Bengaluru RuralDistrictsKarnatakaLatestMain Post
ಸ್ಟೇರಿಂಗ್ ಕಟ್ ಆಗಿ ಕೆರೆಗೆ ಉರುಳಿದ ಗೂಡ್ಸ್ ವಾಹನ

ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನವೊಂದರ ಸ್ಟೇರಿಂಗ್ ಲಾಕ್ ಕಟ್ ಆಗಿ ಕೆರೆಗೆ ಉರುಳಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ ತುಮಕೂರು ಮಾರ್ಗದಿಂದ ಬೆಂಗಳೂರು ಕಡೆ ಬರುವ ವೇಳೆ ಈ ಅವಗಢ ಸಂಭವಿಸಿದೆ. ವಾಹನದಲ್ಲಿ ನಾಲ್ಕು ಜನ ಪ್ರಯಾಣಿಸುತ್ತಿದ್ದು, ಲಾರಿ ಪಲ್ಟಿಯಾಗಿ ಕೆರೆಯ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಕ್ಲೀನರ್ ಪ್ರಕಾಶ್‍ಗೆ ಕಾಲು ಮುರಿತವಾಗಿ ಆಸ್ಪತ್ರೆ ದಾಖಲು ಮಾಡಲಾಗಿದ್ದು, ಉಳಿದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಕಿಲೋಮೀಟರ್ ದೂರ ಟ್ರಾಫಿಕ್ ಜಾಂ ಉಂಟಾಗಿತ್ತು.