ಅಗ್ರಸ್ಥಾನದಿಂದ ಜಾರಿದ ಕೊಹ್ಲಿ -ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನಲ್ಲಿ ಭಾರತ ನಂ.1

Public TV
2 Min Read
Virat 1

ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ರ‍್ಯಾಂಕಿಂಗ್ ಪಟ್ಟಿಯ ಅಗ್ರಸ್ಥಾನದಿಂದ ಕೆಳಗೆ ಇಳಿದಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಇದು ಕೊಹ್ಲಿ ಅವರ ನಾಲ್ಕನೇ ಗೋಲ್ಡನ್ ಡಕೌಟ್ ಆಗಿದೆ. ಮೊದಲ ಟೆಸ್ಟ್ ಇನ್ನಿಂಗ್ಸ್ ನಲ್ಲಿ 10 ಬೌಂಡರಿ ಸೇರಿದಂತೆ 76 ರನ್ ಕಲೆ ಹಾಕಿದ್ದರು. ಹೀಗಾಗಿ ಕೊಹ್ಲಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ.

ICC

ಆ್ಯಶನ್ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿರುವ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಐಸಿಸಿ ಬಿಡುಗಡೆ ಮಾಡಿರುವ ನೂತನ ಟೆಸ್ಟ್ ಬ್ಯಾಟ್ಸ್‌ಮನ್ ಗಳ ಪಟ್ಟಿಯಲ್ಲಿ ಸ್ಟೀವ್ ಸ್ಮಿತ್ 904 ಅಂಕದೊಂದಿಗೆ ಟಾಪ್‍ನಲ್ಲಿದ್ದಾರೆ. ವಿರಾಟ್ ಕೊಹ್ಲಿ 903 ಅಂಕದಿಂದ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ನ್ಯೂಜಿಲೆಂಡ್‍ನ ಕೇನ್ ವಿಲಿಯಮ್ಸನ್ ಮೂರನೇ ಸ್ಥಾನದಲ್ಲಿದ್ದು 878 ಅಂಕ ಹೊಂದಿದ್ದಾರೆ. ಅಜಿಂಕ್ಯ ರಹಾನೆ ಟಾಪ್ 10 ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ರಹಾನೆ 4 ಸ್ಥಾನ ಏರಿಕೆ ಕಂಡು ಏಳನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಬುಮ್ರಾ ನಂಬರ್ 3ನೇ ಸ್ಥಾನಕ್ಕೆ ಏರಿದ್ದಾರೆ. ಬುಮ್ರಾ 835 ಅಂಕ ಪಡೆದರೆ ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ 908 ಅಂಕಗಳಿಸಿ ಮೊದಲ ಸ್ಥಾನ ಪಡೆದಿದ್ದಾರೆ. 764 ಅಂಕ ಗಳಿಸಿರುವ ರವೀಂದ್ರ ಜಡೇಜಾ 11ನೇ ಸ್ಥಾನಕ್ಕೆ ಇಳಿದಿದ್ದು, ದಕ್ಷಿಣ ಆಫ್ರಿಕಾದ ಕಗಿಸೋ ರಬಡಾ 851 ಅಂಕ ಪಡೆಯುವ ಮೂಲಕ ಎರಡನೇ ಸ್ಥಾನ ಪಡೆದಿದ್ದಾರೆ.

Kohli

ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಡಿಸೆಂಬರ್ 2015ರಿಂದಲೂ ಟೆಸ್ಟ್ ಬ್ಯಾಟ್ಸ್‌ಮನ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು. ಆದರೆ ಬಾಲ್ ಟ್ಯಾಂಪರಿಂಗ್ ಪ್ರಕರಣದಿಂದಾಗಿ ಸ್ಮಿತ್ ಒಂದು ವರ್ಷದವರೆಗೂ ನಿಷೇಧಕ್ಕೆ ಗುರಿಯಾಗಿದ್ದರು. ಇಂಡಿಯಾ ವಿರಾಟ್ ಕೊಹ್ಲಿ ಆಗಸ್ಟ್ 2018ರ ಬಳಿಕ ಸ್ಮಿತ್ ಹಿಂದಿಕ್ಕಿ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದರು.

ಬಾಲ್ ಟ್ಯಾಂಪರಿಂಗ್‍ನಿಂದ ನಿಷೇಧದಲ್ಲಿದ್ದ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ತಂಡಕ್ಕೆ ಮರಳಿದ್ದು, ಮೊದಲ ಸರಣಿಯಲ್ಲೇ ಎರಡು ಶತಕ ಸಿಡಿಸಿ ಟೆಸ್ಟ್ ರ್ಯಾಂಕಿಂಗ್‍ನಲ್ಲಿ ಮತ್ತೆ ಅಗ್ರಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಸ್ಮಿತ್‍ರನ್ನು ಹಿಂದಿಕ್ಕಲು ಕೊಹ್ಲಿ ಅಕ್ಟೋಬರ್ ವರೆಗೂ ಕಾಯಬೇಕಿದೆ. ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಟೀಂ ಇಂಡಿಯಾ ಅಕ್ಟೋಬರ್ 02ರಿಂದ ಟೆಸ್ಟ್ ಸರಣಿ ಆಡಲಿದೆ.

ವೆಸ್ಟ್ ಇಂಡೀಸ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದುಬೀಗಿದ ಭಾರತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನಲ್ಲಿ ಅಗ್ರಸ್ಥಾನಕ್ಕೇರಿದೆ. ಅಷ್ಟೇ ಅಲ್ಲದೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಮಾಜಿ ನಾಯಕ ಎಂ.ಎಸ್.ಧೋನಿ ದಾಖಲೆ ಮುರಿದು ಇತಿಹಾಸ ರಚಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *