಸುತ್ತೇವೆ. ನಮಗೆ ನ್ಯಾಯ ಸಿಗುತ್ತೆ. ವಿಚಾರಣೆಗೆ ಅಗತ್ಯವಿದ್ದಲ್ಲಿ ಮತ್ತೆ ಬರುತ್ತೇನೆ. 18ನೇ ತಾರೀಖು ಮತ್ತೆ ಬರುವುದಕ್ಕೆ ಹೇಳಿದ್ದಾರೆ. ಎಲ್ಲಾ ಪ್ರಶ್ನೆಗಳಿಗೂ ಸಂಪೂರ್ಣ ಉತ್ತರ ಕೊಡುತ್ತೇನೆ. ತನಿಖೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುತ್ತೇನೆ ಎಂದು ಚೇತನ್ ಹೇಳಿದ್ದರು.