ಮುಂಬೈ: ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಸೋತ ಬೆನ್ನಲ್ಲೇ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಆಸೀಸ್ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ (Steve Smith) ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳಿದ್ದಾರೆ. ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ಭಾರತ ವಿರುದ್ಧದ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದರು. ಆಸ್ಟ್ರೇಲಿಯಾ ಪರ 73 ರನ್ ಗಳಿಸಿ ಸೋಲಿನ ಹಾದಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದರು. ಇದನ್ನೂ ಓದಿ: ಸಚಿನ್ ದಾಖಲೆ ಬ್ರೇಕ್ – ವಿಶ್ವದಾಖಲೆ ಬರೆದ ಕೊಹ್ಲಿ
Advertisement
Advertisement
35 ವಯಸ್ಸಿನ ಸ್ಮಿತ್ 170 ಏಕದಿನ ಪಂದ್ಯಗಳಲ್ಲಿ ಆಡಿದ್ದು, 43.28 ಸರಾಸರಿಯಲ್ಲಿ 5800 ರನ್ ಗಳಿಸಿದ್ದಾರೆ. 12 ಶತಕಗಳು ಮತ್ತು 35 ಅರ್ಧಶತಕಗಳನ್ನು ಬಾರಿಸಿದ್ದಾರೆ. ಆಸ್ಟ್ರೇಲಿಯಾ ಪರ ಏಕದಿನ ಪಂದ್ಯಗಳಲ್ಲಿ 12 ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿ ಹೊರಹೊಮ್ಮಿದ್ದಾರೆ. 2016 ರಲ್ಲಿ ನ್ಯೂಜಿಲೆಂಡ್ ವಿರುದ್ಧ 164 ರನ್ ಗಳಿಸಿದ್ದು ಅವರ ಅತ್ಯಧಿಕ ಸ್ಕೋರ್. ಲೆಗ್ ಸ್ಪಿನ್ನಿಂಗ್ ಆಲ್‌ರೌಂಡರ್ ಆಗಿ ಪಾದಾರ್ಪಣೆ ಮಾಡಿದ ಅವರು 28 ವಿಕೆಟ್‌ಗಳನ್ನು ಪಡೆದಿದ್ದಾರೆ. 90 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.
Advertisement
ಕ್ರಿಕೆಟ್ ಆಸ್ಟ್ರೇಲಿಯಾ ಮಾಧ್ಯಮ ಪ್ರಕಟಣೆಯ ಪ್ರಕಾರ, ಸೆಮಿಫೈನಲ್ ಸೋಲಿನ ನಂತರ ಸ್ಮಿತ್ ತಮ್ಮ ತಂಡದ ಆಟಗಾರರಿಗೆ ‘ಏಕದಿನ ಪಂದ್ಯಗಳಿಂದ ನಿವೃತ್ತರಾಗುವುದಾಗಿ’ ಹೇಳಿದ್ದರು. ಸ್ಮಿತ್ ಟೆಸ್ಟ್ ಕ್ರಿಕೆಟ್ ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಲಭ್ಯವಿರಲಿದ್ದಾರೆ. ಇದನ್ನೂ ಓದಿ: ಬಲಿಷ್ಠ ಆಸ್ಟ್ರೇಲಿಯಾ ಬಗ್ಗು ಬಡಿದು ಫೈನಲ್ ಪ್ರವೇಶಿಸಿದ ಭಾರತ
Advertisement
ಸ್ಮಿತ್ 2015 ಮತ್ತು 2023 ರಲ್ಲಿ ಆಸ್ಟ್ರೇಲಿಯಾದ ಏಕದಿನ ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಮೈಕೆಲ್ ಕ್ಲಾರ್ಕ್ ನಿವೃತ್ತರಾದ ನಂತರ ಸ್ಮಿತ್ 50 ಓವರ್‌ಗಳ ತಂಡದ ನಾಯಕತ್ವ ವಹಿಸಿಕೊಂಡರು. ಅವರು 64 ಪಂದ್ಯಗಳಲ್ಲಿ ಆಸ್ಟ್ರೇಲಿಯಾವನ್ನು ಮುನ್ನಡೆಸಿ, ಆ ಪೈಕಿ 32 ಪಂದ್ಯಗಳಲ್ಲಿ ಗೆದ್ದರು ಮತ್ತು 28 ಪಂದ್ಯಗಳಲ್ಲಿ ಸೋತರು. ನಾಲ್ಕು ಪಂದ್ಯಗಳಲ್ಲಿ ಯಾವುದೇ ಫಲಿತಾಂಶವಿಲ್ಲ. ಗಾಯಗೊಂಡಿದ್ದ ಪ್ಯಾಟ್ ಕಮ್ಮಿನ್ಸ್ ಬದಲಿಗೆ ಚಾಂಪಿಯನ್ಸ್ ಟ್ರೋಫಿಗೆ ಅವರು ಮಧ್ಯಂತರ ಆಧಾರದ ಮೇಲೆ ನಾಯಕತ್ವ ವಹಿಸಿಕೊಂಡಿದ್ದರು.