ಬೆಂಗಳೂರು: ಹಿಂದಿ ಭಾಷೆ ಬಳಸುವಂತೆ ಅಮಿತ್ ಶಾ ಫರ್ಮಾನು ಹೊರಡಿಸಿರುವುದು ಅತ್ಯಂತ ಆಕ್ಷೇಪಾರ್ಹ ನಡವಳಿಕೆಯಾಗಿದೆ. ಒಬ್ಬ ಸ್ವಾಭಿಮಾನಿ ಕನ್ನಡಿಗನಾಗಿ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲು, ಸಾಲು ಟ್ವೀಟ್ ಮಾಡುವ ಮೂಲಕವಾಗಿ ಗೃಹಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಟ್ವೀಟ್‌ನಲ್ಲಿ ಏನಿದೆ?: ಹಿಂದಿ, ಇಂಗ್ಲೀಷ್, ತಮಿಳು, ಮಲೆಯಾಳಂ, ಗುಜರಾತಿ ಸೇರಿದಂತೆ ಯಾವ ಭಾಷೆಗೂ ನಾವು ವಿರೋಧಿಗಳಲ್ಲ. ಆದರೆ ಕರ್ನಾಟಕದಲ್ಲಿ ಕನ್ನಡಕ್ಕೆ ಮೊದಲ ಸ್ಥಾನ. ಯಾವುದೇ ಒಂದು ಭಾಷೆಯನ್ನು ಹೇರಲು ಹೊರಟರೆ ಸಹಿಸಲು ಸಾಧ್ಯ ಇಲ್ಲ. ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ. ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ.
Advertisement
ನಮ್ಮ ಭಾಷಾ ನಿಲುವು ಮತ್ತು ದೇಶ-ರಾಜ್ಯಗಳ ಸಂಬಂಧವನ್ನು ರಾಷ್ಟ್ರಕವಿ ಕುವೆಂಪು ಅವರು ದಶಕಗಳ ಹಿಂದೆಯೇ ಸ್ಪಷ್ಟವಾಗಿ ವ್ಯಾಖ್ಯಾನಿಸಿದ್ದಾರೆ.
“ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ’ ಎನ್ನುವ ಕವಿ ನುಡಿಯೇ ನಮ್ಮ ಭಾಷಾ ಸಿದ್ಧಾಂತ.
3/8#IndiaAgainstHindiImposition
— Siddaramaiah (@siddaramaiah) April 8, 2022
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಹಿಂದಿಯನ್ನು ರಾಷ್ಟ್ರಭಾಷೆ ಎನ್ನುವ ರೀತಿಯಲ್ಲಿ ಬಿಂಬಿಸುವ ಜೊತೆಯಲ್ಲಿ, ರಾಜ್ಯ ಭಾಷೆಗಳನ್ನು ದಮನಿಸುವ ಪ್ರಯತ್ನ ನಡೆಯುತ್ತಲೇ ಇದೆ. ಇದನ್ನು ಹಿಂದಿಯೇತರ ಭಾಷೆಗಳನ್ನಾಡುವ ರಾಜ್ಯಗಳು ಕೂಡಿ ಪ್ರತಿಭಟಿಸುವ ಕಾಲ ಸನ್ನಿಹಿತವಾಗಿದೆ.
Advertisement
ಗುಜರಾತಿನಿಂದ ಬಂದಿರುವ ಅಮಿತ್ ಷಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ ಮಾಡುತ್ತಿರುವುದು ವಿಷಾದನೀಯವಾಗಿದೆ.
Advertisement
ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ.
7/8#IndiaAgainstHindiImposition
— Siddaramaiah (@siddaramaiah) April 8, 202
ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ ಅಮಿತ್ ಶಾ ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತವಾಗಿದೆ. ಇದನ್ನೂ ಓದಿ: ತುರ್ತು ಭೂಸ್ಪರ್ಶ ವೇಳೆ ಕಾರ್ಗೋ ವಿಮಾನ ಇಬ್ಬಾಗ
Advertisement
ಕೇಂದ್ರ ಗೃಹಸಚಿವ @AmitShah ಅವರ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂದೆಗೆದುಕೊಳ್ಳಬೇಕು.
8/8#IndiaAgainstHindiImposition
— Siddaramaiah (@siddaramaiah) April 8, 2022
ತಮಿಳುನಾಡು, ಕೇರಳ, ಆಂಧ್ರಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಳ ಮತ್ತು ಈಶಾನ್ಯ ರಾಜ್ಯಗಳು ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ಹಿಂದಿಯನ್ನು ಅಧಿಕೃತ ಸಂಪರ್ಕಭಾಷೆಯಾಗಿ ಬಳಸುವುದಿಲ್ಲ. ಅವುಗಳ ಜೊತೆಯಲ್ಲಿ ಹಿಂದಿಯಲ್ಲಿ ವ್ಯವಹರಿಸಬೇಕೆನ್ನುವುದು ಸಾಂಸ್ಕೃತಿಕ ಭಯೋತ್ಪಾದನೆಯಾಗಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ರಷ್ಯಾ ಸಸ್ಪೆಂಡ್
ಅಮಿತ್ ಶಾ ಅವರ ತವರು ಗುಜರಾತ್ ರಾಜ್ಯದ ಮಣ್ಣಿನ ಮಗನಾದ ಮಹಾತ್ಮ ಗಾಂಧೀಜಿ ಬಹು ಸಂಸ್ಕೃತಿ, ಬಹುಭಾಷೆಗಳ ಪ್ರತಿಪಾದಕರಾಗಿದ್ದರು. ಆದರೆ @AmitShah ಅವರಿಗೆ ಗಾಂಧೀಜಿಯವರಿಗಿಂತ ಏಕ ಸಂಸ್ಕೃತಿ, ಏಕಭಾಷೆಯ ಪ್ರತಿಪಾದಕರಾದ ಸೂಡೊ ರಾಷ್ಟ್ರೀಯವಾದಿ ಸಾವರ್ಕರ್ ಪ್ರಿಯರಾಗಿರುವುದು ದುರಂತ.
6/8#IndiaAgainstHindiImposition
— Siddaramaiah (@siddaramaiah) April 8, 2022
ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಹೇಳಿಕೆ ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಮಾತೃಭಾಷೆಗಳಿಗೆ ಮಾಡಿರುವ ಅವಮಾನವಾಗಿದೆ. ಅನಗತ್ಯ ಘರ್ಷಣೆಗೆ ಎಡೆಮಾಡಿಕೊಡುವ ಈ ಬೇಜವಾಬ್ದಾರಿ ಹೇಳಿಕೆಯನ್ನು ಅಮಿತ್ ಶಾ ಅವರು ತಕ್ಷಣ ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.