ಚಾಮರಾಜನಗರ: ಬಸವ ಜಯಂತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಕಲ್ಲು ತೂರಾಟವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.
ಗುಂಡ್ಲುಪೇಟೆ ಪಟ್ಟಣದ ಚಾಮರಾಜನಗರ ರಸ್ತೆಯಲ್ಲಿ ಮೆರವಣಿಗೆ ಹೋಗುವ ವೇಳೆ ಮೆರವಣಿಗೆಯಲ್ಲಿ ಪಾಲ್ಗೊಂಡವರು ಧಾರ್ಮಿಕ ಸ್ಥಳದ ಮುಂದೆ ಪಟಾಕಿ ಸಿಡಿಸಿದ್ದಾರೆ. ಈ ವೇಳೆ ಇನ್ನೊಂದು ಗುಂಪು ಮೆರವಣಿಗೆಯಲ್ಲಿ ಪಾಲ್ಗೊಂಡವರ ಮೇಲೆ ಖಾರದ ಪುಡಿ ಎರಚಿದೆ. ಇದರಿಂದ ಉದ್ವಿಗ್ನಗೊಂಡ ಮೆರವಣಿಗೆಯಲ್ಲಿ ಪಾಲ್ಗೊಂಡ ಯುವಕರು ಇನ್ನೊಂದು ಕೋಮಿನ ಹೋಟೆಲ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
Advertisement
ಗುಂಪು ಘರ್ಷಣೆಯಿಂದಾಗಿ ಗುಂಡ್ಲುಪೇಟೆ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದನ್ನು ಹತೋಟಿ ತರಲು ಪೊಲೀಸರು ಎರಡು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ವಶಪಡಿಸಿ ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿ ಲಭಿಸಿದೆ.