Connect with us

ಆಕಸ್ಮಿಕ ಬೆಂಕಿ ಅವಘಡ – ಸ್ಟೇಷನರಿ ಅಂಗಡಿ ಬೆಂಕಿಗಾಹುತಿ

ಆಕಸ್ಮಿಕ ಬೆಂಕಿ ಅವಘಡ – ಸ್ಟೇಷನರಿ ಅಂಗಡಿ ಬೆಂಕಿಗಾಹುತಿ

ಹುಬ್ಬಳ್ಳಿ: ಆಕಸ್ಮಿಕ ಬೆಂಕಿ ಅವಘಡದಿಂದ ಸ್ಟೇಷನರಿ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಜಿಲ್ಲೆಯ ವಿದ್ಯಾನಗರದಲ್ಲಿನ ರೂಪಾ ಸ್ಟೇಷನರಿ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.

ಇಂದು ಬೆಳಗ್ಗೆ ವಿದ್ಯಾನಗರದಲ್ಲಿರುವ ರೂಪಾ ಸ್ಟೇಷನರಿ ಶಾಪ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸ್ಟೇಷನರಿ ಅಂಗಡಿಯಲ್ಲಿದ್ದ ಜೆರಾಕ್ಸ್ ಮಷಿನ್, ಗಿಫ್ಟ್ ಐಟಂ, ಮೊಬೈಲ್ ಹಾಗೂ ಡಿಟಿಎಚ್ ಕರೆನ್ಸಿಗಳ ಕಾರ್ಡ್‍ಗಳು, ಪುಸ್ತಕಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ. ಇದನ್ನೂ ಓದಿ: ಸೋಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ – ವಾರ್ಡ್ ಬಾಯ್ ಅರೆಸ್ಟ್

ಬೆಂಕಿ ತೀವ್ರವಾಗುತ್ತಿದ್ದಂತೆ ದಟ್ಟ ಹೊಗೆ ಆವರಿಸಿದ ಪರಿಣಾಮ ಸುತ್ತಮುತ್ತಲಿನ ಜನರು ಕೆಲ ಕಾಲ ಆತಂಕಕ್ಕೆ ಒಳಗಾಗಿದ್ದರು. ಬಳಿಕ ಅಗ್ನಿ ಅವಘಡದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳ ಬೆಂಕಿ ನಂದಿಸುವಲ್ಲಿ ಯಶ್ವಸಿಯಾಗಿದೆ.

ಅಗ್ನಿ ಅವಘಡದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂದು ತಿಳಿದುಬಂದಿಲ್ಲ. ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement