ಮುಂಬೈ: ಭಾರತ್ ಜೋಡೋ ಯಾತ್ರೆ (Bharat Jodo Yatra) ವೇಳೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ (Savarkar) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಹುಲ್ ಗಾಂಧಿ ಹೇಳಿಕೆಯಿಂದ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ಥಾಣೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ರಾಹುಲ್ ವಿರುದ್ಧ ಐಪಿಸಿ ಸೆಕ್ಷನ್ 500, 501ರ ಅಡಿಯಲ್ಲಿ ನಾನ್-ಕಾಗ್ನಿಜಬಲ್ (NCR) ಅಪರಾಧದ ಪ್ರಕರಣವನ್ನು ದಾಖಲಿಸಲಾಗಿದೆ.
Advertisement
Advertisement
ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರ ಪತ್ರಿಕಾಗೋಷ್ಠಿ ವೇಳೆ ಮಾತನಾಡಿದ ರಾಹುಲ್ ಗಾಂಧಿ, ಸ್ವಾತಂತ್ರ‍್ಯ ಪೂರ್ವದಲ್ಲಿ ಬ್ರಿಟಿಷರಿಗೆ ಕ್ಷಮೆಯಾಚಿಸುವ ಪತ್ರಕ್ಕೆ ಸಹಿ ಹಾಕುವ ಮೂಲಕ ಸಾವರ್ಕರ್ ಅವರು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸರ್ದಾರ್ ಪಟೇಲ್ ಅವರಂತಹ ನಾಯಕರಿಗೆ ದ್ರೋಹ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಸಾವರ್ಕರ್ ಬ್ರಿಟಿಷರಿಗೆ ಪತ್ರ ಬರೆದು ಸೇವಕನಾಗಿರುತ್ತೇನೆ ಎಂದಿದ್ರು: ರಾಹುಲ್ ಗಾಂಧಿ
Advertisement
ವೀರ ಸಾವರ್ಕರ್ ಅವರು ಬ್ರಿಟಿಷರಿಗೆ ಪತ್ರ ಬರೆದಿದ್ದು, ಅದರಲ್ಲಿ ಅವರು ಬ್ರಿಟಿಷರ ವಿಧೇಯ ಸೇವಕರಾಗಿ ಉಳಿಯುತ್ತೇನೆ ಎಂದು ಬೇಡಿಕೊಂಡಿದ್ದರು. ಅವರು ಬ್ರಿಟಿಷರಿಗೆ ಸಹಾಯವನ್ನೂ ಮಾಡಿದ್ದು, ಮಹಾತ್ಮ ಗಾಂಧಿಯಂತಹ ನಾಯಕರಿಗೆ ದ್ರೋಹ ಬಗೆದಿದ್ದಾರೆ ಎಂದು ಹೇಳಿದ್ದಾರೆ.
Advertisement
ರಾಹುಲ್ ಗಾಂಧಿ ಹೇಳಿಕೆಗೆ ವಂದನಾ ಡೋಂಗ್ರೆ, ನಮ್ಮ ಮಹಾಪುರುಷರ ಮಾನಹಾನಿಯನ್ನು ನಾನು ಸಹಿಸುವುದಿಲ್ಲ. ಇದರಿಂದ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಸ್ಕ್ ಗಡುವಿಗೂ ಮೊದಲೇ ನೂರಾರು ಟ್ವಿಟ್ಟರ್ ಉದ್ಯೋಗಿಗಳು ರಾಜೀನಾಮೆ