Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸ್ಥಳದ ವಿರುದ್ಧ ಅಪಪ್ರಚಾರ | ರಾಜ್ಯಾದ್ಯಂತ ಪ್ರತಿಭಟನೆ – ವಿಧಾನಸೌಧದಲ್ಲಿ ಹೆಣ ಇದೆ ಅಂದ್ರೆ ಅಗೆಯುತ್ತಾರಾ? ಭಕ್ತರ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಧರ್ಮಸ್ಥಳದ ವಿರುದ್ಧ ಅಪಪ್ರಚಾರ | ರಾಜ್ಯಾದ್ಯಂತ ಪ್ರತಿಭಟನೆ – ವಿಧಾನಸೌಧದಲ್ಲಿ ಹೆಣ ಇದೆ ಅಂದ್ರೆ ಅಗೆಯುತ್ತಾರಾ? ಭಕ್ತರ ಆಕ್ರೋಶ

Belgaum

ಧರ್ಮಸ್ಥಳದ ವಿರುದ್ಧ ಅಪಪ್ರಚಾರ | ರಾಜ್ಯಾದ್ಯಂತ ಪ್ರತಿಭಟನೆ – ವಿಧಾನಸೌಧದಲ್ಲಿ ಹೆಣ ಇದೆ ಅಂದ್ರೆ ಅಗೆಯುತ್ತಾರಾ? ಭಕ್ತರ ಆಕ್ರೋಶ

Public TV
Last updated: August 13, 2025 12:50 pm
Public TV
Share
3 Min Read
Dharmasthala Protest 4
SHARE

ಬೆಂಗಳೂರು: ಧರ್ಮಸ್ಥಳದ (Dharmasthala) ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳದ ಭಕ್ತರಿಂದ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ನಡೆಯುತ್ತಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರು ಒತ್ತಾಯಿಸಿದ್ದಾರೆ.

Dharmasthala Protest 2

ಬೆಳಗಾವಿ, ಚಿಕ್ಕಮಗಳೂರು, ಚಾಮರಾಜನಗರ, ಗದಗ, ಕಲಬುರಗಿ, ಮೈಸೂರು, ತುಮಕೂರಿನಲ್ಲಿ ಇಂದು (ಆ.13) ಪ್ರತಿಭಟನೆಗಳು ನಡೆದಿವೆ. ಎಸ್‌ಐಟಿ ತನಿಖಾ ವರದಿ ಬರದೇ ಇದ್ದರೂ, ಧರ್ಮಸ್ಥಳ, ಡಾ.ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಪುರಾಣ ಪ್ರಸಿದ್ಧ ಧರ್ಮಸ್ಥಳ ಕ್ಷೇತ್ರಕ್ಕೆ ಧಕ್ಕೆ ತರುವ, ಸುಳ್ಳು ನಿಂದನೆ, ಅಪಪ್ರಚಾರ ಅವಹೇಳನ ಕೆಲಸ ಮಾಡ್ತಿದ್ದಾರೆ. ಗಿರೀಶ್ ಮಟ್ಟಣ್ಣನವರ, ಮಹೇಶ್ ಶೆಟ್ಟಿ ತಿಮ್ಮರೆಡ್ಡಿ, ಸಮೀರ್ ಎಂ.ಡಿ, ಜಯಂತ್ ಸೇರಿ ಹಲವರಿಂದ ಅಪಪ್ರಚಾರ ನಡೆಯುತ್ತಿದೆ. ಪ್ರಕರಣ ಹಿಂದೆ ಯಾರಿದ್ದಾರೆ? ಅವರಿಗೆ ಹಣದ ನೆರವು ಕೊಡುತ್ತಿರುವವರು ಯಾರು ಎಂದು ತನಿಖೆ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್; 16 ಸ್ಪಾಟ್‌ಗಳಲ್ಲಿ ಸಿಗದ ಕುರುಹು – ದೂರುದಾರನ ಮಂಪರು ಪರೀಕ್ಷೆಗೆ ಎಸ್‌ಐಟಿ ಚಿಂತನೆ

ಬೆಳಗಾವಿಯಲ್ಲಿ (Belagavi) ಧರ್ಮಸ್ಥಳ ಸಂಘದ ಮಹಿಳೆಯರು, ರೈತರು, ಭಕ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮಾಡಿ, ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಧರ್ಮಸ್ಥಳಕ್ಕೆ ದಿನಕ್ಕೆ 1 ಲಕ್ಷದವರೆಗೆ ಭಕ್ತರು ಬರ್ತಾರೆ. ಅಪಪ್ರಚಾರ ಮಾಡೋರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು. ಯಾರೋ ಅನಾಮಿಕ ಹೇಳಿದ್ದಂತೆ ನೆಲೆ ಅಗೆಯಲಾಗುತ್ತಿದೆ. ಯಾರೋ ಬಂದು ವಿಧಾನಸೌಧದಲ್ಲಿ ಹೆಣ ಇದೆ ಅಂಥ ಹೇಳಿದ್ರೆ ಅಗೆಯುತ್ತಾರಾ? ಎಂದು ಭಕ್ತರು ಪ್ರಶ್ನಿಸಿದ್ದಾರೆ.

Dharmasthala Protest 3

ಚಿಕ್ಕಮಗಳೂರಿನಲ್ಲಿ (Chikkamagaluru) 2000 ಸಾವಿರಕ್ಕೂ ಹೆಚ್ಚು ಭಕ್ತರು ನಗರದ ತಾಲೂಕು ಕಚೇರಿಯಿಂದ ಆಜಾದ್ ಪಾರ್ಕ್ ವರೆಗೂ ಪ್ರತಿಭಟನೆ ನಡೆಸಿದರು. ಸುಮಾರು 2 ಕಿ.ಮೀ. ಪ್ರತಿಭಟನಾ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು. ಸುಳ್ಳಿನ ಮೃತದೇಹದ ಹಿಂದೆ ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವ ಹುನ್ನಾರವಿದೆ. ಕುತಂತ್ರಿಗಳ ಷಡ್ಯಂತ್ರಕ್ಕೆ ಸರ್ಕಾರದ ಬೆಂಬಲ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಚಾಮರಾಜನಗರದಲ್ಲಿ (Chamarajanagar) ಧರ್ಮಸ್ಥಳ ಉಳಿಸಿ ಎಂದು ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ಚಾಮರಾಜೇಶ್ವರ ದೇವಾಲಯದಿಂದ ಡಿಸಿ ಕಚೇರಿವರೆಗೂ ಪೋಸ್ಟರ್ ಹಿಡಿದು ಪ್ರತಿಭಟಿಸಿದ್ದಾರೆ. ಅಲ್ಲದೇ , ಭುವನೇಶ್ವರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದ್ದಾರೆ.

Dharmasthala Protest

ಗದಗದಲ್ಲಿ (Gadag) ಅಂಬೇಡ್ಕರ್ ಭವನದಿಂದ ಜಿಲ್ಲಾಡಳಿತ ಭವನದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿ ನಡೆಸಲಾಯಿತು. ಬಳಿಕ ನಗರದ ಕೋರ್ಟ್ ಸರ್ಕಲ್ ಬಳಿ ರಸ್ತೆ ತಡೆದು, ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯ ಹಾಗೂ ವೀರೇಂದ್ರ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಒಳಸಂಚು ನಡೆಯುತ್ತಿದೆ ಎಂದು ಭಕ್ತರು ಅಸಮಾಧಾನ ಹೊರಹಾಕಿದ್ದಾರೆ.

ಕಲಬುರಗಿಯಲ್ಲೂ (Kalaburagi) ಧಾರ್ಮಿಕ ಸಂಘಟನೆಗಳಿಂದ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಪ್ರತಿಭಟನೆಯಲ್ಲೂ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ಸಹ ಭಾಗಿಯಾಗಿದ್ದರು. ಜಗತ್ ವೃತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿ, ಸುಳ್ಳು ಮಾಹಿತಿ ಹಂಚುತ್ತಿರುವ ಯೂಟ್ಯೂಬರ್‌ಗಳು ಹಾಗೂ ಅಪಪ್ರಚಾರ ಮಾಡುತ್ತಿರುವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಯಿತು.

Dharmasthala Protest 1

ಕೊಪ್ಪಳದಲ್ಲಿ (Koppal) ಜಿಲ್ಲಾ ಜೈನ ಸಮಾಜ ಹಾಗೂ ಧರ್ಮಸ್ಥಳ ಭಕ್ತವೃಂದದಿಂದ ಪ್ರತಿಭಟನೆ ನಡೆಯಿತು. ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಭಕ್ತರು, ಮಹೇಶ್ ಶೆಟ್ಟಿ ತಿಮೋರೊಡಿ ಹಾಗೂ ಗಿರೀಶ್ ಮಟ್ಟಣ್ಣನವರ ವಿರುದ್ಧ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭಾಗಿಯಾಗಿದ್ದರು.

ತುಮಕೂರಿನಲ್ಲೂ (Tumakur) ಸಹ ಪ್ರತಿಭಟನೆ ನಡೆಸಲಾಯಿತು. ಗುಮ್ಚಿ ಸರ್ಕಲ್ ನಲ್ಲಿ ಪ್ರತಿಭಟನಾಕಾರರು, ಕೋತಿತೋಪು, ಮಂಡಿಪೇಟೆ, ಡಿಸಿ ಕಚೇರಿ ಹಾಗೂ ಎಮ್ ಜಿ ರಸ್ತೆಯ ಸಂಪರ್ಕ ಬಂದ್ ಮಾಡಿ ಪ್ರತಿಭಟಿಸಿದರು. ಬೆಳ್ಳಾವಿ ಕಾರದ ಮಠದ ವೀರಬಸವ ಸ್ವಾಮಿಜಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಸ್ವಾಮೀಜಿ, ಧರ್ಮಸ್ಥಳ ಕ್ಷೇತ್ರ, ಸರ್ಕಾರ ಮಾಡದ ಕೆಲಸ ಮಾಡುತ್ತಿದೆ. ಮದ್ಯವರ್ಜನ ಶಿಬಿರ, ಕೆರೆಕಟ್ಟೆಗಳ ಸಂರಕ್ಷಣೆ, ಗ್ರಾಮೀಣ ಭಾಗದ ಜನರಿಗೆ ಉದ್ಯೋಗ, ಅನ್ನದಾನ ಹೀಗೆ ನೂರಾರು ಸಮಾಜ ಸೇವೆ ಮಾಡುತ್ತಿದೆ. ಮಹಿಳಾ ಸಬಲೀಕರಣದಲ್ಲಿ ಧರ್ಮಸ್ಥಳದ ಪಾತ್ರ ಬಹಳ ದೊಡ್ಡದ್ದು. ಅಂಥವರ ವಿರುದ್ಧ ಷಡ್ಯಂತ್ರ ಮಾಡಲಾಗುತ್ತಿದೆ. ಮಳೆಯ ನಡುವೆಯೂ ಸಾವಿರಾರು ಸಂಖ್ಯೆಯಲ್ಲಿ ಧರ್ಮ ರಕ್ಷಣೆಗೆ ಜನ ಸೇರಿದ್ದು ಸಂತೋಷವಾಗಿದೆ ಎಂದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಪ್ರತಿಭಟನೆ ನಿಲ್ಲಿಸಲಾಯಿತು.

ಮೈಸೂರಿನಲ್ಲಿ (Mysuru) ಧರ್ಮಸ್ಥಳ ಉಳಿಸಿ ಎಂದು ಭಕ್ತರು ಪ್ರತಿಭಟನಾ ಜಾಥಾ ನಡೆಸಿದರು. ಮೈಸೂರು ಹಾಲು ಒಕ್ಕೂಟ ದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಜಾಥಾ ನಡೆಸಲಾಯಿತು.

ದಾವಣಗೆರೆಯಲ್ಲಿ (Davanagere) ಧರ್ಮಸ್ಥಳ ಕ್ಷೇತ್ರದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಖಂಡಿಸಿ ಬೃಹತ್ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಸಭೆ ನಡೆಸಿ, ಆಗಸ್ಟ್ 20 ರಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ಪ್ರತಿಭಟನೆಗೆ ಭಕ್ತರು ನಿರ್ಧರಿಸಿದ್ದಾರೆ. ಇದನ್ನೂ ಓದಿ: 6 ಗಂಟೆ ಕಾರ್ಯಾಚರಣೆ – 22 ಅಡಿ ಉದ್ದ, 8 ಅಡಿ ಅಗಲ, 18 ಅಡಿ ಆಳದ ಗುಂಡಿ ತೋಡಿದರೂ ಸಿಗದ ಮೂಳೆ

TAGGED:ChikkamagalurudavanageredharmasthalaDharmasthala Mass Burial CasegadagKalaburagiKoppalmysurutumakuru
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
4 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
5 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
6 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
6 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?