ಮೈಸೂರು: ಮುಸ್ಲಿಂ ವೇಷದಲ್ಲಿ ಆರ್‌ಎಸ್‍ಎಸ್ (RSS) ಮತ್ತು ಬಿಜೆಪಿ (BJP) ಕಾರ್ಯಕರ್ತರು ಬಂದು ಉದಯಗಿರಿ ಪೊಲೀಸ್ ಠಾಣೆ (Udayagiri Police Station) ಮೇಲೆ ಕಲ್ಲು ತೂರಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ (M. Lakshman) ಹೊಸ ಬಾಂಬ್ ಸಿಡಿಸಿದ್ದಾರೆ.
ಮೈಸೂರಿನಲ್ಲಿ (Mysuru) `ಪಬ್ಲಿಕ್ ಟಿವಿ’ ಜೊತೆ ಅವರು ಮಾತನಾಡಿದರು. ಈ ವೇಳೆ, ಕೋಮು ಗಲಭೆ ಮಾಡಲು 300 ಜನ ಆರ್‌ಎಸ್‍ಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಉದಯಗಿರಿಗೆ ಬಂದಿದ್ದಾರೆ. ಬಳಿಕ ಮುಸ್ಲಿಂ ಯುವಕರು ಸೇರಿದಾಗ ಅವರ ಜೊತೆ ಮುಸ್ಲಿಂ ವೇಷದಲ್ಲಿ ಬಂದು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೊಪಿಸಿದ್ದಾರೆ.
ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಗಲಾಟೆಯಾಗಿದೆ. ಗಲಾಟೆಯಲ್ಲಿ ಇನ್‍ಸ್ಪೆಕ್ಟರ್ ಸೇರಿ 14 ಕ್ಕೂ ಹೆಚ್ಚು ಪೊಲೀಸರಿಗೆ ಗಾಯವಾಗಿದೆ. ಎಸಿಪಿ ಶಾಂತ ಮಲ್ಲಪ್ಪ, ನಜರಬಾದ್ ಇನ್ಸ್ಪೆಕ್ಟರ್ ಮಹದೇವಸ್ವಾಮಿ ಸೇರಿ 14 ಮಂದಿಗೆ ಕಲ್ಲೇಟು ಬಿದ್ದಿದೆ. ಇದನ್ನೂ ಓದಿ: ಮೈಸೂರು: ಅವಹೇಳನಕಾರಿ ಪೋಸ್ಟ್ ವಿಚಾರಕ್ಕೆ ಠಾಣೆ ಮೇಲೆಯೇ ಕಲ್ಲು ತೂರಾಟ – 14 ಪೊಲೀಸರಿಗೆ ಗಾಯ
ಕಲ್ಲೇಟಿನಿಂದ ಗಾಯಗೊಂಡವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 10 ಕ್ಕೂ ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ಅವಹೇಳನಕಾರಿ ಪೋಸ್ಟ್ ಹಾಕಿದ್ದ ಕಲ್ಯಾಣಗಿರಿಯ ಸುರೇಶ್ ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ್ದಾರೆ. ಈ ಬಗ್ಗೆ ಪೋಲೀಸ್ ಅಧಿಕೃತ ಫೇಸ್‍ಬುಕ್‍ನಲ್ಲಿ ಮಾಹಿತಿಯನ್ನು ಮೈಸೂರು ನಗರ ಪೊಲೀಸರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಮತಾಂಧರ ವಿರುದ್ಧದ ಪ್ರಕರಣ ವಾಪಸ್‌ನಿಂದ ಪೊಲೀಸರ ಮೇಲೆ ಹಲ್ಲೆ ಮಾಡುವ ಧೈರ್ಯ: ಆರ್.ಅಶೋಕ್ ಕಿಡಿ