ರಾಯಚೂರು: ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಾಡುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಕ್ಯಾನ್ಸರ್ ಪ್ರಮುಖವಾಗಿದೆ. ಹಿಂದುಳಿದ ಜಿಲ್ಲೆಯಾದ ರಾಯಚೂರಿನಲ್ಲಿ (Raichuru) ವರ್ಷದಿಂದ ವರ್ಷಕ್ಕೆ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚುತ್ತಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ನಿಟ್ಟಿನಲ್ಲಿ ರಾಜ್ಯದ ಮೊದಲ ಸರ್ಕಾರಿ ಕ್ಯಾನ್ಸರ್ ಡೇ ಕೇರ್ ಕೀಮೋಥೇರಪಿ ಯೂನಿಟ್ (Chemotherapy Center) ಅನ್ನು ರಾಯಚೂರಿನಲ್ಲಿ ಆರಂಭಿಸಲಾಗಿದೆ.
Advertisement
ವಿಶ್ವ ಕ್ಯಾನ್ಸರ್ ದಿನಾಚರಣೆಯ ಹೊತ್ತಿನಲ್ಲಿ ಜಿಲ್ಲೆಯಲ್ಲಿ ಪ್ರತಿ ವರ್ಷ ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿ ವರ್ಷ ಮೂರು ಸಾವಿರಕ್ಕೂ ಹೆಚ್ಚು ಜನ ಹೊಸದಾಗಿ ಕ್ಯಾನ್ಸರ್ ರೋಗಕ್ಕೆ ತುತ್ತಾಗುತ್ತಿದ್ದಾರೆ. ಆರಂಭದ ಹಂತದಲ್ಲಿ ಚಿಕಿತ್ಸೆ ಪಡೆದವರು ಗುಣಮುಖರಾದ್ರೆ, ಸ್ವಲ್ಪ ನಿರ್ಲಕ್ಷ್ಯ ವಹಿಸಿದವರು ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ.ಇದನ್ನೂ ಓದಿ: ಮಿಲಿಂದ್ ಗೌತಮ್ ಈಗ ಅನ್ ಲಾಕ್ ರಾಘವ!
Advertisement
Advertisement
ರಾಜ್ಯದಲ್ಲಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವವರ ಪೈಕಿ ಬೆಂಗಳೂರು ಮೊದಲ ಸ್ಥಾನದಲ್ಲಿದ್ದರೆ, ರಾಯಚೂರು 9ನೇ ಸ್ಥಾನದಲ್ಲಿದೆ. 2022ರ ಅಂಕಿ ಸಂಖ್ಯೆಯ ಪ್ರಕಾರ ರಾಜ್ಯದಲ್ಲಿ 87,424 ಜನರಿಗೆ ಕ್ಯಾನ್ಸರ್ ಕಾಣಿಸಿಕೊಂಡಿದ್ದರೆ, ರಾಯಚೂರಿನಲ್ಲಿ 2,782 ಜನರಲ್ಲಿ ಕಾಣಿಸಿಕೊಂಡಿತ್ತು. ಇನ್ನೂ ಅದೇ ವರ್ಷ ರಾಜ್ಯದಲ್ಲಿ ಒಟ್ಟು ರೋಗಿಗಳ ಸಂಖ್ಯೆ 2,40,116 ಆಗಿದ್ದರೆ, ರಾಯಚೂರು ಜಿಲ್ಲೆಯಲ್ಲಿ 7,531 ರೋಗಿಗಳು ಇದ್ದರು. ಇನ್ನೂ ಈಗ ಈ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದ್ದು, ಸರ್ಕಾರದಿಂದ ಅಧಿಕೃತ ಅಂಕಿಸಂಖ್ಯೆ ಹೊರಬರಬೇಕು ಎಂದು ವೈದ್ಯರು ತಿಳಿಸಿದ್ದಾರೆ.
Advertisement
ಕ್ಯಾನ್ಸರ್ ಡೇಕೇರ್ ಸೆಂಟರ್ ಆರಂಭಿಸಿರುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುರೇಂದ್ರ ಬಾಬು ಮಾತನಾಡಿ, ಹೆಚ್ಚುತ್ತಿರುವ ರೋಗಿಗಳ ಸಂಖ್ಯೆ ಹಿನ್ನೆಲೆ ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಓಪೆಕ್ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಮೊದಲ ಕ್ಯಾನ್ಸರ್ ಡೇ ಕೇರ್ ಸೆಂಟರ್ ಆರಂಭಿಸಲಾಗಿದೆ. ಶಸ್ತ್ರಚಿಕಿತ್ಸೆ, ಕಿಮೋಥೆರಫಿ ಸೇರಿ ವಿವಿಧ ರೀತಿಯ ಕ್ಯಾನ್ಸರ್ ಚಿಕಿತ್ಸೆಗಳನ್ನ ನೀಡಲು ಆಸ್ಪತ್ರೆ ಸಜ್ಜಾಗಿದೆ ಎಂದು ಹೇಳಿದರು.
ಗುಟ್ಕಾ, ತಂಬಾಕು, ತಂಬಾಕು ಉತ್ಪನ್ನಗಳ ಸೇವನೆಯಿಂದ ಪುರುಷರಲ್ಲಿ ಶೇ.24 ರಷ್ಟು, ಮಹಿಳೆಯರಲ್ಲಿ ಶೇ.15 ರಷ್ಟು ಜನರಿಗೆ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಅಂಕಿ ಸಂಖ್ಯೆಗಳ ಪ್ರಕಾರ ಗ್ರಾಮೀಣ ಭಾಗದ ಜನರೇ ಹೆಚ್ಚು ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇನ್ನೂ ಇತ್ತೀಚೆಗೆ ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚಾಗಿ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದ್ದು, ಸ್ತನ ಹಾಗೂ ಗರ್ಭಕೋಶದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ. ಇಲ್ಲಿನ ರೋಗಿಗಳು ಚಿಕಿತ್ಸಾ ಸೌಲಭ್ಯಗಳಿಲ್ಲದೆ ಬೆಂಗಳೂರು, ಹೈದರಾಬಾದ್ ಸೇರಿ ವಿವಿಧ ನಗರಗಳ ಆಸ್ಪತ್ರೆಗಳಿಗೆ ತೆರಳುತ್ತಿದ್ದರು. ಕ್ಯಾನ್ಸರ್ ರೋಗಿಗಳಿಗೆ ಈಗ ರಾಯಚೂರಿನಲ್ಲೇ ಚಿಕಿತ್ಸೆ ದೊರೆಯುತ್ತಿದೆ. ತಜ್ಞ ವೈದ್ಯರು, ಟೆಕ್ನಿಶಿಯನ್‌ಗಳ ಕೊರತೆಗಳ ನಡುವೆ ಓಪೆಕ್ ಆಸ್ಪತ್ರೆ ರಾಜ್ಯದಲ್ಲೇ ಪ್ರಥಮ ಹೆಜ್ಜೆ ಇಟ್ಟಿದ್ದು, ಯಶಸ್ವಿ ಶಸ್ತ್ರಚಿಕಿತ್ಸೆಗಳನ್ನ ಮಾಡುತ್ತಿದೆ. ಕ್ಯಾನ್ಸರ್ ತಜ್ಞ ವೈದ್ಯ ಓಪೆಕ್ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಮೇಶ್ ಸಾಗರ್ ನೇತೃತ್ವದಲ್ಲಿ ಕ್ಯಾನ್ಸರ್ ಡೇ ಕೇರ್ ಕೀಮೋಥೇರಪಿ ಸೆಂಟರ್ ಆರಂಭಿಸಲಾಗಿದೆ.
ಒಟ್ಟಿನಲ್ಲಿ ರಾಯಚೂರು ಜಿಲ್ಲೆ ಬಹುತೇಕ ವಿಷಯಗಳಲ್ಲಿ ಹಿಂದುಳಿದ ಜಿಲ್ಲೆಯಾದರೂ ಕ್ಯಾನ್ಸರ್ ಡೇ ಕೇರ್ ಸೆಂಟರ್ ಆರಂಭಿಸಿರುವುದರಲ್ಲಿ ಮೊದಲ ಜಿಲ್ಲೆಯಾಗಿದೆ. ಬಡರೋಗಿಗಳಿಗೆ ಉಚಿತ ಹಾಗೂ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ದೊರೆಯುವ ಉದ್ದೇಶಕ್ಕೆ ಡೇ ಕೇರ್ ಸೆಂಟರ್ ಆರಂಭಿಸಲಾಗಿದೆ. ಇನ್ನೂ ಮುಂದೆ ಸರ್ಕಾರ ಸೌಲಭ್ಯಗಳನ್ನ ನೀಡುವ ಜೊತೆಗೆ ಇಲ್ಲಿನ ವೈದ್ಯರು ನಿರಂತರ ಗುಣಮಟ್ಟದ ಚಿಕಿತ್ಸೆ ನೀಡಬೇಕಿದೆ.ಇದನ್ನೂ ಓದಿ: ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್