Exit Polls – 5 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌!

Public TV
2 Min Read
Narendra Modi Amit Shah

ನವದೆಹಲಿ: 7 ಹಂತದಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಿಜೆಪಿ (BJP) ಹೆಚ್ಚು ಕಡಿಮೆ 5 ರಾಜ್ಯಗಳಲ್ಲಿ ಕ್ವೀನ್‌ ಸ್ವೀಪ್‌ ಮಾಡಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು (Exit Polls) ಭವಿಷ್ಯ ನುಡಿದಿವೆ.

ಕೇಂದ್ರದಲ್ಲಿ ಅಧಿಕಾರಕ್ಕೆ ಏರಲು ಸರಳ ಬಹುಮತಕ್ಕೆ 272 ಸ್ಥಾನ ಬೇಕು. ಸದ್ಯ ಪ್ರಕಟವಾಗಿರುವ ಬಹುತೇಕ ಸಮೀಕ್ಷೆಗಳು ಎನ್‌ಡಿಎಗೆ 350+ ಸ್ಥಾನ ನೀಡಿವೆ. ಅದರಲ್ಲೂ ಟುಡೇಸ್‌ ಚಾಣಕ್ಯ ಬಿಜೆಪಿ 335 ± 15, ಎನ್‌ಡಿಎ 400 ± 15 ಸ್ಥಾನ ನೀಡಿದೆ.  ಇಂಡಿಯಾ ಟುಡೆ ಸಮೀಕ್ಷೆ ಈ ಬಾರಿಗೆ  ಎನ್‌ಡಿಎಗೆ 361-401, ಇಂಡಿಯಾ ಒಕ್ಕೂಟಕ್ಕೆ 131-166, ಇತರರಿಗೆ 8-20 ಸ್ಥಾನಗಳನ್ನು ನೀಡಿದೆ. ಈ ಪೈಕಿ 7 ರಾಜ್ಯಗಳಲ್ಲಿ ಬಿಜೆಪಿ ಬಹುತೇಕ ಕ್ಲೀನ್‌ ಸ್ವೀಪ್‌ ಮಾಡಬಹುದು ಎಂದು ಭವಿಷ್ಯ ನುಡಿದಿವೆ.

 

 

ಉತ್ತರಾಖಂಡ:
ವಿಎಂಆರ್‌ ಲೋಕಸಭಾ ಮತ್ತು ಟುಡೇಸ್‌ ಚಾಣಕ್ಯ ಎಲ್ಲಾ 5 ಸ್ಥಾನಗಳನ್ನು ಬಿಜೆಪಿಗೆ ನೀಡಿವೆ. ಕಳೆದ ಚುನಾವಣೆಯಲ್ಲೂ ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಇದನ್ನೂ ಓದಿ: ಅಬ್ಕಿ ಬಾರ್ ಚಾರ್ ಸೌ ಪಾರ್ – ಎನ್‌ಡಿಎ 400ರ ಗಡಿ ದಾಟುತ್ತೆ ಎಂದ ಟುಡೇಸ್‌ ಚಾಣಕ್ಯ

ಗುಜರಾತ್‌:
ಮೋದಿ (PM Narendra Modi) ಅವರ ತವರು ರಾಜ್ಯ ಗುಜರಾತ್‌ನಲ್ಲಿ ಬಿಜೆಪಿ 25-26 ಸ್ಥಾನಗಳನ್ನು ಗೆಲ್ಲಬಹುದು ಎಂದು ಆಕ್ಸಿಸ್‌ ಮೈ ಇಂಡಿಯಾ ಹೇಳಿದೆ. ಕಾಂಗ್ರೆಸ್‌ 1 ಸ್ಥಾನ ಮಾತ್ರ ಗೆಲ್ಲಬಹುದು ಎಂದಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ 26 ಸ್ಥಾನಗಳನ್ನು ಗೆದ್ದುಕೊಂಡಿತ್ತು.

 

ಮಧ್ಯಪ್ರದೇಶ:
ಟುಡೇಸ್‌ ಚಾಣಕ್ಯ ಬಿಜೆಪಿ ಎಲ್ಲಾ 29 ಕ್ಷೇತ್ರಗಳನ್ನು ಗೆದ್ದುಕೊಳ್ಳಲಿದೆ ಎಂದು ಭವಿಷ್ಯ ನುಡಿದಿವೆ. ಇದೇ ರೀತಿ ಫಲಿತಾಂಶವನ್ನು ಮೈ ಎಕ್ಸಿಸ್‌ ಸಹ ನೀಡಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 28, ಕಾಂಗ್ರೆಸ್‌ 1 ಸ್ಥಾನವನ್ನು ಗೆದ್ದುಕೊಂಡಿತ್ತು. ಇದನ್ನೂ ಓದಿ: ಚುನಾವಣೋತ್ತರ ಸಮೀಕ್ಷೆಗಳಲ್ಲಿ ನಂಬಿಕೆ ಇಲ್ಲ, ಕಾಂಗ್ರೆಸ್‌ ಡಬಲ್‌ ಡಿಜಿಟ್‌ ದಾಟುತ್ತೆ: ಡಿಕೆಶಿ

ದೆಹಲಿ:
ಈ ಬಾರಿ ಬಿಜೆಪಿಯನ್ನು ಸೋಲಿಸಲು ಆಪ್‌ ಮತ್ತು ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿತ್ತು. ಆದರೆ ಬಹುತೇಕ ಸಮೀಕ್ಷೆಗಳು 7 ಸ್ಥಾನಗಳನ್ನು ಬಿಜೆಪಿ ಗೆಲ್ಲಲಿವೆ ಎಂದು ಹೇಳಿವೆ. ಕೆಲ ಸಮೀಕ್ಷೆಗಳು ಕನಿಷ್ಠ ಒಂದು ಸ್ಥಾನವನ್ನು ಆಪ್‌, ಕಾಂಗ್ರೆಸ್‌ ಮೈತ್ರಿಗೆ ನೀಡಿವೆ. ಕಳೆದ ಚುನಾವಣೆಯಲ್ಲೂ ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.

ಚತ್ತೀಸ್‌ಗಢ:
ಇಂಡಿಯಾ ಟುಡೇ 10-11 ಸ್ಥಾನಗಳನ್ನು ಬಿಜೆಪಿಗೆ ನೀಡಿದೆ. ಕಾಂಗ್ರೆಸ್‌ ಕೇವಲ 1 ಸ್ಥಾನ ಗೆಲ್ಲಬಹುದು ಎಂದು ಭವಿಷ್ಯ ನುಡಿದಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 9 ಸ್ಥಾನ ಗೆದ್ದಿದ್ದರೆ ಕಾಂಗ್ರೆಸ್‌ 2 ಸ್ಥಾನ ಮಾತ್ರ ಗೆದ್ದಿತ್ತು.

 

Share This Article