ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧದ ಹನಿಟ್ರ್ಯಾಪ್ ಹಾಗೂ ಸ್ಟಿಂಗ್ ಕಾರ್ಯಾಚರಣೆ (Sting Operation) ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಪಿಆರ್ಒ ಪ್ರಜ್ವಲ್ ಪ್ರಸಾದ್ ಇಂದು ಸಿಸಿಬಿ ಸೈಬರ್ ಕ್ರೈಮ್ ಪೊಲೀಸ್ (CCB Cyber Crime Police) ಠಾಣೆಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ.
ದೆಹಲಿಯ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪ್ರಕರಣದ ಪ್ರಮುಖ ಆರೋಪಿ ರಿತೇಶ್ ಪಾಂಡೆಗೆ ಮೊಬೈಲ್ ಹಸ್ತಾಂತರಿಸಿದ ಆರೋಪ ಪ್ರಜ್ವಲ್ ವಿರುದ್ಧ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸೈಬರ್ ಕ್ರೈಮ್ ಪೊಲೀಸರು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದರು. ಇದನ್ನೂ ಓದಿ: ಆಂಧ್ರದ ಶಾಲಾ ಬಾಲಕಿ ಕೊಲೆ ಯತ್ನ ಪ್ರಕರಣ; ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ, ಆರೋಗ್ಯದಲ್ಲಿ ಸುಧಾರಣೆ
ಇತ್ತೀಚೆಗೆ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಪ್ರಜ್ವಲ್ ಪ್ರಸಾದ್ ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದರು. ಆದರೆ, ಪ್ರಜ್ವಲ್ ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದು, ಇದೀಗ ಪೊಲೀಸರ ನೋಟಿಸ್ ಬೆನ್ನಲ್ಲೇ ವಿಚಾರಣೆಗೆ ಸಿಸಿಬಿ ಮುಂದೆ ಹಾಜರಾಗಿದ್ದಾರೆ. ಸದ್ಯ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ತೀವ್ರಗೊಳಿಸಿದ್ದಾರೆ. ಇದನ್ನೂ ಓದಿ: ಹಾಸನಾಂಬ ಜಾತ್ರೆ | 3 ಲಕ್ಷದ ಚಿನ್ನದ ಬಳೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
