ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ವಕ್ತಾರ (Congress Spokesperson) ಕೌಸ್ತವ್ ಬಾಗ್ಚಿ (Kaustav Bagchi) ಅವರನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳದ ರ‍್ರಾಕ್‌ಪೋರ್‌ನಲ್ಲಿರುವ ಬಾಗ್ಚಿ ಅವರ ನಿವಾಸಕ್ಕೆ ಬುರ್ಟೊಲ್ಲಾ ಪೊಲೀಸ್ ಠಾಣೆಯ ಬೃಹತ್ ತಂಡ ಶನಿವಾರ ಮುಂಜಾನೆ 3:30ರ ವೇಳೆಗೆ ದಾಳಿ ನಡೆಸಿ ಅವರನ್ನು ಬಂಧಿಸಿದೆ. ಇದನ್ನೂ ಓದಿ: ಬಿಜೆಪಿ ಪಕ್ಷ ಸಂಘಟನೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ ಎಂಪಿ ಸುಮಲತಾ
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆ ಶುಕ್ರವಾರ ಕೌಸ್ತವ್ ಬಾಗ್ಚಿ ವಿರುದ್ಧ ಬುರ್ಟೊಲ್ಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ಸಾಗರ್ದಿಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಕಂಡಿದ್ದು, ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಅವರ ಮೇಲೆ ವೈಯಕ್ತಿಕ ದಾಳಿ ನಡೆಸಲಾಗಿತ್ತು. ಇದಾದ ಬಳಿಕ ತೃಣಮೂಲ ಕಾಂಗ್ರೆಸ್‌ನ ಮುಖ್ಯಸ್ಥೆ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಬಾಗ್ಚಿ ಟೀಕಿಸಿದ್ದರು. ಇದನ್ನೂ ಓದಿ: ಆಸ್ಟ್ರೇಲಿಯಾದ ಹಿಂದೂ ದೇವಾಲಯದಲ್ಲಿ ಮತ್ತೆ ಮೋದಿ ವಿರೋಧಿ ಬರಹ – 2 ತಿಂಗಳಲ್ಲಿ 4ನೇ ಘಟನೆ