ಬೆಳಗಾವಿ: ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ (CA Site) ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಕಾಲಮಿತಿಯನ್ನು 5 ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ಮಾಡಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ (Byrathi Suresh) ಭರವಸೆ ನೀಡಿದ್ದಾರೆ.
ವಿಧಾನಪರಿಷತ್ತಿನಲ್ಲಿಂದು ಬಿಜೆಪಿ ಸದಸ್ಯ (BJP Member) ಡಿ.ಎಸ್ ಅರುಣ್ ಮತ್ತು ಇತರರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರಿಸಿದರು. ಸಿಎ ನಿವೇಶನ ಪಡೆದು 3 ವರ್ಷಗಳ ಒಳಗೆ ಉದ್ದೇಶಿತ ಕಾರ್ಯಕ್ಕಾಗಿ ಕಟ್ಟಡ ನಿರ್ಮಾಣ ಆರಂಭಿಸಬೇಕೆಂಬ ನಿಯಮವನ್ನ ಸಡಿಲಿಸಬೇಕೆಂಬ ಒತ್ತಾಯವಿದೆ. ಈ ಹಿನ್ನೆಲೆಯಲ್ಲಿ ನಿಯಮ ಸಡಿಲಿಸಿ 5 ವರ್ಷಗಳಿಗೆ ಹೆಚ್ಚಿಸುವ ಬಗ್ಗೆ ಗಂಭೀರ ಪ್ರಯತ್ನ ನಡೆಸಲಾಗುತ್ತದೆ ಎಂದು ಸದನಕ್ಕೆ ಭರವಸೆ ನೀಡಿದರು.
ಜೊತೆಗೆ ಯಾವುದೇ ಕಾರಣಕ್ಕೂ ನಿವೇಶನಕ್ಕೆ ಶುದ್ಧ ಕ್ರಯಪತ್ರ ನೀಡಲು ಸಾಧ್ಯವಿಲ್ಲ. ಎಸ್ಸಿ ಮತ್ತು ಎಸ್‌ಟಿ ಸಮುದಾಯಕ್ಕೆ ನೀಡಲಾಗುತ್ತಿರುವ ಮೀಸಲಾತಿಯನ್ನ ಕಡಿಮೆ ಮಾಡುವ ಪ್ರಶ್ನೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 2023ರ ಚುನಾವಣೆ ವೇಳೆ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ಆರೋಪ – ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ನೋಟಿಸ್
ಮುಂದುವರಿದು.. ನಗರಾಭಿವೃದ್ಧಿ ಪ್ರಾಧಿಕಾರಗಳು ನೀಡಿರುವ ಸಿಎ ನಿವೇಶನಗಳಿಗೆ 30 ವರ್ಷಗಳ ನಂತರ ಗುತ್ತಿಗೆ ಅವಧಿ ನವೀಕರಣ ಮಾಡುವಾಗ 30 ವರ್ಷಗಳ ಹಿಂದಿನ ದರವನ್ನೇ ನಿಗದಿಪಡಿಸಲು ಸಾಧ್ಯವಿಲ್ಲ. ಆದರೆ, ಎಸ್ಆರ್ ದರವನ್ನ ಕಡಿಮೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ರಾಷ್ಟ್ರವನ್ನು ಒಗ್ಗೂಡಿಸಿದ್ದರಿಂದ ಜನರು ವಂದೇ ಮಾತರಂಗೆ ಋಣಿಯಾಗಿರಬೇಕು: ಮೋದಿ


