ಚಾಮರಾಜನಗರ: ಹೊಟ್ಟೆ ನೋವು ತಾಳಲಾರದೆ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು (Nursing Student) ನೇಣಿಗೆ ಶರಣಾಗಿರುವುದು ಕೊಳ್ಳೇಗಾಲ (Kollegala) ತಾಲೂಕಿನ ಹೊಸ ಹಂಪಾಪುರ ಗ್ರಾಮದಲ್ಲಿ ನಡೆದಿದೆ.
ನೇಣಿಗೆ ಶರಣಾದ ಯುವತಿಯನ್ನು ಪ್ರಿಯಾಂಕ ಎಂದು ಗುರುತಿಸಲಾಗಿದೆ. ಪ್ರಿಯಾಂಕ ಅಂತಿಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಳು. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಇದೇ ಕಾರಣಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಈ ಸಂಬಂಧ ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

