ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ (Stock Trading Scam ) ಮಾಡಿದ್ರೆ ಹೆಚ್ಚು ಲಾಭಗಳಿಸಬಹುದು ಎಂಬ ಆಸೆ ತೋರಿಸಿ ಮಹಿಳಾ ಟೆಕ್ಕಿಗೆ 93 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ದಾವಣಗೆರೆಯಲ್ಲಿ (Davanagere) ನಡೆದಿದೆ.
ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯ 38 ವರ್ಷದ ಟೆಕ್ಕಿಗೆ ಲಾಭದ ಆಸೆ ತೋರಿಸಿ ವಂಚಿಸಲಾಗಿದೆ. ವಿಐಪಿ ರುದ್ರಾ ಷೇರ್ಸ್ ಎಂದು ವಾಟ್ಸಾಪ್ ಗ್ರೂಪ್‌ನಲ್ಲಿ ಬಂದಿದ್ದ ಸಂದೇಶವನ್ನು ನಂಬಿ ಮಹಿಳೆ ಹಣ ಹೂಡಿಕೆ ಮಾಡಿದ್ದರು. ಹೆಚ್ಚಿನ ಲಾಭ ಪಡೆಯುವ ಆಸೆಯಿಂದ ಹಂತಹಂತವಾಗಿ 93 ಲಕ್ಷ ರೂ. ಹೂಡಿಕೆ ಮಾಡಿದ್ದರು. ಇದನ್ನೂ ಓದಿ: ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ – 2 ಬಸ್, ಆಟೋ ಜಖಂ
ಲಾಭಾಂಶ ಇರಲಿ ಹೂಡಿಕೆ ಮಾಡಿದ ಹಣ ಕೂಡ ವಾಪಸ್ ಬಾರದೇ ಇದ್ದಾಗ ಮಹಿಳೆಗೆ ವಂಚನೆಗೆ ಒಳಗಾಗಿದ್ದು ಅರಿವಾಗಿದೆ. ಈ ಸಂಬಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಗರ್ಭಿಣಿ ಫೋಟೊ ಶೂಟ್ ವೇಳೆ ದುರಂತ – ನೀರಿನ ತೊಟ್ಟಿಗೆ ಬಿದ್ದು ಮೊದಲ ಮಗು ಸಾವು

