ಧಾರವಾಡ: ಧಾರವಾಡ ಕರ್ನಾಟಕ ವಿವಿ ಬಳಿಯ ಶ್ರೀನಗರ ವೃತ್ತದಲ್ಲಿ ರಾತ್ರೋರಾತ್ರಿ ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಮಧ್ಯಾಹ್ನ ಸ್ಥಳಕ್ಕೆ ಬಂದ ಪಾಲಿಕೆ ಅಧಿಕಾರಿಗಳು, ಪೊಲೀಸರ ಸಮ್ಮುಖದಲ್ಲಿ ಬಸವಣ್ಣನ ಮೂರ್ತಿ ತೆರವು ಗೊಳಿಸಿದರು.
ಕಳೆದ ಎರಡು ದಿನಗಳ ಹಿಂದೆ ಪಾಲಿಕೆಯಿಂದ ಇದೇ ವೃತ್ತ ತೆರೆಯಲು ಪ್ರಯತ್ನ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಕೆಲವರು ಬಸವಣ್ಣನ ಮೂರ್ತಿ ತಂದು ಇಟ್ಟಿದ್ದರು. ಇದನ್ನೂ ಓದಿ: ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೃಷಿ ಚಟುವಟಿಕೆ ಆರಂಭಿಸಿದ ರೈತ
ಈ ವಿಚಾರವಾಗಿ ಸ್ಥಳೀಯ ಶಾಸಕ ಅರವಿಂದ ಬೆಲ್ಲದ್ ಮಾತನಾಡಿದ್ದು, ಬಸವಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಿದ ವಿಚಾರ ಸ್ಥಳೀಯರು ತಿಳಿಸಿದ್ದಾರೆ. ಆದರೆ ಪಾಲಿಕೆಯಿಂದ ತೆರವು ಮಾಡಿದ ವಿಚಾರ ತಿಳಿದಿರಲಿಲ್ಲ. ಹೀಗಾಗಿ ಅದರ ಮಾಹಿತಿ ಪಡೆಯುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ತಮಿಳುನಾಡು ಬಿಜೆಪಿ ನಾಯಕ ಕೆ ಅಣ್ಣಾಮಲೈಗೆ ವೈ ಶ್ರೇಣಿ ಭದ್ರತೆ